IND vs PAK Champions Trophy: T20 ವಿಶ್ವಕಪ್ 2024ರಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಉತ್ತಮ ಪೈಪೋಟಿ ಕಂಡುಬಂದಿದೆ. ಭಾರತ 6 ಪಂದ್ಯಗಳಲ್ಲಿ ಬಾಬರ್ ನೇತೃತ್ವದ ತಂಡವನ್ನು ಹೀನಾಯವಾಗಿ ಸೋಲಿಸಿತ್ತು. ಇದೀಗ ಈ ಸೋಲಿನ ಬಳಿಕ ಪಾಕಿಸ್ತಾನ ಚಾಂಪಿಯನ್ಸ್ ಟ್ರೋಫಿಯಲ್ಲಿ ಮಾಸ್ಟರ್ ಪ್ಲಾನ್ ಮಾಡುತ್ತಿದೆ.
ಭಾರತ ಮತ್ತು ಪಾಕಿಸ್ತಾನದ ನಡುವಿನ ಪಂದ್ಯಕ್ಕೆ ದಿನಾಂಕ ಮತ್ತು ಸ್ಥಳವನ್ನು ಪಿಸಿಬಿ ನಿರ್ಧರಿಸಿದೆ. ಆದರೆ, ಇದಕ್ಕೆ ಬಿಸಿಸಿಐ ಒಪ್ಪಿಗೆ ನೀಡಬೇಕಿದೆ. 2025ರ ಚಾಂಪಿಯನ್ಸ್ ಟ್ರೋಫಿಯನ್ನು ಪಾಕಿಸ್ತಾನ ಆಯೋಜಿಸುತ್ತಿದ್ದು, ಭಾರತ ತಂಡ ಪಾಕಿಸ್ತಾನಕ್ಕೆ ಹೋಗಲಿದೆಯೇ ಅಥವಾ ಇಲ್ಲವೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
ಪಿಟಿಐ ವರದಿ ಪ್ರಕಾರ, ಪಿಸಿಬಿ 15 ಪಂದ್ಯಗಳ ಕರಡು ವೇಳಾಪಟ್ಟಿಯನ್ನು ಐಸಿಸಿಗೆ ನೀಡಿದೆ. ಪಿಸಿಬಿ ವೇಳಾಪಟ್ಟಿಯ ಪ್ರಕಾರ, ಈ ಪಂದ್ಯಾವಳಿಯು ಫೆಬ್ರವರಿ 19 ರಿಂದ ಪ್ರಾರಂಭವಾಗಲಿದ್ದು,ಅಂತಿಮ ಪಂದ್ಯವು ಮಾರ್ಚ್ 9 ರಂದು ನಡೆಯಲಿದೆ. ಪ್ರಶಸ್ತಿ ಹೋರಾಟಕ್ಕೆ ಮೀಸಲು ದಿನವನ್ನು (ಮಾರ್ಚ್ 10) ಇರಿಸಲಾಗಿದೆ.
ವರದಿಯ ಪ್ರಕಾರ, ಭದ್ರತಾ ಕಾರಣಗಳಿಗಾಗಿ ಟೀಂ ಇಂಡಿಯಾ ಲಾಹೋರ್’ನಲ್ಲಿ ಎಲ್ಲಾ ಪಂದ್ಯಗಳನ್ನು ಆಡಲಿದೆ. ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಫೈನಲ್ ಪಂದ್ಯದ ವೇಳೆ ಪಿಸಿಬಿ ಮುಖ್ಯಸ್ಥ ಮೊಹ್ಸಿನ್ ನಖ್ವಿ ಬಾರ್ಬಡೋಸ್’ಗೆ ಆಗಮಿಸಿದ್ದರು.
ಪಿಸಿಬಿ ವೇಳಾಪಟ್ಟಿಯ ಪ್ರಕಾರ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಮಾರ್ಚ್ 1 ರಂದು ನಿಗದಿಯಾಗಿದೆ. ಉಭಯ ತಂಡಗಳ ನಡುವೆ ಈ ಪಂದ್ಯವನ್ನು ಲಾಹೋರ್’ನಲ್ಲಿ ನಡೆಸಲು ಯೋಜನೆ ರೂಪಿಸಲಾಗಿದೆ. ಎರಡೂ ತಂಡಗಳು ಒಂದೇ ಗುಂಪಿನಲ್ಲಿ ಸ್ಥಾನ ಪಡೆದಿವೆ.
ಐಸಿಸಿ ಮಂಡಳಿಯ ಸದಸ್ಯರೊಬ್ಬರು ಪಿಟಿಐಗೆ ನೀಡಿದ ಮಾಹಿತಿ ಪ್ರಕಾರ, “ಪಿಸಿಬಿ 15 ಪಂದ್ಯಗಳ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ವೇಳಾಪಟ್ಟಿಯನ್ನು ಪ್ರಸ್ತುತಪಡಿಸಿದೆ. ಇದರ ಪ್ರಕಾರ ಲಾಹೋರ್ನಲ್ಲಿ 7, ಕರಾಚಿಯಲ್ಲಿ 3 ಮತ್ತು ರಾವಲ್ಪಿಂಡಿಯಲ್ಲಿ 5 ಪಂದ್ಯಗಳು ನಡೆಯಲಿವೆ. ಚಾಂಪಿಯನ್ಸ್ ಟ್ರೋಫಿಯು ಕರಾಚಿಯಲ್ಲಿ ಆರಂಭವಾಗಲಿದ್ದು, ಎರಡು ಸೆಮಿಫೈನಲ್ ಪಂದ್ಯಗಳು ಕರಾಚಿ ಮತ್ತು ರಾವಲ್ಪಿಂಡಿಯಲ್ಲಿ ನಡೆಯಲಿವೆ. ಫೈನಲ್ ಲಾಹೋರ್’ನಲ್ಲಿ ನಡೆಯಲಿದೆ.
ಇದನ್ನೂ ಓದಿ: ಮರೆವಿನಲ್ಲಿ ರೋಹಿತ್’ರನ್ನೇ ಮೀರಿಸಿದ ರಿಯಾನ್! ಜಿಂಬಾಬ್ವೆಯಲ್ಲಿ ಮೊಬೈಲ್ ಮರೆತ ಕ್ರಿಕೆಟಿಗ
ಏಷ್ಯಾಕಪ್ 2023ರ ಆತಿಥ್ಯವೂ ಪಾಕಿಸ್ತಾನದ ಕೈಯಲ್ಲಿತ್ತು. ಆದರೆ ಭದ್ರತಾ ಕಾರಣಗಳಿಂದಾಗಿ ಟೀಂ ಇಂಡಿಯಾವನ್ನು ಪಾಕಿಸ್ತಾನಕ್ಕೆ ಕಳುಹಿಸಲು ಬಿಸಿಸಿಐ ಸ್ಪಷ್ಟವಾಗಿ ನಿರಾಕರಿಸಿತ್ತು. ಇದರಿಂದಾಗಿ ಹಲವಾರು ತಿಂಗಳುಗಳ ಕಾಲ ಗೊಂದಲ ಮುಂದುವರೆಯಿತು. ಕೊನೆಯಲ್ಲಿ ಈ ಪಂದ್ಯಾವಳಿಯನ್ನು ಹೈಬ್ರಿಡ್ ಮಾದರಿಯಲ್ಲಿ ನಡೆಸಲು ನಿರ್ಧರಿಸಲಾಯಿತು. ಈ ಬಾರಿಯೂ ಬಿಸಿಸಿಐ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ