Hardik Pandya Video: ಗುಜರಾತ್ ಟೈಟಾನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಗುರುವಾರ ಪಂಜಾಬ್ ಕಿಂಗ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದ ವೇಳೆ ಗುಜರಾತ್ ಟೈಟಾನ್ಸ್ ನಾಯಕ ಹಾರ್ದಿಕ್ ಪಾಂಡ್ಯ ತಮ್ಮದೇ ತಂಡದ ಆಟಗಾರನ ಮೇಲೆ ರೇಗಾಡಿದರು. ತಮ್ಮದೇ ತಂಡದ ಆಟಗಾರನ ಜೊತೆ ಹಾರ್ದಿಕ್ ಪಾಂಡ್ಯ ಹಠಾತ್ ವರ್ತನೆ ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿದೆ. ಇನ್ನು ಹಾರ್ದಿಕ್ ಅವರ ಈ ವರ್ತನೆ ಬಗ್ಗೆ ಅಭಿಮಾನಿಗಳು ಟ್ವಿಟ್ಟರ್’ನಲ್ಲಿ ಪ್ರಶ್ನಿಸುತ್ತಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ:  CSK vs RR ಪಂದ್ಯದಲ್ಲಿ ಅಂಪೈರ್ ವಿರುದ್ಧ ಗಂಭೀರ ಆರೋಪ ಮಾಡಿದ ಅಶ್ವಿನ್! ಹುಟ್ಟಿಕೊಂಡ ಹೊಸ ವಿವಾದ ಏನು?


 


ಮೊಹಾಲಿಯಲ್ಲಿ ಗುರುವಾರ ನಡೆದ ಐಪಿಎಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಬ್ಯಾಟಿಂಗ್ ವೇಳೆ, ನಾಯಕ ಹಾರ್ದಿಕ್ ಪಾಂಡ್ಯ ಇನಿಂಗ್ಸ್‌’ನ 20 ನೇ ಓವರ್‌’ನಲ್ಲಿ ವೇಗದ ಬೌಲರ್ ಜೋಶುವಾ ಲಿಟಲ್‌’ಗೆ ಚೆಂಡನ್ನು ನೀಡಿದರು. ಈ ಓವರ್ ಆರಂಭಕ್ಕೂ ಮುನ್ನ ಗುಜರಾತ್ ಟೈಟಾನ್ಸ್ ತಂಡಕ್ಕೆ ನಿಗದಿತ ಸಮಯದಲ್ಲಿ ಓವರ್ ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ. ಈ ಮಧ್ಯೆ ಕೊನೆಯ ಓವರ್‌’ನ ಎರಡನೇ ಎಸೆತವನ್ನು ಬೌಲಿಂಗ್ ಮಾಡುವ ಮೊದಲು, ಡೀಪ್ ಕವರ್‌ನಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ಮೋಹಿತ್ ಶರ್ಮಾ ತಮ್ಮ ಸ್ಥಾನದಿಂದ ಸ್ವಲ್ಪ ದೂರದಲ್ಲಿ ನಿಂತಿದ್ದರು.


ಇದನ್ನು ಕಂಡ 29 ವರ್ಷದ ಹಾರ್ದಿಕ್ ಪಾಂಡ್ಯ, ತಮ್ಮ ಸ್ಥಾನದಿಂದ ಸ್ವಲ್ಪ ದೂರದಲ್ಲಿ ನಿಂತು ಡೀಪ್ ಕವರ್‌ನಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ಮೋಹಿತ್ ಶರ್ಮಾ ಮೇಲೆ ಕೋಪಗೊಂಡರು. ನಾಯಕ ಹಾರ್ದಿಕ್ ಪಾಂಡ್ಯ 34 ವರ್ಷದ ಆಟಗಾರ ಮೋಹಿತ್ ಶರ್ಮಾಗೆ ಸನ್ನೆ ಮಾಡುತ್ತಾ ಆಕ್ರಮಣಕಾರಿ ಸ್ವರದಲ್ಲಿ ಏನೋ ಹೇಳುವಂತೆ ಕಂಡಿದೆ. ಹಾರ್ದಿಕ್ ಪಾಂಡ್ಯ ಅವರ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ವೈರಲ್ ಆಗುತ್ತಿದೆ.


Shahneel Gill: ‘ದಿಲ್’ ಗೆದ್ದಳು ಅಪ್ಸರೆ..! ಶುಭ್ಮನ್ ಗಿಲ್ ಸಹೋದರಿಯ ಮುಂದೆ ಬಾಲಿವುಡ್ ನಟಿಯರು ಝೀರೋ,,,


ಗುರುವಾರ ಇಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯದಲ್ಲಿ ಆರಂಭಿಕ ಆಟಗಾರ ಶುಭ್‌ಮನ್ ಗಿಲ್ ಅವರ ಅದ್ಭುತ ಬೌಲಿಂಗ್‌’ನ ನಂತರ 67 ರನ್‌’ಗಳ ಅರ್ಧಶತಕದ ನೆರವಿನಿಂದ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಪಂಜಾಬ್ ಕಿಂಗ್ಸ್ ವಿರುದ್ಧ ಆರು ವಿಕೆಟ್‌’ಗಳಿಂದ ಜಯಗಳಿಸಿತು. ಆರಂಭಿಕ ಹಿನ್ನಡೆ ಮತ್ತು ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್‌’ನ ಅತ್ಯುತ್ತಮ ಬೌಲಿಂಗ್‌’ನ ಮುಂದೆ ಪಂಜಾಬ್ ಕಿಂಗ್ಸ್ ತಂಡವು ತವರಿನಲ್ಲಿ ಎಂಟು ವಿಕೆಟ್‌ಗಳಿಗೆ 153 ರನ್ ಗಳಿಸಲಷ್ಟೇ ಶಕ್ತವಾಯಿತು. ಗಿಲ್ ಅವರ 49 ಎಸೆತಗಳ ಇನ್ನಿಂಗ್ಸ್‌ನಲ್ಲಿ ಏಳು ಬೌಂಡರಿ ಮತ್ತು ಒಂದು ಸಿಕ್ಸರ್‌ನ ಹೊರತಾಗಿಯೂ ಗುಜರಾತ್ ಟೈಟಾನ್ಸ್ 19.5 ಓವರ್‌ಗಳಲ್ಲಿ ಗೆಲ್ಲುವಲ್ಲಿ ಯಶಸ್ವಿಯಾಯಿತು.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.