IPL 2025, 20 Crore Players: ಇನ್ನೇನು ಕೆಲವೇ ಗಂಟೆಗಳು ಬಾಕಿ ಇದೆ. ಐಪಿಎಲ್ 2025 ರ ಹರಾಜಿನ ಮೊದಲು ಎಲ್ಲಾ ತಂಡಗಳು ಯಾವ ಆಟಗಾರರನ್ನು ಉಳಿಸಿಕೊಳ್ಳಲು ನಿರ್ಧರಿಸಿವೆ ಎಂಬುದು ಸ್ಪಷ್ಟವಾಗುತ್ತದೆ. ಉಳಿಸಿಕೊಂಡಿರುವ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಲು ಬಿಸಿಸಿಐ ಎಲ್ಲಾ ಫ್ರಾಂಚೈಸಿಗಳಿಗೆ ಅಕ್ಟೋಬರ್ 31 ರವರೆಗೆ ಕಾಲಾವಕಾಶ ನೀಡಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Horse Gram: ಏಳು ದಿನಗಳಲ್ಲೇ ಪೈಲ್ಸ್‌ ಸಮಸ್ಯೆಗೆ ಪರಿಹಾರ ಬೇಕಾದ್ರೆ ʼಈʼ ಕಾಳು ಸೇವಿಸಿರಿ


ಈ ಎಲ್ಲದರ ನಡುವೆ, ಕೆಲ ಆಟಗಾರರನ್ನು ತಂಡದಲ್ಲೇ ಉಳಿಸಿಕೊಳ್ಳಲು ಶತಪ್ರಯತ್ನ ಮಾಡುತ್ತಿದೆಯಂತೆ ಫ್ರಾಂಚೈಸಿ. ಅದರಲ್ಲೂ ಐವರು ಆಟಗಾರರನ್ನು ಮಾತ್ರ ಬರೋಬ್ಬರಿ 20 ಕೋಟಿ ನೀಡಿಯಾದರೂ ತಂಡದಲ್ಲೇ ಉಳಿಸಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ವರದಿ ಬಂದಿವೆ.


ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಹೆಸರು ಅಗ್ರಸ್ಥಾನದಲ್ಲಿದೆ. ಭಾರತದ ಮಾಜಿ ನಾಯಕ ಐಪಿಎಲ್‌ನ ಮೊದಲ ಸೀಸನ್‌ನಿಂದಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿದ್ದಾರೆ. ಆರ್‌ಸಿಬಿ ಈ ಬಾರಿ 20 ಕೋಟಿಗೆ ಅವರನ್ನು ಉಳಿಸಿಕೊಳ್ಳುವ ಸಾಧ್ಯತೆ ಇದೆ.


ಟೀಂ ಇಂಡಿಯಾದ ವಿಕೆಟ್ ಕೀಪರ್ ರಿಷಬ್ ಪಂತ್ ಎರಡನೇ ಸ್ಥಾನದಲ್ಲಿದ್ದಾರೆ. ಇತರ ತಂಡಗಳು ಪಂತ್ ಅವರನ್ನು ಖರೀದಿಸಲು ಯೋಚಿಸುತ್ತಿವೆ ಎಂಬ ವದಂತಿಗಳ ಮಧ್ಯೆ, ಹೇಗಾದರೂ ಮಾಡಿ ಡೆಲ್ಲಿ ಕ್ಯಾಪಿಟಲ್ಸ್ ಅವರನ್ನು 20 ಕೋಟಿ ರೂ.ಗೆ ನೀಡಿ ಉಳಿಸಿಕೊಳ್ಳುವ ಯೋಜನೆಯಲ್ಲಿದೆ.


ಕಳೆದ ಋತುವಿನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಚಾಂಪಿಯನ್ ಮಾಡಿದ ಶ್ರೇಯಸ್ ಅಯ್ಯರ್‌ನ್ನು ಕೂಡ 20 ಕೋಟಿ ರೂ.ಗೆ ಉಳಿಸಿಕೊಳ್ಳುವ ಸಾಧ್ಯತೆ ಇದೆ.


ಇದನ್ನೂ ಓದಿ: ಸಾಕ್ಷಾತ್ ಪಾರ್ವತಿಸುತ ಗಣಪತಿಯೇ ಮೆಚ್ಚಿದ ಜನ್ಮರಾಶಿಗಳಿವು


ಕಳೆದ ಋತುವಿನಲ್ಲಿ ಮುಂಬೈ ಇಂಡಿಯನ್ಸ್‌ಗೆ ಮರಳಿದ ಆಲ್‌ ರೌಂಡರ್ ಹಾರ್ದಿಕ್ ಪಾಂಡ್ಯ ಮೇಲೆ ಮತ್ತೆ ಹಣದ ಸುರಿಮಳೆಯಾಗುವ ಸಾಧ್ಯತೆ ಇದೆ. ಹಾರ್ದಿಕ್ ಹೊರತುಪಡಿಸಿ, ಮುಂಬೈ ಇಂಡಿಯನ್ಸ್ ಸ್ಟಾರ್ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಅವರನ್ನು ಸಹ 20 ಕೋಟಿ ರೂ.ಗೆ ಉಳಿಸಿಕೊಳ್ಳಬಹುದು. ಇನ್ನೊಂದೆಡೆ ರೋಹಿತ್ ಎಂಐ ತೊರೆಯಬಹುದು ಎಂಬ ವದಂತಿ ಇದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.