IPL 2024: ಕೇಂದ್ರ ಒಪ್ಪಂದದಿಂದ ಹೊರಬಿದ್ದ ಬೆನ್ನಲ್ಲೇ ಅಬ್ಬರಿಸಿದ ಕ್ವಿಂಟನ್ ಡಿಕಾಕ್! IPLನಲ್ಲಿ ಸ್ಫೋಟಕ ಬ್ಯಾಟಿಂಗ್

RCB vs LSG: ತವರು ನೆಲದಲ್ಲಿ ಗೆಲ್ಲುವ ಭರವಸೆಯೊಂದಿಗೆ ಆರ್‌ಸಿಬಿ ತಂಡ ಚಿನ್ನಸ್ವಾಮಿ ಕ್ರೀಡಾಂಗಣ ಪ್ರವೇಶಿಸಿದೆ. ಆದರೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಲಕ್ನೋ ಆಟಗಾರ ಡಿ ಕಾಕ್ ಬ್ಯಾಟಿಂಗ್, ಎದುರಾಳಿ ತಂಡಕ್ಕೆ ಸಿಂಹಸ್ವಪ್ನವಾಗಿ ಕಾಡಿದೆ.

Written by - Bhavishya Shetty | Last Updated : Apr 2, 2024, 10:24 PM IST
    • ಐಪಿಎಲ್’ನಲ್ಲಿ ಮಿಂಚುತ್ತಿರುವ ದಕ್ಷಿಣ ಆಫ್ರಿಕಾದ ಆರಂಭಿಕ ಬ್ಯಾಟ್ಸ್‌ಮನ್ ಡಿ ಕಾಕ್
    • ಲಕ್ನೋ ಆಟಗಾರ ಡಿ ಕಾಕ್ ಬ್ಯಾಟಿಂಗ್ ಎದುರಾಳಿ ತಂಡಕ್ಕೆ ಸಿಂಹಸ್ವಪ್ನವಾಗಿ ಕಾಡಿದ್ದಾರೆ
    • ಐಪಿಎಲ್ 2024ರಲ್ಲಿ ಡಿ ಕಾಕ್ ಅರ್ಧಶತಕ ಗಳಿಸಿದ್ದು ಇದೇ ಮೊದಲಲ್ಲ
IPL 2024: ಕೇಂದ್ರ ಒಪ್ಪಂದದಿಂದ ಹೊರಬಿದ್ದ ಬೆನ್ನಲ್ಲೇ ಅಬ್ಬರಿಸಿದ ಕ್ವಿಂಟನ್ ಡಿಕಾಕ್! IPLನಲ್ಲಿ ಸ್ಫೋಟಕ ಬ್ಯಾಟಿಂಗ್ title=
quinton de kock

RCB vs LSG: ಕ್ವಿಂಟನ್ ಡಿ ಕಾಕ್, ದಕ್ಷಿಣ ಆಫ್ರಿಕಾದ ಆರಂಭಿಕ ಬ್ಯಾಟ್ಸ್‌ಮನ್. ಅನೇಕ ಸಂದರ್ಭಗಳಲ್ಲಿ ತಂಡವನ್ನು ಗೆಲುವಿನತ್ತ ಮುನ್ನಡೆಸಿದ ಆಟಗಾರ. ಆದರೆ ಇವೆಲ್ಲದರ ಹೊರತಾಗಿಯೂ, ಅವರನ್ನು ಇತ್ತೀಚೆಗೆ ಕೇಂದ್ರ ಒಪ್ಪಂದದಿಂದ ಕೈಬಿಡಲಾಗಿತ್ತು. ಆದರೆ ಇದೀಗ ಐಪಿಎಲ್’ನಲ್ಲಿ ಮಿಂಚುತ್ತಿರುವ ಡಿ ಕಾಕ್ ತಮ್ಮ ಅದ್ಭುತ ಬ್ಯಾಟಿಂಗ್ ಮೂಲಕ ಮಂಡಳಿಗೆ ಉತ್ತರ ನೀಡಿದ್ದಾರೆ.

ಇದನ್ನೂ ಓದಿ: IPL ಪ್ರಾರಂಭವಾದ 10 ದಿನಗಳಲ್ಲೇ ಸದ್ದು ಮಾಡಿದ ಟಾಪ್ 5 ಇಂಪ್ಯಾಕ್ಟ್ ಪ್ಲೇಯರ್ಸ್

ತವರು ನೆಲದಲ್ಲಿ ಗೆಲ್ಲುವ ಭರವಸೆಯೊಂದಿಗೆ ಆರ್‌ಸಿಬಿ ತಂಡ ಚಿನ್ನಸ್ವಾಮಿ ಕ್ರೀಡಾಂಗಣ ಪ್ರವೇಶಿಸಿದೆ. ಆದರೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಲಕ್ನೋ ಆಟಗಾರ ಡಿ ಕಾಕ್ ಬ್ಯಾಟಿಂಗ್, ಎದುರಾಳಿ ತಂಡಕ್ಕೆ ಸಿಂಹಸ್ವಪ್ನವಾಗಿ ಕಾಡಿದೆ.

ಐಪಿಎಲ್ 2024ರಲ್ಲಿ ಡಿ ಕಾಕ್ ಅರ್ಧಶತಕ ಗಳಿಸಿದ್ದು ಇದೇ ಮೊದಲಲ್ಲ. ಕಳೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 54 ರನ್‌’ಗಳ ಅಮೂಲ್ಯ ಇನ್ನಿಂಗ್ಸ್ ಆಡಿದ್ದರು. ತಂಡವನ್ನು 21 ರನ್‌’ಗಳಿಂದ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಇದೀಗ ಡಿ ಕಾಕ್ ಬ್ಯಾಟ್ ಮತ್ತೊಮ್ಮೆ ಮಾತನಾಡಿದೆ. ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಅವರು ತಂಡಕ್ಕೆ ಅತ್ಯುತ್ತಮ ಕೊಡುಗೆ ನೀಡಿದ್ದಾರೆ.

ಇದನ್ನೂ ಓದಿ: ಟಗರು ಪುಟ್ಟಿ ಶ್ರೇಯಾಂಕ ಪಾಟೀಲ್’ಗೆ ಬಾಯ್ ಫ್ರೆಂಡ್ ಇದ್ದಾರಾ? ಕಡೆಗೂ ಸಿಕ್ಕೇಬಿಡ್ತು ಸ್ಪಷ್ಟ ಉತ್ತರ

ಈ ಪಂದ್ಯದಲ್ಲಿ ಕ್ವಿಂಟನ್ ಡಿ ಕಾಕ್‌ ಕೇವಲ 56 ಎಸೆತಗಳಲ್ಲಿ 5 ಸಿಕ್ಸರ್ ಮತ್ತು 8 ಬೌಂಡರಿಗಳ ಸಹಾಯದಿಂದ 82 ರನ್‌’ಗಳ ಪ್ರಬಲ ಇನ್ನಿಂಗ್ಸ್ ಆಡಿದ್ದಾರೆ. ಅವರ ಇನಿಂಗ್ಸ್‌’ನಿಂದಾಗಿ ತಂಡ ಕೇವಲ 16 ಓವರ್‌’ಗಳಲ್ಲಿ 140 ರನ್‌’ಗಳ ಗಡಿ ದಾಟಿತ್ತು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News