104 ಪಂದ್ಯಕ್ಕೆ 530 ವಿಕೆಟ್... ಟೆಸ್ಟ್‌ನಲ್ಲಿ ಚರಿತ್ರೆ ಸೃಷ್ಟಿಸಿದ ಆರ್ ಅಶ್ವಿನ್! ಈ ದಿಗ್ಗಜನ ವಿಶ್ವದಾಖಲೆ ಹಿಂದಿಕ್ಕಿ ಅಗ್ರಸ್ಥಾನದಲ್ಲಿ ನಿಂತೇಬಿಟ್ರು ಭಾರತದ ಸ್ಪಿನ್ ಮಾಂತ್ರಿಕ
India vs New Zealand, 2nd Test: ಈ ಹಿಂದೆ ಈ ದಾಖಲೆಯ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಸ್ಪಿನ್ನರ್ ನಾಥನ್ ಲಿಯಾನ್ ಅಗ್ರಸ್ಥಾನದಲ್ಲಿದ್ದರು. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ 78 ಇನ್ನಿಂಗ್ಸ್‌ಗಳಲ್ಲಿ 1809.2 ಓವರ್‌ಗಳನ್ನು ಬೌಲ್ ಮಾಡಿದ ಲಿಯಾನ್ ಒಟ್ಟು 187 ವಿಕೆಟ್‌ಗಳನ್ನು ಕಬಳಿಸಿ ವಿಶ್ವದಾಖಲೆ ನಿರ್ಮಿಸಿದ್ದರು.
India vs New Zealand, 2nd Test: ಟೀಂ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ಬರೆದಿದ್ದಾರೆ. ಪುಣೆಯಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ 2ನೇ ಟೆಸ್ಟ್ ನಲ್ಲಿ ಎರಡು ವಿಕೆಟ್ ಪಡೆಯುವ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಸರಣಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡರು.
ಇದನ್ನೂ ಓದಿ: ಕಲಿಯುಗದ ಬಗ್ಗೆ ವಿಷ್ಣು ಪುರಾಣದಲ್ಲಿ ಉಲ್ಲೇಖಿಸಿದ್ದ ಈ 4 ಮಾತುಗಳು ಇಂದು ನಿಜವಾಗುತ್ತಿವೆ..!
ಈ ಹಿಂದೆ ಈ ದಾಖಲೆಯ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಸ್ಪಿನ್ನರ್ ನಾಥನ್ ಲಿಯಾನ್ ಅಗ್ರಸ್ಥಾನದಲ್ಲಿದ್ದರು. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ 78 ಇನ್ನಿಂಗ್ಸ್‌ಗಳಲ್ಲಿ 1809.2 ಓವರ್‌ಗಳನ್ನು ಬೌಲ್ ಮಾಡಿದ ಲಿಯಾನ್ ಒಟ್ಟು 187 ವಿಕೆಟ್‌ಗಳನ್ನು ಕಬಳಿಸಿ ವಿಶ್ವದಾಖಲೆ ನಿರ್ಮಿಸಿದ್ದರು. ಇದೀಗ ಅಶ್ವಿನ್ ಅವರು ಆಸೀಸ್ ಆಟಗಾರ ಲಿಯಾನ್ ಅವರನ್ನು ಹಿಂದಕ್ಕೆ ತಳ್ಳಿ ಅಗ್ರಸ್ಥಾನಕ್ಕೆ ತಲುಪಿದ್ದಾರೆ.
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಟೆಸ್ಟ್ ಸರಣಿಯಲ್ಲಿ ಅಶ್ವಿನ್ ಒಟ್ಟು 74 ಇನ್ನಿಂಗ್ಸ್‌ಗಳನ್ನು ಬೌಲ್ ಮಾಡಿದ್ದರು.. ಈ ಬಾರಿ ಒಟ್ಟು 188* ವಿಕೆಟ್ ಪಡೆದು ಹೊಸ ಇತಿಹಾಸ ನಿರ್ಮಿಸಿದ್ದಲ್ಲದೆ, ಈ ಮೂಲಕ ಡಬ್ಲ್ಯುಟಿಸಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡರು.
ಪ್ರಸ್ತುತ 188 ವಿಕೆಟ್‌ಗಳನ್ನು ಹೊಂದಿರುವ ರವಿಚಂದ್ರನ್ ಅಶ್ವಿನ್ ಅವರಿಗೆ 200 ವಿಕೆಟ್‌ಗಳನ್ನು ತಲುಪಲು ಇನ್ನೂ 12 ವಿಕೆಟ್‌ಗಳ ಅಗತ್ಯವಿದೆ. ಇದೀಗ ನ್ಯೂಜಿಲೆಂಡ್ ವಿರುದ್ಧ 2ನೇ ಟೆಸ್ಟ್ ಪಂದ್ಯ ನಡೆಯುತ್ತಿದೆ. ಆ ಬಳಿಕ ಮೂರನೇ ಟೆಸ್ಟ್ ಪಂದ್ಯ ಮುಂಬೈನಲ್ಲಿ ನಡೆಯಲಿದೆ. ಈ ಪಂದ್ಯಗಳ ಮೂಲಕ ಅಶ್ವಿನ್ ಇನ್ನೂರು ವಿಕೆಟ್ ಗಡಿ ದಾಟುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.
ರವಿಚಂದ್ರನ್ ಅಶ್ವಿನ್ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದವರ ಪೈಕಿ ಏಳನೇ ಸ್ಥಾನದಲ್ಲಿದ್ದಾರೆ. ಇದುವರೆಗೆ 104* ಟೆಸ್ಟ್ ಪಂದ್ಯಗಳನ್ನಾಡಿರುವ ಅಶ್ವಿನ್ 4453 ಓವರ್ ಗಳಲ್ಲಿ ಒಟ್ಟು 530* ವಿಕೆಟ್ ಕಬಳಿಸಿದ್ದಾರೆ. ಅಲ್ಲದೆ, ಅನಿಲ್ ಕುಂಬ್ಳೆ (619) ನಂತರ ಟೆಸ್ಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್ ಅಂದ್ರೆ ಅದು ಅಶ್ವಿನ್ ಅವರೇ...
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ