ಅಕ್ಟೋಬರ್ 23 ರಂದು ಟಿ20 ವಿಶ್ವಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಅಮೋಘ ಪಂದ್ಯ ನಡೆಯಲಿದೆ. ಈ ಪಂದ್ಯಕ್ಕೆ ಸಂಬಂಧಿಸಿದಂತೆ ಹಲವು ಹಿರಿಯ ಕ್ರಿಕೆಟಿಗರ ಹೇಳಿಕೆಗಳು ಚರ್ಚೆಯಲ್ಲಿವೆ. ಇದೀಗ ಪಾಕಿಸ್ತಾನದ ಮಾಜಿ ವೇಗದ ಬೌಲರ್ ಆಕಿಬ್ ಜಾವೇದ್ ಟೀಂ ಇಂಡಿಯಾಗೆ ಸಂಬಂಧಿಸಿದಂತೆ ಪ್ರಚೋದನಾಕಾರೊ ಮಾತೊಂದನ್ನು ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: T20 World Cup 2022 : ಟಿ20 ವಿಶ್ವಕಪ್‌ ಮುಂಚೆಯೇ, ಈ 4 ಆಟಗಾರರು ಟೀಂ ಇಂಡಿಯಾದಿಂದ ಔಟ್!


ಕೆಲ ಸಮಯದಿಂದ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಅತ್ಯುತ್ತಮ ಫಾರ್ಮ್‌ನಲ್ಲಿ ಸಾಗುತ್ತಿದೆ. ಕಳೆದ ವರ್ಷದ ಟಿ20 ವಿಶ್ವಕಪ್‌ ಬಳಿಕ ಟೀಂ ಇಂಡಿಯಾ 8 ದ್ವಿಪಕ್ಷೀಯ ಸರಣಿಗಳನ್ನು ಗೆದ್ದಿದೆ. ಇದರ ಜೊತೆಗೆ ಅವರು ದಕ್ಷಿಣ ಆಫ್ರಿಕಾ ವಿರುದ್ಧ 2-2 ಡ್ರಾ ಸಾಧಿಸಿದ್ದಾರೆ. ಅದೇನೇ ಇದ್ದರೂ, ಟೀಂ ಇಂಡಿಯಾ ಉತ್ತಮ ಫಾರ್ಮ್‌ನಲ್ಲಿಲ್ಲ ಎಂದು ಪಾಕಿಸ್ತಾನದ ಮಾಜಿ ವೇಗಿ ಆಕಿಬ್ ಜಾವೇದ್ ಅಭಿಪ್ರಾಯಪಟ್ಟಿದ್ದಾರೆ.


ಪಾಕಿಸ್ತಾನದ ಮಾಜಿ ವೇಗದ ಬೌಲರ್ ಆಕಿಬ್ ಜಾವೇದ್, 'ಭಾರತದ ಸ್ಥಿತಿ ಏನಾಗಿದ್ದರೂ ಅದು ಸ್ವಲ್ಪ ಉತ್ತಮ ಸ್ಥಿತಿಯಲ್ಲಿಲ್ಲ. ಅವರು ಬ್ಯಾಟಿಂಗ್‌ನಲ್ಲಿ ಹೆಣಗಾಡುತ್ತಿದ್ದಾರೆ ಮತ್ತು ಬುಮ್ರಾ ಇಲ್ಲದೆ ಬೌಲಿಂಗ್ ಕೊಂಚ ಕಷ್ಟ. ಇದು ಶಾಹೀನ್ ಅಥವಾ ಹ್ಯಾರಿಸ್ ರೌಫ್ ಅವರ ಆಟದ ಸರದಿ. ಟೀಂ ಇಂಡಿಯಾದ ಮೇಲೆ ಇವರು ಭಾರೀ ಪರಿಣಾಮ ಬೀರಲಿದ್ದಾರೆ. ಈಗ ಟೀಂ ಇಂಡಿಯಾದ ಬೌಲರ್‌ಗಳು ಸಾಧಾರಣ ಮಧ್ಯಮ ವೇಗದ ಬೌಲರ್‌ಗಳು. ಇನ್ನು ಹಾರ್ದಿಕ್ ಪಾಂಡ್ಯ ಯಾವ ಸಮಯದಲ್ಲಾದರೂ ಆಟವನ್ನು ಬದಲಾಯಿಸಬಲ್ಲ ಆಟಗಾರ” ಎಂದು ಹೇಳಿದ್ದಾರೆ.


ಇದನ್ನೂ ಓದಿ: IND vs PAK : ಕ್ರಿಕೆಟ್ ಅಭಿಮಾನಿಗಳಿಗೆ ಬಿಗ್ ಶಾಕ್ : ವಿಶ್ವಕಪ್‌ನಲ್ಲಿ ಭಾರತ-ಪಾಕ್ ಪಂದ್ಯ ರದ್ದು!?


2021ರ ಕೊನೆಯ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ಟೀಂ ಇಂಡಿಯಾ 10 ವಿಕೆಟ್‌ಗಳ ಸೋಲು ಕಂಡಿತ್ತು. ಇದಾದ ಬಳಿಕ ಭಾರತ ತಂಡ ಗ್ರೂಪ್ ಹಂತದಲ್ಲೇ ಹೊರಬಿದ್ದಿತ್ತು. ಈ ಬಾರಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ ಪ್ರಶಸ್ತಿ ಗೆಲ್ಲುವ ಪ್ರಬಲ ಪೈಪೋಟಿ ನೀಡುತ್ತಿದೆ. ಭಾರತವು ಅನೇಕ ಸ್ಟಾರ್ ಆಟಗಾರರನ್ನು ಹೊಂದಿದೆ. 2007 ರಲ್ಲಿ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಭಾರತ ತನ್ನ ಏಕೈಕ ಪ್ರಶಸ್ತಿಯನ್ನು ಗೆದ್ದುಕೊಂಡಿತು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ