Khalid Mahmood : ಭಾರತ ತಂಡವು 2024ರ ಚಾಂಪಿಯನ್ಸ್ ಟ್ರೋಫಿಗಾಗಿ ಪಾಕಿಸ್ತಾನಕ್ಕೆ ಹೋಗಲಿದೆಯೇ ಅಥವಾ ಇಲ್ಲವೇ? ಎನ್ನುವ ಕುರಿತು ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಈ ಬಗ್ಗೆ ಬಿಸಿಸಿಐ ಕೂಡ ಇನ್ನೂ ಯಾವುದೇ ಅಧಿಕೃತ ಮಾಹಿತಿ ಹೊರಹಾಕಿಲ್ಲ. ಮುಂದಿನ ವರ್ಷದ ಆರಂಭದಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತವು ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ ಎಂದು ಬಿಸಿಸಿಐ ಹೇಳಿದ್ದು, ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಮಾಜಿ ಅಧ್ಯಕ್ಷ ಖಾಲಿದ್ ಮಹಮೂದ್ ಇದರ ಕುರಿತು ಪ್ರತಿಕ್ರಿಯಿಸಿದ್ದಾರೆ. 


COMMERCIAL BREAK
SCROLL TO CONTINUE READING

"ಭಾರತ ತಂಡ ಪಾಕಿಸ್ತಾನದಲ್ಲಿ ಆಡಲು ಒಪ್ಪಿಕೊಳ್ಳುವ ಸಾಧ್ಯತೆ ಕಡಿಮೆ" ಎಂದುಮಾಜಿ ಅಧ್ಯಕ್ಷ ಖಾಲಿದ್ ಮಹಮೂದ್ ಹೇಳಿದ್ದಾರೆ. ಭಾರತವು ಪಾಕಿಸ್ತಾನಕ್ಕೆ ಪ್ರವಾಸ ಮಾಡದಿದ್ದರೆ,  ಪಿಸಿಬಿಗೆ ನಷ್ಟವಾಗಲಿದೆ, ಭಾರತವು ಶ್ರೀಮಂತ ಕ್ರಿಕೆಟ್ ಮಂಡಳಿಯಾಗಿದ್ದು, ಸಾಕಷ್ಟು ಪ್ರಭಾವವನ್ನು ಹೊಂದಿದೆ. ತಮ್ಮ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸದಿದ್ದರೆ, ಶ್ರೀಲಂಕಾ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಂತಹ ದೇಶಗಳು ಸಹ ಅವರ ಹಾದಿಯನ್ನು ಅನುಸರಿಸುತ್ತವೆ ಎಂದು ನಾನು ಭಾವಿಸುತ್ತೇನೆ."


ಇದನ್ನೂ ಓದಿ: IPL 2025: ಐಪಿಎಲ್‌ ಹರಾಜಿಗೂ ಮುನ್ನವೇ ಅಂಬಾನಿಗೆ ದೊಡ್ಡ ಅಘಾತ..ತಲೆಗೆ ಟವಲ್‌ ಹಾಕಿದ ಕ್ಯಾಪ್ಟನ್‌..100 ಕೋಟಿ ಪಂಗನಾಮ..!


"ಭಾರತವು ಪಾಕಿಸ್ತಾನಕ್ಕೆ ಪ್ರವಾಸ ಮಾಡದಿದ್ದರೆ ಚಾಂಪಿಯನ್ಸ್ ಟ್ರೋಫಿಯ ಆದಾಯದ ಮೇಲೆ ಭಾರಿ ದೊಡ್ಡ ಪರಿಣಾಮ ಬೀರಲಿದೆ. ಸರಣಿಯನ್ನು ಸಂಘಟಿಸುವ ವೆಚ್ಚ ಹೆಚ್ಚಾಗುತ್ತದೆ ಮತ್ತು ಲಾಭವು ಕಡಿಮೆಯಾಗುತ್ತದೆ. ಈ ಹಂತದಲ್ಲಿ ನೀವು ನಿಮ್ಮ ನಿಲುವನ್ನು ಮಾತ್ರ ಬಲವಾಗಿ ಪ್ರಸ್ತುತಪಡಿಸಬಹುದು, ನಿಮ್ಮ ಪರವಾಗಿ ತೆಗೆದುಕೊಳ್ಳಲು ಇತರ ಮಂಡಳಿಗಳನ್ನು ಮನವೊಲಿಸಲು ಪ್ರಯತ್ನಿಸಬಹುದು. ಭಾರತವು ಐಸಿಸಿಯಲ್ಲಿ ಸಾಕಷ್ಟು ಪ್ರಭಾವವನ್ನು ಹೊಂದಿದೆ, ಅಂತಹ ಪರಿಸ್ಥಿತಿಯಲ್ಲಿ ಪಾಕಿಸ್ತಾನವು ಟಿಟ್-ಫಾರ್-ಟಾಟ್ ತಂತ್ರವನ್ನು ಅಳವಡಿಸಿಕೊಳ್ಳುವುದರಿಂದ ಯಾವುದೇ ಪ್ರಯೋಜನವನ್ನು ಪಡೆಯುವುದಿಲ್ಲ ಎಂದು ನಾವು ಹೇಳಲು ಬಯಸುತ್ತೇವೆ" ಎಂದಿದ್ದಾರೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.