ಲಕ್ನೋ ವಿರುದ್ಧದ ಸೋಲಿನ ಬಗ್ಗೆ ತನಿಖೆ ನಡೆಸಬೇಕೆಂದು ಬಿಹಾನಿ ಒತ್ತಾಯಿಸಿದ್ದಾರೆ. ಈ ವಿಷಯವನ್ನು ಕೂಲಂಕಷವಾಗಿ ತನಿಖೆ ನಡೆಸಬೇಕೆಂದು ಅವರು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಮತ್ತು ಇತರ ತನಿಖಾ ಸಂಸ್ಥೆಗಳನ್ನು ಒತ್ತಾಯಿಸಿದ್ದಾರೆ.

Indian Premier League 2025: 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ನ 36ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡವು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 2 ರನ್ಗಳಿಂದ ಸೋಲು ಕಂಡಿತ್ತು. ಈ ಸೋಲಿನ ನಂತರ ರಾಜಸ್ಥಾನ್ ರಾಯಲ್ಸ್ ವಿರುದ್ಧ ಮ್ಯಾಚ್ ಫಿಕ್ಸಿಂಗ್ ಆರೋಪ ಕೇಳಿಬಂದಿದೆ. ರಾಜಸ್ಥಾನ ಕ್ರಿಕೆಟ್ ಅಸೋಸಿಯೇಷನ್ ತಾತ್ಕಾಲಿಕ ಸಮಿತಿ ಸಂಚಾಲಕ ಜೈದೀಪ್ ಬಿಹಾನಿ ಆರ್ಆರ್ ಮ್ಯಾಚ್ ಫಿಕ್ಸಿಂಗ್ ಮಾಡಿದೆ ಎಂದು ಆರೋಪಿಸಿದ್ದಾರೆ.
ಆರೋಪಗ ಆಧಾರರಹಿತ ಎಂದ ರಾಜಸ್ಥಾನ ಫ್ರಾಂಚೈಸಿ!!
ತಮ್ಮ ವಿರುದ್ಧ ಕೇಳಿಬಂದಿರುವ ಆರೋಪಕ್ಕೆ ಪ್ರತಿಕ್ರಿಯಿಸಿರುವ ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯು, ʼಜೈದೀಪ್ ಬಿಹಾನಿ ಅವರ ಎಲ್ಲಾ ಹೇಳಿಕೆಗಳು ಆಧಾರರಹಿತ ಮತ್ತು ಸುಳ್ಳು ಎಂದು ಹೇಳಿದೆ. ಇದೀಗ ಫ್ರಾಂಚೈಸಿಯು ಕ್ರೀಡಾ ಮಂಡಳಿ ಅಧ್ಯಕ್ಷ ನೀರಜ್ ಕೆ ಪವನ್, ಮುಖ್ಯಮಂತ್ರಿ ಮತ್ತು ಕ್ರೀಡಾ ಸಚಿವರಿಗೆ ಪತ್ರ ಬರೆದಿದೆ. ಆರ್ಸಿಎ ಸಂಚಾಲಕ ಜೈದೀಪ್ ಬಿಹಾನಿ ಅವರಿಂದ ಭವಿಷ್ಯದಲ್ಲಿ ಇಂತಹ ಹೇಳಿಕೆಗಳು ಬರದಂತೆ ತಡೆಯಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಲಾಗದೆ.
ಜೈದೀಪ್ ಬಿಹಾನಿಯಿಂದ ಗಂಭೀರ ಆರೋಪ!
ಚಾನೆಲ್ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಬಿಹಾನಿ, ʼತಮ್ಮ ತವರು ನೆಲದಲ್ಲಿ ರಾಜಸ್ಥಾನ್ಗೆ ಕೊನೆಯ ಓವರ್ನಲ್ಲಿ ಕೇವಲ 9 ರನ್ಗಳ ಅಗತ್ಯವಿತ್ತು. ಆದರೆ ಈ ಪಂದ್ಯದಲ್ಲಿ ತಂಡ ಹೀನಾಯ ಸೋಲು ಕಂಡಿತು. ಈ ಘಟನೆ ಗ್ರಹಿಕೆಗೆ ಮೀರಿದ್ದು, ಇಲ್ಲಿ ಏನೋ ತಪ್ಪು ನಡೆದಿದೆ ಎಂದು ನನಗೆ ಅನಿಸುತ್ತಿದೆʼ ಅಂತಾ ಹೇಳಿದ್ದಾರೆ. 2013ರಲ್ಲಿ ತಂಡದ ಕೆಲವು ಆಟಗಾರರು ಸ್ಪಾಟ್ ಫಿಕ್ಸಿಂಗ್ನಲ್ಲಿ ಭಾಗಿಯಾಗಿದ್ದರು ಎಂದು ನೆನಪಿಸಿರುವ ಅವರು, ಫ್ರಾಂಚೈಸ್ ಮಾಲೀಕ ರಾಜ್ ಕುಂದ್ರಾ ವಿರುದ್ಧ ಬೆಟ್ಟಿಂಗ್ ಆರೋಪವನ್ನೂ ಹೊರಿಸಲಾಗಿತ್ತು. ಇದರಿಂದ ರಾಜಸ್ಥಾನ ರಾಯಲ್ಸ್ ತಂಡವನ್ನು 2016 ಮತ್ತು 2017ರ ಋತುಗಳಲ್ಲಿ ನಿಷೇಧಿಸಲಾಗಿತ್ತು. ಗೆಲ್ಲಲು ಕೇವಲ 6 ಎಸೆತಗಳಲ್ಲಿ 9 ರನ್ ಗಳಿಸದೆ ಸೋತ ತಂಡದ ಬಗ್ಗೆ ನನಗೆ ಅನುಮಾನ ವ್ಯಕ್ತವಾಗಿದೆʼ ಅಂತಾ ಆರೋಪಿಸಿದ್ದಾರೆ.
ಲಕ್ನೋ ವಿರುದ್ಧದ ಸೋಲಿನ ಬಗ್ಗೆ ತನಿಖೆ ನಡೆಸಬೇಕೆಂದು ಬಿಹಾನಿ ಒತ್ತಾಯಿಸಿದ್ದಾರೆ. ಈ ವಿಷಯವನ್ನು ಕೂಲಂಕಷವಾಗಿ ತನಿಖೆ ನಡೆಸಬೇಕೆಂದು ಅವರು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಮತ್ತು ಇತರ ತನಿಖಾ ಸಂಸ್ಥೆಗಳನ್ನು ಒತ್ತಾಯಿಸಿದ್ದಾರೆ. ಇಂತಹ ಸೋಲು ತಂಡದ ಖ್ಯಾತಿಗೆ ಧಕ್ಕೆ ತರುವುದಲ್ಲದೆ, ಈ ರೀತಿಯ ಪಂದ್ಯವನ್ನು ಸೋತರೆ ಯುವ ಆಟಗಾರರ ನೈತಿಕ ಸ್ಥೈರ್ಯ ಕುಸಿಯುತ್ತದೆʼ ಎಂದು ಹೇಳಿದ್ದಾರೆ.
ಕೊನೆಯ ಓವರ್ನಲ್ಲಿ ಸೋತಿದ್ದ ರಾಜಸ್ಥಾನ!!
ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ರಾಜಸ್ಥಾನ ರಾಯಲ್ಸ್ ಗೆಲುವಿಗೆ ಕೊನೆಯ ಓವರ್ನಲ್ಲಿ 9 ರನ್ಗಳು ಬೇಕಾಗಿದ್ದವು. ಅವೇಶ್ ಖಾನ್ ಕೊನೆಯ ಓವರ್ ಬೌಲಿಂಗ್ ಮಾಡುತ್ತಿದ್ದರು. ರಾಜಸ್ಥಾನ ಪರ ಧ್ರುವ್ ಜುರೆಲ್ ಮತ್ತು ಶಿಮ್ರಾನ್ ಹೆಟ್ಮೆಯರ್ ಕ್ರೀಸ್ನಲ್ಲಿದ್ದರು. ಕೊನೆಯ ಓವರ್ನಲ್ಲಿ ಆವೇಶ್ ಅದ್ಭುತ ಬೌಲಿಂಗ್ ಮಾಡಿ ಕೇವಲ 6 ರನ್ಗಳನ್ನ ನೀಡಿದ್ದರು. ಪರಿಣಾಮ ಲಕ್ನೋ ತಂಡವು ಆ ಪಂದ್ಯವನ್ನು 2 ರನ್ಗಳಿಂದ ಗೆದ್ದಿತು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.