IND vs NZ 2nd ODI: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯ ಇಂದು ಹ್ಯಾಮಿಲ್ಟನ್‌ನಲ್ಲಿ ನಡೆಯುತ್ತಿದೆ. ಆದರೆ ಈ ಪಂದ್ಯದ ಮೇಲೆ ವರುಣನ ಕಣ್ಣು ಬಿದ್ದಿದ್ದು, ಮಳೆಯಿಂದಾಗಿ ಪಂದ್ಯ ಸ್ಥಗಿತಗೊಳಿಸಲಾಗಿದೆ.


COMMERCIAL BREAK
SCROLL TO CONTINUE READING

ಮಳೆಯಿಂದಾಗಿ 4.5 ಓವರ್ ಗೆ ಪಂದ್ಯವನ್ನು ನಿಲ್ಲಿಸಲಾಗಿದ್ದು, ಈವರೆಗೆ ಟೀಂ ಇಂಡಿಯಾ ಯಾವುದೇ ವಿಕೆಟ್ ನಷ್ಟವಿಲ್ಲದೆ 22 ರನ್ ಗಳಿಸಿದೆ. ಶುಭಮನ್ ಗಿಲ್ (19) ಮತ್ತು ಶಿಖರ್ ಧವನ್ (2) ಕ್ರೀಸ್ ನಲ್ಲಿದ್ದಾರೆ.


ಇದನ್ನೂ ಓದಿ: Team India : ಟಿ20 ವಿಶ್ವಕಪ್ ಸೋಲಿನ ನಂತರ ಎಚ್ಚೆತ್ತಗೊಂಡ ಬಿಸಿಸಿಐ, ಈ ಅನುಭವಿ ಟೀಂನಿಂದ ಔಟ್! 


ಹ್ಯಾಮಿಲ್ಟನ್ನ ಸೆಡನ್ ಪಾರ್ಕ್ ನಲ್ಲಿ ನಡೆಯುತ್ತಿರುವ 2ನೇ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿದ್ದು, 4.5 ಓವರ್ ಗಳಲ್ಲಿ ಭಾರತದ ಸ್ಕೋರ್ 22/0 ಆಗಿದೆ. ಇನ್ನು ಭಾರತ ತಂಡದಲ್ಲಿ ಸಂಜು ಸ್ಯಾಮ್ಸನ್ ಮತ್ತು ಶಾರ್ದೂಲ್ ಠಾಕೂರ್ ಬದಲಿಗೆ ದೀಪಕ್ ಹೂಡಾ ಮತ್ತು ದೀಪಕ್ ಚಹಾರ್ ಅವರನ್ನು ಬದಲಾವಣೆಗಳನ್ನು ಮಾಡಲಾಗಿದೆ.


ಇಂದಿನ ಹವಾಮಾನ ಮುನ್ಸೂಚನೆಯು ಹ್ಯಾಮಿಲ್ಟನ್ನಲ್ಲಿ ಭಾರೀ ಮಳೆಯಾಗಲಿದೆ ಎಂದು ತಿಳಿಸಿತ್ತು. ಇದೀಗ ಭವಿಷ್ಯವು ನಿಜವಾಗಿದೆ ಎಂದು ತೋರುತ್ತಿದೆ. ಸದ್ಯಕ್ಕೆ ಕಾದು ನೋಡುವ ಪರಿಸ್ಥಿತಿ ಎದುರಾಗಿದೆ.  


ಈಗಾಗಲೆ ಮೊದಲ ಪಂದ್ಯ ಸೋತಿರುವ ಟೀಂ ಇಂಡಿಯಾ ಸದ್ಯ ಸರಣಿಯಲ್ಲಿ 0-1 ಹಿನ್ನಡೆಯಲ್ಲಿದ್ದು, ಇಂತಹ ಪರಿಸ್ಥಿತಿಯಲ್ಲಿ ಮುಂದಿನ ಎರಡು ಪಂದ್ಯಗಳನ್ನು ಗೆಲ್ಲಲೇಬೇಕಾದ ಅನಿವಾರ್ಯತೆ ಎದುರಾಗಿತ್ತು. ಆದರೆ ಎರಡನೇ ಏಕದಿನ ಪಂದ್ಯಕ್ಕೆ ಮಳೆ ಅಡ್ಡಿ ಮಾಡಿದ್ದು, ನ್ಯೂಜಿಲೆಂಡ್‌ನಲ್ಲಿ ಸರಣಿ ಗೆಲ್ಲುವ ಕನಸಿಗೆ ಬ್ರೇಕ್ ಬೀಳುತ್ತಾ ಎಂಬ ಅನುಮಾನ ಮೂಡಿದೆ.


ಟೀಮ್ ಇಂಡಿಯಾ ಪ್ಲೇಯಿಂಗ್ 11: ಶಿಖರ್ ಧವನ್, ಶುಬ್ಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ದೀಪಕ್ ಚಾಹರ್, ಉಮ್ರಾನ್ ಮಲಿಕ್, ಅರ್ಷದೀಪ್ ಸಿಂಗ್, ಯುಜ್ವೇಂದ್ರ ಚಾಹಲ್.


ಇದನ್ನೂ ಓದಿ: Gambhir on Suryakumar Yadav: ಟೆಸ್ಟ್ ಮಾದರಿಗೆ ಆಹ್ವಾನ ಸಾಧ್ಯತೆ: ಸೂರ್ಯಕುಮಾರ್ ಗೆ ಕ್ರಿಕೆಟ್ ದಿಗ್ಗಜರ ‘ಗಂಭೀರ’ ಸಲಹೆ


ನ್ಯೂಜಿಲೆಂಡ್ ಪ್ಲೇಯಿಂಗ್ 11: ಫಿನ್ ಅಲೆನ್, ಡೆವೊನ್ ಕಾನ್ವೇ, ಕೇನ್ ವಿಲಿಯಮ್ಸನ್, ಟಾಮ್ ಲ್ಯಾಥಮ್, ಡ್ಯಾರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಮೈಕೆಲ್ ಬ್ರೇಸ್‌ವೆಲ್, ಮ್ಯಾಟ್ ಹೆನ್ರಿ, ಟಿಮ್ ಸೌಥಿ, ಲಾಕಿ ಫರ್ಗುಸನ್.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.