ನವದೆಹಲಿ: Mejor Dhyan Chand Khel Ratna Award - ಖೇಲ್ ರತ್ನ ಪ್ರಶಸ್ತಿಗೆ ಸಂಬಂಧಿಸಿದಂತೆ ಮೋದಿ ಸರ್ಕಾರ ಮಹತ್ವದ ಮತ್ತೋ ದೊಡ್ಡ ನಿರ್ಧಾರವೊಂದನ್ನು ಕೈಗೊಂಡಿದೆ. ಮೋದಿ ಸರ್ಕಾರವು 'ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ'ಯನ್ನು 'ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ' ಎಂದು ಮರುನಾಮಕರಣ ಮಾಡಿದೆ. ಸ್ವತಃ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡುವ ಮೂಲಕ ಈ ಕುರಿತು ಮಾಹಿತಿಯನ್ನು ನೀಡಿದ್ದಾರೆ.
I have been getting many requests from citizens across India to name the Khel Ratna Award after Major Dhyan Chand. I thank them for their views.
Respecting their sentiment, the Khel Ratna Award will hereby be called the Major Dhyan Chand Khel Ratna Award!
Jai Hind! pic.twitter.com/zbStlMNHdq
— Narendra Modi (@narendramodi) August 6, 2021
ಇದಕ್ಕೆ ಸಂಬಂಧಿಸಿದಂತೆ ಶುಕ್ರವಾರ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, 'ಒಲಿಂಪಿಕ್ ಕ್ರೀಡಾಕೂಟದಲ್ಲಿ ಭಾರತೀಯ ಆಟಗಾರರ ಮಹಾನ್ ಪ್ರಯತ್ನಗಳಿಂದ ನಾವೆಲ್ಲರೂ ಮುಳುಗಿದ್ದೇವೆ. ನಮ್ಮ ಮಕ್ಕಳು ಮತ್ತು ಹೆಣ್ಣು ಮಕ್ಕಳು ತೋರಿಸಿದ ಇಚ್ಛಾಶಕ್ತಿ, ವಿಶೇಷವಾಗಿ ಹಾಕಿಯಲ್ಲಿ, ಗೆಲ್ಲುವ ಹುಮ್ಮಸ್ಸು ಪ್ರಸ್ತುತ ಮತ್ತು ಭವಿಷ್ಯದ ಪೀಳಿಗೆಗೆ ಉತ್ತಮ ಸ್ಫೂರ್ತಿಯಾಗಿದೆ' ಎಂದಿದ್ದಾರೆ.
Major Dhyan Chand was among India’s foremost sportspersons who brought honour and pride for India. It is fitting that our nation’s highest sporting honour will be named after him.
— Narendra Modi (@narendramodi) August 6, 2021
'ದೇಶ ಹೆಮ್ಮೆ ಪಡುತ್ತಿರುವ ಕ್ಷಣಗಳ ನಡುವೆ, ದೇಶಾದ್ಯಂತ ಇರುವ ಹಲವು ಕ್ರೀಡಾಪ್ರೇಮಿಗಳು ಖೇಲ್ ರತ್ನ ಪ್ರಶಸ್ತಿಗೆ ಹಾಕಿ ಮಾಂತ್ರಿಕ ಮತ್ತು ದಂತಕಥೆ (Hockey Legend) ಮೇಜರ್ ಧ್ಯಾನ್ ಚಂದ್ ಅವರ ಹೆಸರನ್ನು ಅರ್ಪಿಸಬೇಕು ಎಂದು ಬೇಡಿಕೆ ಸಲ್ಲಿಸಿದ್ದಾರೆ. ಜನರ ಈ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು ಇದೀಗ ಆ ಪ್ರಶಸ್ತಿಯ ಹೆಸರನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ಹೆಸರಿಸಲಾಗಿದೆ... ಜೈ ಹಿಂದ್!' ಎಂದು ಪ್ರಧಾನಿ ಮೋದಿ ತಮ್ಮ ಟ್ವೀಟ್ ನಲ್ಲಿ ಹೇಳಿದ್ದಾರೆ.
देश को गर्वित कर देने वाले पलों के बीच अनेक देशवासियों का ये आग्रह भी सामने आया है कि खेल रत्न पुरस्कार का नाम मेजर ध्यानचंद जी को समर्पित किया जाए। लोगों की भावनाओं को देखते हुए, इसका नाम अब मेजर ध्यानचंद खेल रत्न पुरस्कार किया जा रहा है।
जय हिंद!
— Narendra Modi (@narendramodi) August 6, 2021
ಈ ಕುರಿತು ಮತ್ತೊಂದು ಟ್ವೀಟ್ ನಲ್ಲಿ ಮಾತನಾಡಿರುವ ಪ್ರಧಾನಿ ಮೋದಿ, 'ಭಾರತಕ್ಕೆ ಸನ್ಮಾನ ಹಾಗೂ ಗೌರವವನ್ನು ತಂದುಕೊಟ್ಟ ಆಗ್ರಗಣ್ಯ ಆಟಗಾರರ ಪೈಕಿ ಮೇಜರ್ ಧ್ಯಾನ್ ಚಂದ್ ಕೂಡ ಒಬ್ಬರು. ಹೀಗಾಗಿ ದೇಶದ ಅತ್ಯುನ್ನದ ಕ್ರೀಡಾ ಪುರಸ್ಕಾರದ ಹೆಸರನ್ನು ಅವರ ಸ್ಮರಣಾರ್ಥ ನೀಡುವುದು ಉಚಿತ' ಎಂದಿದ್ದಾರೆ.
ओलंपिक खेलों में भारतीय खिलाड़ियों के शानदार प्रयासों से हम सभी अभिभूत हैं। विशेषकर हॉकी में हमारे बेटे-बेटियों ने जो इच्छाशक्ति दिखाई है, जीत के प्रति जो ललक दिखाई है, वो वर्तमान और आने वाली पीढ़ियों के लिए बहुत बड़ी प्रेरणा है।
— Narendra Modi (@narendramodi) August 6, 2021
ಇದನ್ನೂ ಓದಿ- Tokyo Olympics: ಕೈ ಜಾರಿದ ಕಂಚಿನ ಪದಕ, ಭಾರತೀಯ ಮಹಿಳಾ ಹಾಕಿ ತಂಡದ ಕನಸು ಭಗ್ನ
ಪ್ರತಿವರ್ಷ ಮೇಜರ್ ಧ್ಯಾನ್ ಚಂದ್ ಅವರ ಹುಟ್ಟುಹಬ್ಬ ಅಂದರೆ ಆಗಸ್ಟ್ 30 ರಂದು ಖೇಲ್ ರತ್ನ ಅವಾರ್ಡ್ ಅನ್ನು ನೀಡಲಾಗುತ್ತಿದೆ ಎಂಬುದು ಇಲ್ಲಿ ಗಮನಾರ್ಹ.
ಇದನ್ನೂ ಓದಿ- Tokyo Olympics 2021 : ಬೆಳ್ಳಿಗೆ ಮುತ್ತಿಟ್ಟ ಕುಸ್ತಿಪಟು ರವಿ ದಹಿಯಾ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ