PBKS vs MI, Qualifier 2: ಮಳೆಯಿಂದ ಪಂದ್ಯ ರದ್ದಾದರೆ ಯಾವ ತಂಡ ಫೈನಲ್‌ಗೆ?

PBKS vs MI, Qualifier 2: 2ನೇ ಕ್ವಾಲಿಫೈಯರ್‌ ಪಂದ್ಯಕ್ಕೆ ಯಾವುದೇ ರೀತಿಯ ಮೀಸಲು ದಿನ ಇರುವುದಿಲ್ಲ. 120 ನಿಮಿಷಗಳ ಬಳಿಕ ಓವರ್‌ಗಳ ಸಂಖ್ಯೆಯಲ್ಲಿಯೂ ಕಡಿತವಾಗಲಿದೆ. ನಿಗದಿತ ಅವಧಿಯಲ್ಲಿ ಪಂದ್ಯ ಪೂರ್ಣಗೊಳಿಸಲು ಪ್ರಯತ್ನ ನಡೆಯಲಿದೆ.

Written by - Puttaraj K Alur | Last Updated : Jun 1, 2025, 08:54 PM IST
  • ಮುಂಬೈ ಇಂಡಿಯನ್ಸ್‌ vs ಪಂಜಾಬ್‌ ಕಿಂಗ್ಸ್‌ ನಡುವಿನ ಫೈನಲ್‌ ಪಂದ್ಯಕ್ಕೆ ಮಳೆ ಅಡ್ಡಿ
  • 2ನೇ ಕ್ವಾಲಿಫೈಯರ್‌ ಪಂದ್ಯ ರದ್ದಾದರೆ ಯಾವ ತಂಡ ಫೈನಲ್‌ಗೆ ಎಂಟ್ರಿ ಕೊಡಲಿದೆ
  • 2ನೇ ಕ್ವಾಲಿಫೈಯರ್‌ ಪಂದ್ಯಕ್ಕೆ ಯಾವುದೇ ರೀತಿಯ ಮೀಸಲು ದಿನ ಇರುವುದಿಲ್ಲ
PBKS vs MI, Qualifier 2: ಮಳೆಯಿಂದ ಪಂದ್ಯ ರದ್ದಾದರೆ ಯಾವ ತಂಡ ಫೈನಲ್‌ಗೆ?

Punjab Kings vs Mumbai Indians: ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ 2ನೇ ಕ್ವಾಲಿಫೈಯರ್‌ ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ. ಪಂಜಾಬ್‌ ಕಿಂಗ್ಸ್‌ Vs ಮುಂಬೈ ಇಂಡಿಯನ್ಸ್‌ ನಡುವಿನ ಈ ಮಹತ್ವದ ಪಂದ್ಯಕ್ಕೆ ವರುಣ ಅವಕೃಪೆ ತೋರಿದ್ದಾನೆ. ಸಂಜೆ 7.30ಕ್ಕೆ ಆರಂಭವಾಗಬೇಕಿದ್ದ ಈ ಪಂದ್ಯಕ್ಕೆ ಇನ್ನೂ ಮಳೆಕಾಟ ತಪ್ಪಿಲ್ಲ. ಹೀಗಾಗಿ ಉಭಯ ತಂಡಗಳ ಆಟಗಾರರು ಮತ್ತು ಅಭಿಮಾನಿಗಳ ಮೊಗದಲ್ಲಿ ಟೆನ್ಶನ್‌ ಎದ್ದುಕಾಣುತ್ತಿದೆ. 

Add Zee News as a Preferred Source

ಈ ಪಂದ್ಯದಲ್ಲಿ ಟಾಸ್‌ ಗೆದ್ದ ಪಂಜಾಬ್‌ ತಂಡದ ನಾಯಕ ಶ್ರೇಯಸ್‌ ಅಯ್ಯರ್‌ ಫೀಲ್ಡಿಂಗ್‌ ಆಯ್ದುಕೊಂಡಿದ್ದಾರೆ. ಟಾಸ್‌ ಬಳಿಕ ಆಟಗಾರರು ಇನ್ನೇನು ಮದಾನಕ್ಕೆ ಎಂಟ್ರಿ ಕೊಡಬೇಕು ಅನ್ನೋವಷ್ಟರಲ್ಲಿ ಮಳೆ ಸುರಿಯಲಾರಂಭಿಸಿತು. ಇದರಿಂದ ಪಂದ್ಯಕ್ಕೆ ಅಡಚಣೆಯುಂಟಾಗಿದೆ. ಮಳೆಯಿಂದ ಈಗಾಗಲೇ ಪಂದ್ಯಕ್ಕೆ ಒಂದು ಗಂಟೆ ತಡವಾಗಿದೆ. ಇನ್ನೂ ಸಹ ತುಂತುರು ಮಳೆ ಸುರಿಯುತ್ತಿದೆ. ಮಳೆಯಿಂದ ಮೈದಾನದಲ್ಲಿರುವ ಅಭಿಮಾನಿಗಳ ಮೊಗದಲ್ಲಿ ಮಂದಹಾಸವೇ ಮಾಯವಾಗಿದೆ. 

ಇದನ್ನೂ ಓದಿ: ಆರ್‌ಸಿಬಿಯ ಲಕ್ಕಿ ಕ್ಯಾಪ್ಟನ್‌ ರಜತ್‌ ಪಾಟೀದಾರ್‌ ಪತ್ನಿ ಯಾರು ಗೊತ್ತೇ? ಒಂದೊಮ್ಮೆ ತಂಡಕ್ಕಾಗಿ ಈಕೆ ಜೊತೆ ಮದುವೆಯನ್ನೇ ಕ್ಯಾನ್ಸಲ್‌ ಮಾಡಿದ್ರಂತೆ ಕ್ರಿಕೆಟರ್‌

ಪಂದ್ಯ ರದ್ದಾದರೆ ಯಾರು ಫೈನಲ್‌ಗೆ?

ಒಂದು ವೇಳೆ ಈ ಪಂದ್ಯವು ಮಳೆಯಿಂದ ರದ್ದಾದರೆ ಪಂಬಾಜ್‌ vs ಮುಂಬೈ ತಂಡಗಳ ಪೈಕಿ ಯಾರು ಫೈನಲ್‌ ಪ್ರವೇಶಿಸಿಲಿದ್ದಾರೆಂಬುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಒಂದು ವೇಳೆ ಈ ಪಂದ್ಯ ಮಳೆಯಿಂದ ರದ್ದಾದರೆ ಅಂಕಪಟ್ಟಿಯಲ್ಲಿ ಮುಂಬೈಗಿಂತಲೂ ಉತ್ತಮ ಸ್ಥಾನದಲ್ಲಿರುವ ಪಂಜಾಬ್‌ ತಂಡವು ಫೈನಲ್‌ಗೆ ಅರ್ಹತೆ ಪಡೆಯಲಿದೆ. ಆಡಿದ 14 ಪಂದ್ಯಗಳ ಪೈಕಿ 9 ಗೆದ್ದಿದ್ದ ಪಂಜಾಬ್‌ ತಂಡವು 4 ಪಂದ್ಯಗಳಲ್ಲಿ ಸೋಲು ಕಂಡಿತ್ತು. ಒಂದು ಪಂದ್ಯ ರದ್ದಾಗಿತ್ತು. ಹೀಗಾಗಿ 19 ಅಂಕಗಳನ್ನ ಕಲೆಹಾಕಿದ್ದ ಶ್ರೇಯಸ್‌ ಅಯ್ಯರ್‌ ಪಡೆ ಪಾಯಿಂಟ್ಸ್‌ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿತ್ತು. 

ಮೀಸಲು ದಿನ ಇರುತ್ತದಯೇ?

2ನೇ ಕ್ವಾಲಿಫೈಯರ್‌ ಪಂದ್ಯಕ್ಕೆ ಯಾವುದೇ ರೀತಿಯ ಮೀಸಲು ದಿನ ಇರುವುದಿಲ್ಲ. 120 ನಿಮಿಷಗಳ ಬಳಿಕ ಓವರ್‌ಗಳ ಸಂಖ್ಯೆಯಲ್ಲಿಯೂ ಕಡಿತವಾಗಲಿದೆ. ನಿಗದಿತ ಅವಧಿಯಲ್ಲಿ ಪಂದ್ಯ ಪೂರ್ಣಗೊಳಿಸಲು ಪ್ರಯತ್ನ ನಡೆಯಲಿದೆ. ಕನಿಷ್ಠ ಐದು ಓವರ್‌ಗಳ ಪಂದ್ಯ ನಡೆಸಲು ಸಾಧ್ಯವಾಗದಿದ್ದರೆ ಈ ಪಂದ್ಯ ರದ್ದಾಗಲಿದ್ದು, ಮುಂಬೈ ಟೂರ್ನಿಯಿಂದ ಔಟ್‌ ಆದರೆ, ಪಂಜಾಬ್‌ ಫೈನಲ್‌ಗೆ ಎಂಟ್ರಿ ಕೊಡಲಿದೆ. ಈಗಾಗಲೇ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಫೈನಲ್‌ ಪ್ರವೇಶಿಸಿದ್ದು, ಜೂನ್‌ 3ರಂದು ಪ್ರಶಸ್ತಿಗಾಗಿ ಸೆಣಸಾಟ ನಡೆಯಲಿದೆ. 

ಇದನ್ನೂ ಓದಿ: ಚೆಪಾಕ್‌ನಲ್ಲಿ ಸಿಎಸ್‌ಕೆ ಸೋಲಿಸುವುದರಿಂದ ಹಿಡಿದು ಫೈನಲ್‌ವರೆಗೆ... ಐಪಿಎಲ್‌ 2025ರಲ್ಲಿ ಆರ್‌ಸಿಬಿ ಮಾಡಿರುವ 9 ಐತಿಹಾಸಿಕ ದಾಖಲೆಗಳು ಇವೇ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ

About the Author

Puttaraj K Alur

ಪುಟ್ಟರಾಜ ಕೆ ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.  

ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser)ನ್ಯೂಸ್‌, ಒಪೊಯಿ‌ (Opoyi)ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

...Read More

Trending News