WTC Final 2023: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್‌ ಶಿಪ್ (WTC) ನ ಅಂತಿಮ ಪಂದ್ಯವು ಜೂನ್ 7 ರಿಂದ ಜೂನ್ 11 ರವರೆಗೆ ಇಂಗ್ಲೆಂಡ್‌ ನ ಕೆನ್ನಿಂಗ್ಟನ್ ಓವಲ್ (ಲಂಡನ್) ಮೈದಾನದಲ್ಲಿ ನಡೆಯಲಿದೆ. ಟೀಂ ಇಂಡಿಯಾದ ಮಾಜಿ ಮುಖ್ಯ ಕೋಚ್ ರವಿಶಾಸ್ತ್ರಿ ಅವರು ವಿಶ್ವ ಟೆಸ್ಟ್ ಚಾಂಪಿಯನ್‌ ಶಿಪ್ (ಡಬ್ಲ್ಯುಟಿಸಿ ಫೈನಲ್) ಫೈನಲ್‌ ಗೆ ತಮ್ಮ ಅತ್ಯುತ್ತಮ ಆಟಗಾರರ ಪ್ಲೇಯಿಂಗ್ XI ಅನ್ನು ಆಯ್ಕೆ ಮಾಡಿದ್ದಾರೆ. ವಿಶೇಷವೆಂದರೆ ರವಿಶಾಸ್ತ್ರಿ ಭಾರತ ಮತ್ತು ಆಸ್ಟ್ರೇಲಿಯಾದ ಆಟಗಾರರನ್ನು ಆಯ್ಕೆ ಮಾಡಿದ್ದಾರೆ. ರವಿಶಾಸ್ತ್ರಿ ಅವರ ಅತ್ಯುತ್ತಮ ಪ್ಲೇಯಿಂಗ್ XI ಹೇಗಿದೆ ನೋಡೋಣ:


COMMERCIAL BREAK
SCROLL TO CONTINUE READING

ಇದನ್ನೂ ಓದಿ: Virat Kohli: ಒಬ್ಬರಲ್ಲ, ಇಬ್ಬರಲ್ಲ.. ಅನುಷ್ಕಾ ಜೊತೆ ಮದುವೆಗೂ ಮುನ್ನ ಕೊಹ್ಲಿ ಈ 6 ಹುಡುಗಿಯರ ಜೊತೆ ಡೇಟಿಂಗ್ ಮಾಡಿದ್ರು!


ರವಿಶಾಸ್ತ್ರಿ ಅವರು ವಿಶ್ವ ಟೆಸ್ಟ್ ಚಾಂಪಿಯನ್‌ ಶಿಪ್ ಫೈನಲ್‌ ಗೆ (ಡಬ್ಲ್ಯುಟಿಸಿ ಫೈನಲ್) ತಮ್ಮ ಅತ್ಯುತ್ತಮ ಪ್ಲೇಯಿಂಗ್ XI ನಲ್ಲಿ ರೋಹಿತ್ ಶರ್ಮಾ ಅವರನ್ನು ನಾಯಕ ಮತ್ತು ಆರಂಭಿಕರಾಗಿ ಹೆಸರಿಸಿದ್ದಾರೆ. ರವಿಶಾಸ್ತ್ರಿ ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್ ಉಸ್ಮಾನ್ ಖವಾಜಾ ಅವರನ್ನು ರೋಹಿತ್ ಶರ್ಮಾ ಅವರ ಆರಂಭಿಕ ಪಾರ್ಟ್’ನರ್ ಆಗಿ ಆಯ್ಕೆ ಮಾಡಿದ್ದಾರೆ. ಮಾರ್ನಸ್ ಲಬುಶೆನ್ ಮೂರನೇ ಕ್ರಮಾಂಕದಲ್ಲಿ ಮತ್ತು ವಿರಾಟ್ ಕೊಹ್ಲಿ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಆಯ್ಕೆಯಾಗಿದ್ದಾರೆ.


ರವಿಶಾಸ್ತ್ರಿ ಅವರು ಆಸ್ಟ್ರೇಲಿಯಾದ ಮಾಜಿ ನಾಯಕ ಸ್ಟೀವ್ ಸ್ಮಿತ್ ಅವರನ್ನು 5 ನೇ ಸ್ಥಾನದಲ್ಲಿ ಆಯ್ಕೆ ಮಾಡಿದ್ದಾರೆ. ರವೀಂದ್ರ ಜಡೇಜಾ ಅವರನ್ನು 6ನೇ ಕ್ರಮಾಂಕ ಮತ್ತು ಆಲ್‌ ರೌಂಡರ್‌ ಪಾತ್ರಕ್ಕೆ ಆಯ್ಕೆ ಮಾಡಿದ್ದಾರೆ. ಆಸ್ಟ್ರೇಲಿಯಾದ ಅಲೆಕ್ಸ್ ಕ್ಯಾರಿ ಅವರನ್ನು ನಂಬರ್ 7 ಮತ್ತು ವಿಕೆಟ್ ಕೀಪಿಂಗ್ ಜವಾಬ್ದಾರಿಗೆ ಆಯ್ಕೆ ಮಾಡಿದ್ದಾರೆ.


ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್ ಮತ್ತು ಮೊಹಮ್ಮದ್ ಶಮಿ ಅವರನ್ನು ವೇಗದ ಬೌಲರ್‌ ಗಳಾಗಿ ಆಯ್ಕೆ ಮಾಡಿದ್ದಾರೆ. ಆಸ್ಟ್ರೇಲಿಯಾದ ಶ್ರೇಷ್ಠ ಸ್ಪಿನ್ನರ್ ನಾಥನ್ ಲಿಯಾನ್ ಅವರನ್ನು ಏಕೈಕ ಸ್ಪಿನ್ ಬೌಲರ್ ಆಗಿ ಪ್ಲೇಯಿಂಗ್ XI ನಲ್ಲಿ ಸ್ಥಾನ ನೀಡಿದ್ದಾರೆ.


ಇನ್ನು ರವಿಶಾಸ್ತ್ರಿ ಅವರು ಶುಭ್ಮನ್ ಗಿಲ್, ಮೊಹಮ್ಮದ್ ಸಿರಾಜ್, ಟಾಡ್ ಮರ್ಫಿ, ಡೇವಿಡ್ ವಾರ್ನರ್, ಕ್ಯಾಮೆರಾನ್ ಗ್ರೀನ್, ಉಮೇಶ್ ಯಾದವ್, ಟ್ರಾವಿಸ್ ಹೆಡ್ ಮತ್ತು ರವಿಚಂದ್ರನ್ ಅಶ್ವಿನ್ ಅವರಂತಹ ಆಟಗಾರರನ್ನು ತಮ್ಮ ಪ್ಲೇಯಿಂಗ್ XI ನಿಂದ ಹೊರಗಿಟ್ಟಿದ್ದಾರೆ.


ಇದನ್ನೂ ಓದಿ: Team Indiaಗೆ ಸಿಕ್ಕಾಯ್ತು ಮತ್ತೊಬ್ಬ ಯಾರ್ಕರ್ ಸ್ಪೆಷಲಿಸ್ಟ್! ಜಸ್ಪ್ರೀತ್ ಬುಮ್ರಾ ಜಾಗ ತುಂಬೋದು ಈ ಆಟಗಾರನೇ…


ರವಿಶಾಸ್ತ್ರಿ ಅವರ ಅತ್ಯುತ್ತಮ ಪ್ಲೇಯಿಂಗ್ XI:


ರೋಹಿತ್ ಶರ್ಮಾ (ನಾಯಕ), ಉಸ್ಮಾನ್ ಖವಾಜಾ, ಮಾರ್ನಸ್ ಲಬುಸ್ಚಾಗ್ನೆ, ವಿರಾಟ್ ಕೊಹ್ಲಿ, ಸ್ಟೀವ್ ಸ್ಮಿತ್, ರವೀಂದ್ರ ಜಡೇಜಾ, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಮೊಹಮ್ಮದ್ ಶಮಿ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ