ಏಷ್ಯನ್ ಗೇಮ್ಸ್: ಬ್ಯಾಡಿಂಟನ್ನಲ್ಲಿ ಬೆಳ್ಳಿ ಗೆದ್ದು ಇತಿಹಾಸ ನಿರ್ಮಿಸಿದ ಸಿಂಧು

ಭಾರತದ ಖ್ಯಾತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ ಸಿಂಧು ಏಷ್ಯನ್ ಕ್ರೀಡಾಕೂಟದಲ್ಲಿ ಬ್ಯಾಡ್ಮಿಂಟನ್ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಬೆಳ್ಳಿ ಪದಕ ಗೆಲ್ಲುವುದರ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ.

Last Updated : Aug 28, 2018, 01:38 PM IST
ಏಷ್ಯನ್ ಗೇಮ್ಸ್: ಬ್ಯಾಡಿಂಟನ್ನಲ್ಲಿ ಬೆಳ್ಳಿ ಗೆದ್ದು ಇತಿಹಾಸ ನಿರ್ಮಿಸಿದ ಸಿಂಧು title=
Photo:PTI

ನವದೆಹಲಿ: ಭಾರತದ ಖ್ಯಾತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ ಸಿಂಧು ಏಷ್ಯನ್ ಕ್ರೀಡಾಕೂಟದಲ್ಲಿ ಬ್ಯಾಡ್ಮಿಂಟನ್ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಬೆಳ್ಳಿ ಪದಕ ಗೆಲ್ಲುವುದರ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ.

ವಿಶ್ವದ ನಂಬರ್ 1 ಆಟಗಾರ್ತಿ ಚೈನೀಸ್ ತೈಪೆಯ ತೈ ಜು ಯಿಂಗ್ ಅವರ ವಿರುದ್ದ ಅಂತಿಮ ಪಂದ್ಯದಲ್ಲಿ 13-21,16-21 ಅಂತರದಲ್ಲಿ ಗೆಲ್ಲುವ ಮೂಲಕ ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡರು. ಕೇವಲ 34 ನಿಮಿಷಗಳಲ್ಲಿ ಮುಕ್ತಾಯಗೊಂಡ ಆಟದಲ್ಲಿ ತೈಪೆಯ ಆಟಗಾರ್ತಿ ಎದುರು ಶರಣಾಗುವುದರ ಮೂಲಕ ಸಿಂಧು ಬೆಳ್ಳಿ ಪದಕಕ್ಕೆ ತೃಪ್ತಿ ಪಟ್ಟುಕೊಂಡರು.

ಇದಕ್ಕೂ ಮೊದಲು ಸೈನಾ ನೆಹ್ವಾಲ್ ಕಂಚಿನ ಪದಕವನ್ನು ಗೆದ್ದು ಕೊಂಡಿದ್ದರು. ಆ ಮೂಲಕ ಈ ಆಟಗಾರ್ತಿಯರು ಸೈಯದ್ ಮೋದಿ  ನಂತರ ಏಷ್ಯನ್ ಕ್ರೀಡಾಕೂಟದಲ್ಲಿ ಪದಕವನ್ನು ಗೆದ್ದ ಸಾಧನೆಯನ್ನು ಮಾಡಿದ್ದಾರೆ. 
 

Trending News