India vs Pakistan Cricket News: ಈ ವರ್ಷ ಭಾರತದಲ್ಲಿ ಏಕದಿನ ವಿಶ್ವಕಪ್‌ ನಡೆಯಲಿದೆ. ಅಕ್ಟೋಬರ್ 5 ರಿಂದ ನವೆಂಬರ್ 19 ರವರೆಗೆ ನಡೆಯಲಿರುವ ಈ ಪಂದ್ಯಾವಳಿಗೆ ಈಗಾಗಲೇ ಸಿದ್ಧತೆಗಳು ನಡೆಯುತ್ತಿವೆ. ಐಸಿಸಿ ಏಕದಿನ ವಿಶ್ವಕಪ್‌ನ ವೇಳಾಪಟ್ಟಿಯನ್ನು ಸಹ ಬಿಡುಗಡೆ ಮಾಡಿದೆ. ಆದರೆ ಇಲ್ಲಿಯವರೆಗೆ ಪಾಕಿಸ್ತಾನ ವಿಶ್ವಕಪ್‌ ಆಡಲು ಭಾರತಕ್ಕೆ ಬರುತ್ತದೆಯೇ ಅಥವಾ ಇಲ್ಲವೇ ಎಂಬುದು ಪ್ರಶ್ನೆಯಾಗಿಯೇ ಉಳಿದಿದೆ.


COMMERCIAL BREAK
SCROLL TO CONTINUE READING

ಈ ನಡುವೆ ಪಾಕಿಸ್ತಾನದ ಕ್ರೀಡಾ ಸಚಿವರ ಹೇಳಿಕೆ ಸಂಚಲನ ಮೂಡಿಸಿದೆ. ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮತ್ತು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ನಡುವಿನ ಸಂಬಂಧಗಳು ಉತ್ತಮವಾಗಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಪಾಕಿಸ್ತಾನ ಪದೇ ಪದೇ ವಿಶ್ವಕಪ್ ಬಗ್ಗೆ ಚಿತ್ರ ವಿಚಿತ್ರ ಹೇಳಿಕೆಗಳನ್ನು ನೀಡುತ್ತಿದೆ.


ಇದನ್ನೂ ಓದಿ: ಇನ್ನೇಕೆ 7 ಸೀಟರ್… ಬಂದೇಬಿಡ್ತು 10 ಸೀಟರ್ ಕಾರು: ಹಿಂದೆಂದೂ ಕಂಡಿರದ ಅದ್ಭುತ ಫೀಚರ್: ಬೆಲೆಯೂ ಭಾರೀ ಅಗ್ಗ!


ವಿಶ್ವಕಪ್‌ ಗೂ ಮುನ್ನ ಏಷ್ಯಾಕಪ್‌ ಆಯೋಜಿಸಲಾಗುತ್ತಿದೆ. ಈ ವರ್ಷದ ಏಷ್ಯಾಕಪ್ ಪಾಕಿಸ್ತಾನದಲ್ಲಿ ನಡೆಯಬೇಕಿತ್ತು. ಆದರೆ ಭಾರತವು ಪಾಕಿಸ್ತಾನಕ್ಕೆ ಭೇಟಿ ನೀಡಲು ನಿರಾಕರಿಸಿತ್ತು. ಈ ಕಾರಣದಿಂದ ACC ಪಂದ್ಯಾವಳಿಯನ್ನು ಹೈಬ್ರಿಡ್ ಮಾದರಿಯಲ್ಲಿ ನಡೆಸಲು ನಿರ್ಧರಿಸಿತು. ಈಗ ಈ ಟೂರ್ನಿಯ ಕೇವಲ 4 ಪಂದ್ಯಗಳು ಪಾಕಿಸ್ತಾನದಲ್ಲಿ ನಡೆಯುತ್ತಿದ್ದು, ಉಳಿದ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಯೋಜಿಸಲಾಗಿದೆ. ಈ ಬಗ್ಗೆ ಪಾಕಿಸ್ತಾನ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವಂತಿದೆ. ಈ ಹಿನ್ನೆಲೆಯಲ್ಲಿ ಅಲ್ಲಿನ ಮುಖಂಡರು ಹಾಗೂ ಆಡಳಿತ ಮಂಡಳಿ ಆಗೊಮ್ಮೆ ಈಗೊಮ್ಮೆ ವಿಚಿತ್ರ ಹೇಳಿಕೆ ನೀಡುತ್ತಿದ್ದಾರೆ. ಇದೀಗ ಪಾಕಿಸ್ತಾನದಲ್ಲಿರುವ ಕ್ರೀಡಾ ಸಚಿವ ಎಹ್ಸಾನ್ ಮಜಾರಿ ಅವರು ಏಷ್ಯಾಕಪ್‌ಗಾಗಿ ಭಾರತಕ್ಕೆ ಪಾಕಿಸ್ತಾನಕ್ಕೆ ಬರಲು ಸಾಧ್ಯವಾಗದಿದ್ದರೆ, ಅವರ ದೇಶವೂ ವಿಶ್ವಕಪ್‌ ಗೆ ಭಾರತಕ್ಕೆ ಬರುವುದಿಲ್ಲ ಎಂದು ಹೇಳಿದ್ದಾರೆ.


ಇಂಡಿಯನ್ ಎಕ್ಸ್‌ಪ್ರೆಸ್‌ ಗೆ ನೀಡಿದ ಸಂದರ್ಶನದಲ್ಲಿ, ಪಾಕಿಸ್ತಾನದ ಕ್ರೀಡಾ ಸಚಿವರು ಮಾತನಾಡಿದ್ದು, “ಇದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ. ಏಕೆಂದರೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ನನ್ನ ಸಚಿವಾಲಯದ ಅಡಿಯಲ್ಲಿ ಬರುತ್ತದೆ. ಭಾರತವು ತನ್ನ ಏಷ್ಯಾಕಪ್ ಪಂದ್ಯಗಳನ್ನು ತಟಸ್ಥ ಸ್ಥಳಗಳಲ್ಲಿ ಆಡುವಂತೆ ಒತ್ತಾಯಿಸಿದರೆ, ನಾವು ಸಹ ಒತ್ತಾಯಿಸುತ್ತೇವೆ. ಭಾರತದಲ್ಲಿನ ನಡೆಯುವ ವಿಶ್ವಕಪ್ ಪಂದ್ಯಗಳಿಗೂ ಅದೇ ನಿರ್ಣಯವಾಗಲಿ” ಎಂದಿದ್ದಾರೆ.


ವಿಶ್ವಕಪ್‌ ನಲ್ಲಿ ಪಾಕಿಸ್ತಾನ ಭಾಗವಹಿಸುವ ವಿಚಾರವನ್ನು ಪರಿಶೀಲಿಸಲು ಪ್ರಧಾನಿ ಶೆಹಬಾಜ್ ಷರೀಫ್ ಅವರು ಸಮಿತಿಯನ್ನು ರಚಿಸಿರುವ ಸಮಯದಲ್ಲಿ ಪಾಕಿಸ್ತಾನದ ಕ್ರೀಡಾ ಸಚಿವರ ಈ ಹೇಳಿಕೆ ಬಂದಿದೆ. ಕ್ರೀಡಾ ಸಚಿವರೂ ಈ ಸಮಿತಿಯ ಭಾಗವಾಗಿದ್ದಾರೆ.


ಮಜಾರಿ ಮಾತು ಮುಂದುವರೆಸಿ, “ಈ ಸಮಿತಿಯ ನೇತೃತ್ವವನ್ನು ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ವಹಿಸಲಿದ್ದಾರೆ. ಅದರ ಭಾಗವಾಗಿರುವ 11 ಸಚಿವರಲ್ಲಿ ನಾನೂ ಒಬ್ಬ. ನಾವು ಸಮಸ್ಯೆಯನ್ನು ಚರ್ಚಿಸುತ್ತೇವೆ ಮತ್ತು ಪಿಸಿಬಿಯ ಮುಖ್ಯಸ್ಥರೂ ಆಗಿರುವ ಪ್ರಧಾನಿಯವರಿಗೆ ನಮ್ಮ ಶಿಫಾರಸುಗಳನ್ನು ನೀಡುತ್ತೇವೆ. ಪ್ರಧಾನಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆ” ಎಂದಿದ್ದಾರೆ.


ಇದನ್ನೂ ಓದಿ: 20 ವರ್ಷಗಳ ಬಳಿಕ ಈ ರಾಶಿಗೆ ಕೋಟ್ಯಾಧಿಪತಿ ಯೋಗ: ಉದ್ಯೋಗಿಗಳಿಗೆ ಬಡ್ತಿ- ಹೆಜ್ಜೆಹೆಜ್ಜೆಗೂ ಧನಲಕ್ಷ್ಮೀ ಜೊತೆ ನಿಲ್ಲುವಳು!


“ಈ ವರ್ಷ ನಡೆಯಲಿರುವ ವಿಶ್ವಕಪ್‌ ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಅಕ್ಟೋಬರ್ 15 ರಂದು ಅಹಮದಾಬಾದ್‌ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಆದರೆ ಅಹಮದಾಬಾದ್ ಸಮಸ್ಯೆಯಾಗಲಿದೆ ಎಂದು ನಾನು ಭಾವಿಸುವುದಿಲ್ಲ. ಈ ಹಿಂದೆ ಪಾಕಿಸ್ತಾನ ಅಲ್ಲಿ ಆಡಿದೆ. ಆದರೆ ಅದಕ್ಕೂ ಮೊದಲು ಭಾರತದಿಂದ ಸಕಾರಾತ್ಮಕ ಪ್ರತಿಕ್ರಿಯೆ ಬರಬೇಕು. ಭಾರತ ಪಾಕಿಸ್ತಾನದಲ್ಲಿ ಆಡಬೇಕು. ಝಕಾ ಅಶ್ರಫ್ (ಪಿಸಿಬಿ ಚೇರ್ಮನ್) ದಕ್ಷಿಣ ಆಫ್ರಿಕಾಕ್ಕೆ ಹೋಗಿದ್ದಾರೆ ಮತ್ತು ಏನು ನಿರ್ಧರಿಸುತ್ತಾರೆ ನೋಡೋಣ” ಎಂದು ಹೇಳಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ