IPL 2022, PBKS vs RCB: ಪಂಜಾಬ್ ಕಿಂಗ್ಸ್ ವಿರುದ್ಧ ಗೆಲುವಿನ ನಿರೀಕ್ಷೆಯಲ್ಲಿ ಆರ್​ಸಿಬಿ

ದಕ್ಷಿಣ ಆಫ್ರಿಕಾ ತಂಡದ ಮಾಜಿ ನಾಯಕ, ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಸ್ಫೋಟಕ ಆಟವಾಡಿ ಮಿಂಚಿದ್ದ ಫಾಫ್ ಡು ಪ್ಲೆಸಿಸ್ ಆರ್​ಸಿಬಿ ತಂಡವನ್ನು ಮುನ್ನಡೆಸಲಿದ್ದಾರೆ.

Written by - Puttaraj K Alur | Last Updated : Mar 27, 2022, 01:28 PM IST
  • ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಪಂಜಾಬ್ ಕಿಂಗ್ಸ್ ಸವಾಲು
  • RCB ಹಣೆಬರಹ ಬದಲಿಸುತ್ತಾರಾ ನೂತನ ನಾಯಕ ಫಾಪ್ ಡು ಪ್ಲೆಸಿಸ್?
  • ಮಹತ್ವದ ಪಂದ್ಯದಲ್ಲಿ ಮಿಂಚುತ್ತಾರಾ ರನ್ ಮಷಿನ್ ಖ್ಯಾತಿಯ ವಿರಾಟ್ ಕೊಹ್ಲಿ?
IPL 2022, PBKS vs RCB: ಪಂಜಾಬ್ ಕಿಂಗ್ಸ್ ವಿರುದ್ಧ ಗೆಲುವಿನ ನಿರೀಕ್ಷೆಯಲ್ಲಿ ಆರ್​ಸಿಬಿ title=
ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಪಂಜಾಬ್ ಕಿಂಗ್ಸ್ ಸವಾಲು

ನವದೆಹಲಿ: ಮುಂಬೈನ ಡಾ. ಡಿ.ವೈ.ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿ ಕ್ರೀಡಾಂಗಣದಲ್ಲಿ ಇಂದು ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು(PBKS vs RCB) ನಡುವೆ ಮಹತ್ವದ ಪಂದ್ಯ ನಡೆಯಲಿದೆ. 15ನೇ ಆವೃತ್ತಿಯ ಐಪಿಎಲ್ ಟೂರ್ನಿ(IPL 2022)ಯ 3 ಪಂದ್ಯದಲ್ಲಿ ಟ್ರೋಫಿ ಮೇಲೆ ಕಣ್ಣಿಟ್ಟಿರುವ ಬಲಿಷ್ಠ ತಂಡಗಳೆರಡು ಮುಖಾಮುಖಿಯಾಗುತ್ತಿವೆ.

ದಕ್ಷಿಣ ಆಫ್ರಿಕಾ ತಂಡದ ಮಾಜಿ ನಾಯಕ, ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಸ್ಫೋಟಕ ಆಟವಾಡಿ ಮಿಂಚಿದ್ದ ಫಾಫ್ ಡು ಪ್ಲೆಸಿಸ್ ಆರ್​ಸಿಬಿ ತಂಡ(Royal Challengers Bangalore)ದ ನೂತನ ನಾಯಕನಾಗಿ ಆಯ್ಕೆಯಾಗಿದ್ದಾರೆ. ಕಳೆದ 14 ಐಪಿಎಲ್ ಟೂರ್ನಿ(IPL 2022)ಯಲ್ಲಿ 3 ಬಾರಿ ಫೈನಲ್ ಪ್ರವೇಶಿಸಿದರೂ ಆರ್​ಸಿಬಿ ಕಪ್ ಗೆಲ್ಲುವಲ್ಲಿ ವಿಫಲವಾಗಿದೆ. ‘ಈ ಸಲ ಕಪ್ ನಮ್ದೆ’ ಎನ್ನುವ ಆರ್​ಸಿಬಿ ಅಭಿಮಾನಿಗಳ(RCB Fans) ಬಹುದಿನದ ಆಸೆಯನ್ನು ಡು ಪ್ಲೆಸಿಸ್ ಈಡೇರಿಸುತ್ತಾರಾ ಅನ್ನೋ ಪ್ರಶ್ನೆ ಮೂಡಿದೆ.

ಇದನ್ನೂ ಓದಿ: IPL 2022, DC vs MI: ಡೆಲ್ಲಿ ಕ್ಯಾಪಿಟಲ್ಸ್ vs ಮುಂಬೈ ಇಂಡಿಯನ್ಸ್ ಕಾಳಗದಲ್ಲಿ ಗೆಲುವು ಯಾರಿಗೆ..?

ಬಲಿಷ್ಠ ತಂಡವಾಗಿದ್ದರೂ ಪಂಜಾಬ್ ಕಿಂಗ್ಸ್(Punjab Kings) ತಂಡಕ್ಕೆ ಕೇವಲ 1 ಬಾರಿ ಮಾತ್ರ ಫೈನಲ್ ಪ್ರವೇಶಿಸಲು ಸಾಧ್ಯವಾಗಿದೆ. ಹೀಗಾಗಿ ಉಭಯ ತಂಡಗಳು ಈ ಬಾರಿ ಐಪಿಎಲ್ ಟ್ರೋಫಿ ಎತ್ತಿಹಿಡಿಯುವ ಮಹತ್ವಾಕಾಂಕ್ಷೆಯೊಂದಿಗೆ ಕಣಕ್ಕಿಳಿಯುತ್ತಿವೆ. ಡು ಪ್ಲೆಸಿಸ್(Faf du Plessis) ಆರ್​ಸಿಬಿ ತಂಡದ ಹಣೆಬರಹ ಬದಲಿಸುತ್ತಾರಾ? ಯುವಕರೇ ತುಂಬಿಕೊಂಡಿರುವ ಪಂಜಾಬ್ ಕಿಂಗ್ಸ್ ಟ್ರೋಫಿ ಗೆಲ್ಲುವ ಆಸೆ ಈಡೇರುತ್ತಾ ಅನ್ನೋ ಪ್ರಶ್ನೆ ಮೂಡಿದೆ. ಎರಡೂ ತಂಡಗಳು ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ಬಲಿಷ್ಠವಾಗಿವೆ. ಎಲ್ಲಾ ವಿಧದಲ್ಲಿಯೂ ಅತ್ಯುತ್ತಮ ಪ್ರದರ್ಶನ ನೀಡುವ ತಂಡಕ್ಕೆ ಗೆಲುವು ದಕ್ಕಲಿದೆ. ಆದರೆ ಇಂದಿನ ಪಂದ್ಯದಲ್ಲಿ ಆರ್​ಸಿಬಿ ಗೆಲ್ಲುವ ನಿರೀಕ್ಷೆ ಹೆಚ್ಚಿದೆ.

ಎರಡೂ ತಂಡಗಳ ಸ್ಕ್ವಾಡ್ ಈ ರೀತಿ ಇದೆ:

ಪಂಜಾಬ್ ಕಿಂಗ್ಸ್: ಮಯಾಂಕ್ ಅಗರ್ವಾಲ್ (ನಾಯಕ), ಪ್ರಭಾಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್), ಶಿಖರ್ ಧವನ್, ಲಿಯಾಮ್ ಲಿವಿಂಗ್‌ಸ್ಟೋನ್, ಭಾನುಕಾ ರಾಜಪಕ್ಸೆ, ಶಾರುಖ್ ಖಾನ್, ಓಡಿಯನ್ ಸ್ಮಿತ್, ಹರ್‌ಪ್ರೀತ್ ಬ್ರಾರ್, ಅರ್ಷ್‌ದೀಪ್ ಸಿಂಗ್, ರಾಹುಲ್ ಚಾಹರ್, ಸಂದೀಪ್ ಶರ್ಮಾ, ರಿಷಿ ಧವನ್, ಬೆನ್ನಿ ಹೋವೆಲ್, ಇಶಾನ್ ಪೊರೆಲ್, ನಾಥನ್ ಎಲ್ಲಿಸ್, ರಾಜ್ ಬಾವಾ, ಬಲ್ತೇಜ್ ಸಿಂಗ್, ರಿಟಿಕ್ ಚಟರ್ಜಿ, ಜಿತೇಶ್ ಶರ್ಮಾ, ಪ್ರೇರಕ್ ಮಂಕಡ್, ಅಥರ್ವ ಟೈಡೆ, ವೈಭವ್ ಅರೋರಾ, ಅನ್ಶ್ ಪಟೇಲ್

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್ (ನಾಯಕ), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ವಿರಾಟ್ ಕೊಹ್ಲಿ, ಅನುಜ್ ರಾವತ್, ಶೆರ್ಫೇನ್ ರುದರ್ಫೋರ್ಡ್, ಮಹಿಪಾಲ್ ಲೊಮ್ರೋರ್, ವನಿಂದು ಹಸರಂಗ, ಡೇವಿಡ್ ವಿಲ್ಲಿ, ಹರ್ಷಲ್ ಪಟೇಲ್, ಶಹಬಾಜ್ ಅಹ್ಮದ್, ಮೊಹಮ್ಮದ್ ಸಿರಾಜ್, ಸಿದ್ದಾರ್ಥ್ ಕೌಲ್, ಕರ್ಣ್ ಶರ್ಮಾ, ಫಿನ್ ಅಲೆನ್, ಸುಯಶ್ ಪ್ರಭುದೇಸಾಯಿ, ಲುವ್ನಿತ್ ಸಿಸೋಡಿಯಾ, ಚಾಮ ವಿ ಮಿಲಿಂದ್, ಆಕಾಶ್ ದೀಪ್, ಅನೀಶ್ವರ್ ಗೌತಮ್

ಇದನ್ನೂ ಓದಿ: CSK vs KKR: ಐಪಿಎಲ್ 2022ರ ಮೊದಲ ಬಾಲೇ ನೋ ಬಾಲ್!

ಐಪಿಎಲ್‌ ಪಂದ್ಯ: 03

ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಪಂಜಾಬ್ ಕಿಂಗ್ಸ್

ದಿನಾಂಕ: ಮಾರ್ಚ್ 27, ಭಾನುವಾರ

ಸ್ಥಳ: ಮುಂಬೈನ ಡಾ. ಡಿ.ವೈ.ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿ ಕ್ರೀಡಾಂಗಣ  

ಸಮಯ: ಸಂಜೆ 7.30ಕ್ಕೆ

=======================================================================================================

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News