ಚೊಚ್ಚಲ ಪ್ರವೇಶಕ್ಕಾಗಿ ಈ ಆಟಗಾರ ಕಾಯುತ್ತಿದ್ದರೆ ರಾಹುಲ್ ಹೀಗೆ ಮಾಡಬಹುದೇ?

ಇನ್ನು ಈ ಪಂದ್ಯದಲ್ಲಿ ಪ್ಲೇಯಿಂಗ್ ಇಲೆವೆನ್ ನಲ್ಲಿ ಕೊಂಚ ಬದಲಾವಣೆ ಮಾಡಲಾಗಿದ್ದು, ಈ ಪಂದ್ಯದಲ್ಲೂ ಬಲಿಷ್ಠ ಬ್ಯಾಟ್ಸ್‌ಮನ್‌ಗೆ ಸ್ಥಾನ ನೀಡಿಲ್ಲ. ಈ ಆಟಗಾರ 31ನೇ ವಯಸ್ಸಿನಲ್ಲಿ ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡಲು ಕಾಯುತ್ತಿದ್ದಾರೆ.

Written by - Bhavishya Shetty | Last Updated : Aug 20, 2022, 01:33 PM IST
    • ಭಾರತ ಮತ್ತು ಜಿಂಬಾಬ್ವೆ ನಡುವಿನ ಮೂರು ಪಂದ್ಯಗಳ ODI ಸರಣಿ
    • ಪ್ಲೇಯಿಂಗ್ ಇಲೆವೆನ್ ನಲ್ಲಿ ಕೊಂಚ ಬದಲಾವಣೆ
    • ಸ್ಫೋಟಕ ಬ್ಯಾಟ್ಸ್‌ಮನ್ ರಾಹುಲ್ ತ್ರಿಪಾಠಿಗೆ ತಂಡ ಪ್ರವೇಶಕ್ಕೆ ಸಿಗುತ್ತಿಲ್ಲ ಸ್ಥಾನ
ಚೊಚ್ಚಲ ಪ್ರವೇಶಕ್ಕಾಗಿ ಈ ಆಟಗಾರ ಕಾಯುತ್ತಿದ್ದರೆ ರಾಹುಲ್ ಹೀಗೆ ಮಾಡಬಹುದೇ? title=
Team India

ಭಾರತ ಮತ್ತು ಜಿಂಬಾಬ್ವೆ ನಡುವಿನ ಮೂರು ಪಂದ್ಯಗಳ ODI ಸರಣಿಯ ಎರಡನೇ ಪಂದ್ಯ (IND vs ZIM Ist Odi) ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ಕೆಎಲ್ ರಾಹುಲ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.  

ಇದನ್ನೂ ಓದಿ: “ಸಚಿನ್ ಗೆ ಎಲ್ಲವೂ ಗೊತ್ತು, ಆದರೆ..” ಆರ್ಥಿಕ ಸಂಕಷ್ಟದ ಬಗ್ಗೆ ಮೌನ ಮುರಿದ ವಿನೋದ್ ಕಾಂಬ್ಳಿ

ಇನ್ನು ಈ ಪಂದ್ಯದಲ್ಲಿ ಪ್ಲೇಯಿಂಗ್ ಇಲೆವೆನ್ ನಲ್ಲಿ ಕೊಂಚ ಬದಲಾವಣೆ ಮಾಡಲಾಗಿದ್ದು, ಈ ಪಂದ್ಯದಲ್ಲೂ ಬಲಿಷ್ಠ ಬ್ಯಾಟ್ಸ್‌ಮನ್‌ಗೆ ಸ್ಥಾನ ನೀಡಿಲ್ಲ. ಈ ಆಟಗಾರ 31ನೇ ವಯಸ್ಸಿನಲ್ಲಿ ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡಲು ಕಾಯುತ್ತಿದ್ದಾರೆ.

ಸ್ಫೋಟಕ ಬ್ಯಾಟ್ಸ್‌ಮನ್ ರಾಹುಲ್ ತ್ರಿಪಾಠಿಗೆ ಟೀಂ ಇಂಡಿಯಾದ ಭಾಗವಾಗಲು ಸಾಧ್ಯವಾಗುತ್ತಿಲ್ಲ. ಈ ಪಂದ್ಯದಲ್ಲಿಯಾದರೂ ಇಂಡಿಯಾದ ಭಾಗವಾಗುವ ಕನಸು ಕಂಡಿದ್ದರು. ಈ ಸರಣಿಯಲ್ಲಿ ರಾಹುಲ್ ತ್ರಿಪಾಠಿಗೆ ಅವಕಾಶ ಸಿಗಬಹುದು ಎಂದು ನಿರೀಕ್ಷಿಸಲಾಗಿತ್ತು, ಆದರೆ ಅದು ಸಂಭವಿಸಿಲ್ಲ. ಐಪಿಎಲ್ 2022 ರ ನಂತರ ರಾಹುಲ್ ತ್ರಿಪಾಠಿ ಮೂರು ಸರಣಿಗಳಲ್ಲಿ ಸ್ಥಾನ ಪಡೆದಿದ್ದರು. ಆದರೆ ಈ ಎಲ್ಲಾ ಸರಣಿಗಳಲ್ಲಿ ಅವರಿಗೆ ಆಡಲು ಅವಕಾಶ ಸಿಕ್ಕಿರಲಿಲ್ಲ. ಇದೀಗ ಮತ್ತೆ ಜಿಂಬಾಬ್ವೆ ಸರಣಿಯಲ್ಲೂ ಇದೇ ರೀತಿ ನಡೆದಿದೆ.

ರಾಹುಲ್ ತ್ರಿಪಾಠಿ ಈ ಪ್ರವಾಸಕ್ಕೂ ಮೊದಲು ಇಂಗ್ಲೆಂಡ್ ಮತ್ತು ಐರ್ಲೆಂಡ್ ಪ್ರವಾಸದಲ್ಲಿ ಟೀಮ್ ಇಂಡಿಯಾದಲ್ಲಿ ಭಾಗಿಯಾಗಿದ್ದರು, ಆದರೆ ಅಲ್ಲಿಯೂ ಅವರಿಗೆ ಪಾದಾರ್ಪಣೆ ಮಾಡುವ ಅವಕಾಶ ಸಿಗಲಿಲ್ಲ. ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಐರ್ಲೆಂಡ್ ವಿರುದ್ಧದ 2 ಟಿ20 ಪಂದ್ಯಗಳಿಗೆ ಮತ್ತು ಇಂಗ್ಲೆಂಡ್ ಪ್ರವಾಸದಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಕೇವಲ 1 ಟಿ20 ಪಂದ್ಯಕ್ಕೆ ಅವರನ್ನು ತಂಡದಲ್ಲಿ ಸೇರಿಸಲಾಯಿತು. ಈ ಪ್ರವಾಸಗಳಲ್ಲಿ ಆಡಿದ T20 ಸರಣಿಯಲ್ಲಿ ರಾಹುಲ್ ತ್ರಿಪಾಠಿ ತಂಡದ ಭಾಗವಾಗಿದ್ದರು, ಆದರೆ ಪ್ಲೇಯಿಂಗ್ 11 ರೊಳಗೆ ಬರಲು ಸಾಧ್ಯವಾಗಲಿಲ್ಲ.

ಐಪಿಎಲ್ 2022 ರಲ್ಲಿ ರಾಹುಲ್ ತ್ರಿಪಾಠಿ ಬಹಳ ಯಶಸ್ವಿ ಆಟಗಾರನಾಗಿ ಹೊರಹೊಮ್ಮಿದ್ದರು. ಈ ಋತುವಿನಲ್ಲಿ ಅವರು 14 ಪಂದ್ಯಗಳಲ್ಲಿ 414 ರನ್ ಗಳಿಸಿದ್ದಾರೆ. ಈ ಅದ್ಭುತ ಪ್ರದರ್ಶನದಿಂದಾಗಿ ಅವರಿಗೆ ತಂಡದಲ್ಲಿ ಸ್ಥಾನ ನೀಡಲಾಗಿತ್ತು. ತ್ರಿಪಾಠಿ ಐಪಿಎಲ್‌ನಲ್ಲಿ ಆರಂಭಿಕರಾಗಿ ಬ್ಯಾಟ್ ಮಾಡುತ್ತಿದ್ದರು. ಜಿಂಬಾಬ್ವೆ ಪ್ರವಾಸದಲ್ಲಿ ಈ ಪಂದ್ಯದ ನಂತರ ಮತ್ತೊಂದು ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲೂ ಅವಕಾಶ ಸಿಗದಿದ್ದರೆ ಚೊಚ್ಚಲ ಪಂದ್ಯದ ನಿರೀಕ್ಷೆ ಮತ್ತಷ್ಟು ಹೆಚ್ಚಾಗಲಿದೆ. 

ಇದನ್ನೂ ಓದಿ: Shocking News : 37,000 ಅಡಿ ಎತ್ತರದಲ್ಲಿ ನಿದ್ರೆಗೆ ಜಾರಿ, ಲ್ಯಾಂಡಿಂಗ್‌ ಮರೆತ ಪೈಲಟ್‌ಗಳು!

ಸದ್ಯ ಕಣದಲ್ಲಿರುವ ಭಾರತ ಜಿಂಬಾಬ್ವೆ ವಿರುದ್ಧ 2ನೇ ಏಕದಿನ ಪಂದ್ಯವನ್ನಾಡುತ್ತಿದೆ. ಶಿಖರ್ ಧವನ್, ಕೆಎಲ್ ರಾಹುಲ್ (ನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್, ದೀಪಕ್ ಹೂಡಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಪ್ರಣಂದ್ ಕೃಷ್ಣ, ಮೊಹಮ್ಮದ್ ಸಿರಾಜ್ ಪ್ಲೇಯಿಂಗ್ ಇಲೆವೆನ್ ನಲ್ಲಿದ್ದಾರೆ.

 

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News