Covid 19 ಸೋಂಕಿನಿಂದ ಬಳಲುತ್ತಿರುವ R Ashwin ಕುಟುಂಬ, ಐಪಿಎಲ್ನಿಂದ ವಿರಾಮ ಪಡೆದ ಕ್ರಿಕೆಟಿಗ
ನನ್ನ ಕುಟುಂಬವು #COVID19 ವಿರುದ್ಧ ಹೋರಾಡುತ್ತಿದೆ ಮತ್ತು ಈ ಕಠಿಣ ಸಮಯದಲ್ಲಿ ನಾನು ಅವರನ್ನು ಬೆಂಬಲಿಸಲು ಬಯಸುತ್ತೇನೆ- ಹಿರಿಯ ಆಫ್ ಸ್ಪಿನ್ನರ್ ಆರ್. ಅಶ್ವಿನ್
ನವದೆಹಲಿ: ಟೀಮ್ ಇಂಡಿಯಾ ಮತ್ತು ದೆಹಲಿ ಕ್ಯಾಪಿಟಲ್ಸ್ ಸ್ಟಾರ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರ ಕುಟುಂಬವು ಕರೋನಾವೈರಸ್ ಹಿಡಿತಕ್ಕೆ ಸಿಲುಕಿರುವ ಹಿನ್ನಲೆಯಲ್ಲಿ ಅವರು ತಮ್ಮ ಐಪಿಎಲ್ ಋತುವನ್ನು ಮೊಟಕುಗೊಳಿಸಿದ್ದಾರೆ. ಈ ಐಪಿಎಲ್ ಋತುವಿನಲ್ಲಿ ಅಶ್ವಿನ್ ಒಟ್ಟು 5 ಪಂದ್ಯಗಳನ್ನು ಆಡಿದ್ದು, ಇದರಲ್ಲಿ ಅವರು ಕೇವಲ ಒಂದು ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಚೆನ್ನೈನಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ತಮ್ಮ ತಂಡದ ಸೂಪರ್ ಓವರ್ ಗೆಲುವಿನ ನಂತರ ಆರ್. ಅಶ್ವಿನ್ (R Ashwin) ಭಾನುವಾರ ರಾತ್ರಿ ಈ ಸುದ್ದಿಯನ್ನು ಟ್ವೀಟ್ ಮಾಡಿದ್ದಾರೆ. ಪರಿಸ್ಥಿತಿ ಸುಧಾರಿಸಿದರೆ ಅವರು ಶೀಘ್ರವೇ ತಮ್ಮ ತಂಡಕ್ಕೆ ಹಿಂದಿರುಗುವ ನಿರೀಕ್ಷೆಯಿದೆ.
IPL 2021: ರಾಜಸ್ಥಾನ್ ರಾಯಲ್ಸ್‌ಗೆ ಮತ್ತೊಂದು ದೊಡ್ಡ ಹೊಡೆತ
ಈ ಕುರಿತಂತೆ ಟ್ವೀಟ್ ಮಾಡಿರುವ ಆರ್. ಅಶ್ವಿನ್, 'ಈ ಐಪಿಎಲ್ (IPL) ಋತುವಿನಲ್ಲಿ ನಾಳೆಯಿಂದ ವಿರಾಮ ತೆಗೆದುಕೊಳ್ಳುತ್ತೇನೆ. ನನ್ನ ಕುಟುಂಬ ಸದಸ್ಯರು ಕರೋನಾ ವಿರುದ್ಧ ಹೋರಾಡುತ್ತಿದ್ದಾರೆ ಮತ್ತು ಈ ಕಠಿಣ ಪರಿಸ್ಥಿತಿಯಲ್ಲಿ ನಾನು ಅವರೊಂದಿಗೆ ಇರಲು ಬಯಸುತ್ತೇನೆ. ಎಲ್ಲವೂ ಸುಧಾರಿಸಿದರೆ ನಾನು ಆದಷ್ಟು ಬೇಗ ಆಟಕ್ಕೆ ಹಿಂತಿರುಗುತ್ತೇನೆ. ದೆಹಲಿ ಕ್ಯಾಪಿಟಲ್ಸ್ (Delhi Capitals) ಗೆ ನನ್ನ ಧನ್ಯವಾದಗಳು' ಎಂದು ಬರೆದಿದ್ದಾರೆ.
ಇದನ್ನೂ ಓದಿ - IPL RCB vs CSK: ಮೈದಾನದಲ್ಲಿ ರವೀಂದ್ರ ಜಡೇಜಾರನ್ನು ಹೆದರಿಸಿದ Mohammed Siraj, ವಿಡಿಯೋ ವೈರಲ್
ಪಾಯಿಂಟ್ ಟೇಬಲ್‌ನಲ್ಲಿ ಎರಡನೇ ಸ್ಥಾನದಲ್ಲಿ ದೆಹಲಿ ಕ್ಯಾಪಿಟಲ್ಸ್:
ಪಾಯಿಂಟ್ ಟೇಬಲ್‌ನಲ್ಲಿ ದೆಹಲಿ ಕ್ಯಾಪಿಟಲ್ಸ್ ತಂಡವು ನಾಲ್ಕು ಗೆಲುವುಗಳು ಮತ್ತು ಒಂದು ಸೋಲಿನಿಂದ ಎಂಟು ಅಂಕಗಳೊಂದಿಗೆ ಎರಡನೇ ಸ್ಥಾನವನ್ನು ತಲುಪಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.