ನವದೆಹಲಿ: ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ಕನ್ನಡಿಗ, ‘ಗೋಡೆ’ ಖ್ಯಾತಿಯ ರಾಹುಲ್ ದ್ರಾವಿಡ್(Rahul Dravid) ಅವರನ್ನು ನೇಮಕ ಮಾಡಲಾಗಿದೆ ಎಂದು ವರದಿಯಾಗಿದೆ. ಭಾರತ ತಂಡದ ಮಾಜಿ ನಾಯಕ ರಾಹುಲ್ ದ್ರಾವಿಡ್ ರಾಷ್ಟ್ರೀಯ ತಂಡದ ಮುಖ್ಯ ಕೋಚ್ ಆಗಿ ಅಧಿಕಾರ ಸ್ವೀಕರಿಸಲು ಒಪ್ಪಿಕೊಂಡಿದ್ದಾರೆ. ಶುಕ್ರವಾರ ರಾತ್ರಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್‌ನ 14ನೇ ಆವೃತ್ತಿ(IPL 2021)ಯ ಫೈನಲ್‌ನಲ್ಲಿ ಈ ಬೆಳವಣಿಗೆ ನಡೆದಿದೆ.


COMMERCIAL BREAK
SCROLL TO CONTINUE READING

ಹಾಲಿ ಕೋಚ್ ರವಿಶಾಸ್ತ್ರಿ(Ravi Shastri) ಅವರ ಅವಧಿ ಮುಕ್ತಾಯವಾದ ಬಳಿಕ ದ್ರಾವಿಡ್ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ ಎಂದು ಸುದ್ದಿಸಂಸ್ಥೆ ANI ವರದಿ ಮಾಡಿದೆ. ಈ ಮಹತ್ವದ ಬೆಳವಣಿಗೆಗಳ ಬಗ್ಗೆ ತಿಳಿದಿರುವ ಮೂಲಗಳು ANI ಜೊತೆ ಮಾತನಾಡಿದ್ದು, NCA ಮುಖ್ಯಸ್ಥರು ರಾಷ್ಟ್ರೀಯ ತಂಡದ ಕೋಚ್ ಆಗಿ ಅಧಿಕಾರ ವಹಿಸಿಕೊಳ್ಳಲು ಸಿದ್ಧರಾಗಿದ್ದಾರೆ ಎಂದು ದೃಢಪಡಿಸಿವೆ. ಆದರೆ ಕೋಚ್ ನೇಮಕ ವಿಚಾರವಾಗಿ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಇನ್ನೂ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿಲ್ಲ.


ಇದನ್ನೂ ಓದಿ: IPL 2021: ಈ ಒಂದೇ ಒಂದು ತಪ್ಪಿನಿಂದ ಕೋಲ್ಕತ್ತಾಗೆ ಕೈತಪ್ಪಿದ ಐಪಿಎಲ್ ಟ್ರೋಫಿ..!


‘ಭಾರತ ತಂಡದ ಮುಖ್ಯ ಕೋಚ್ ಆಗಲು ದ್ರಾವಿಡ್ ಒಪ್ಪಿಕೊಂಡಿದ್ದಾರೆ. ವಿಕ್ರಮ್ ರಾಥೋಡ್(Vikram Rathour) ಟೀಂ ಇಂಡಿಯಾದ ಬ್ಯಾಟಿಂಗ್ ಕೋಚ್ ಆಗಿ ಉಳಿದಿರುವಾಗ ಇತರ ಸ್ಥಾನಗಳನ್ನು ಈಗ ನೋಡಲಾಗುವುದು. ಭಾರತೀಯ ತಂಡವು ಸಂಪೂರ್ಣವಾಗಿ ಯುವ ಆಟಗಾರರ ಹೊಂದುವ ಸ್ಥಿತಿಯಲ್ಲಿದೆ ಮತ್ತು ಇವರೆಲ್ಲರೂ ದ್ರಾವಿಡ್ ಜೊತೆ ಕೆಲಸ ಮಾಡಿದ್ದಾರೆ. ಕ್ರಿಕೆಟ್ ಮೈದಾನದಲ್ಲಿ ಮಿಂಚಲು ಸಿದ್ಧವಾಗಿರುವ ಯುವ ಕ್ರಿಕೆಟಿಗರ ಭವಿಷ್ಯದ ದೃಷ್ಟಿಯಿಂದ ಇದು ಉತ್ತಮ ಆಯ್ಕೆಯಾಗಿದೆ’ ಎಂದು ಮೂಲಗಳು ತಿಳಿಸಿವೆ.


ಬಿಸಿಸಿಐ(BCCI)ಗೆ ದ್ರಾವಿಡ್ ಯಾವಾಗಲೂ ಆದ್ಯತೆಯ ಆಯ್ಕೆಯಾಗಿದ್ದರು. ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಕೂಡ ದ್ರಾವಿಡ್ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದರು. ಈ ಬಗ್ಗೆ ಬಿಸಿಸಿಯ ಕಾರ್ಯದರ್ಶಿ ಜಯ್ ಶಾ ಮತ್ತು ಗಂಗೂಲಿ ಇಬ್ಬರೂ ಕೂಡ ದ್ರಾವಿಡ್ ಜೊತೆ ಸುದೀರ್ಘವಾಗಿ ಚರ್ಚಿಸಿದ್ದರು. ರವಿಶಾಸ್ತ್ರೀ ಅವಧಿ ಮುಕ್ತಾಯದ ಬಳಿಕ ಟೀಂ ಇಂಡಿಯಾದ ಜವಾಬ್ದಾರಿ ವಹಿಸಿಕೊಳ್ಳುವಂತೆ ದ್ರಾವಿಡ್ ಮನವೊಲಿಸಲಾಗಿತ್ತು.


ಇದನ್ನೂ ಓದಿ: IPL 2021 Final: ಮಿಂಚಿದ ಡುಪ್ಲೆಸಿಸ್, ಚೆನ್ನೈ ಸೂಪರ್ ಕಿಂಗ್ಸ್ ಗೆ ನಾಲ್ಕನೇ ಬಾರಿಗೆ ಐಪಿಎಲ್ ಚಾಂಪಿಯನ್ ಪಟ್ಟ


ಐಸಿಸಿ ಟಿ-20 ವಿಶ್ವಕಪ್ ಟೂರ್ನಿ(T20 World Cup Tournament)ಯ ಬಳಿಕ ಮುಖ್ಯ ಕೋಚ್ ಆಗಿ ರವಿ ಶಾಸ್ತ್ರಿ ಅವಧಿ ಮುಕ್ತಾಯಗೊಳ್ಳಲಿದೆ. ಬಳಿಕ ನವೆಂಬರ್‌ನಲ್ಲಿ ಭಾರತದಲ್ಲಿ ನ್ಯೂಜಿಲೆಂಡ್ ವಿರುದ್ಧ ಸರಣಿ ನಡೆಯಲಿದ್ದು, ಕೋಚ್ ಆಗಿ ದ್ರಾವಿಡ್ ತಂಡವನ್ನು ಸೇರಿಕೊಳ್ಳಲಿರುವುದು ಬಹುತೇಕ ಖಚಿತ ಎಂದು ವರದಿಯಾಗಿದೆ. ಮತ್ತೊಂದೆಡೆ ಪರಸ್ ಮ್ಹಂಬ್ರೆ(Paras Mhambrey) ಬೌಲಿಂಗ್ ಕೋಚ್ ಆಗಲಿದ್ದಾರೆ ಎಂಬ ವರದಿಗಳಿವೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ