Indian team for World Cup 2023: ಐಸಿಸಿ ಏಕದಿನ ವಿಶ್ವಕಪ್ ಈ ವರ್ಷ ಭಾರತದ ಆತಿಥ್ಯದಲ್ಲಿ ನಡೆಯಲಿದೆ. ಈ ಜಾಗತಿಕ ಕ್ರಿಕೆಟ್ ಪಂದ್ಯಾವಳಿ ಅಕ್ಟೋಬರ್ 5 ರಿಂದ ಪ್ರಾರಂಭವಾಗಲಿದ್ದು, ಇದಕ್ಕಾಗಿ ಭರದ ಸಿದ್ಧತೆಗಳು ನಡೆಯುತ್ತಿವೆ. ಈ ಮಧ್ಯೆ, ಟೀಂ ಇಂಡಿಯಾದ ಮಾಜಿ ಮುಖ್ಯ ಕೋಚ್ ರವಿಶಾಸ್ತ್ರಿ ಪ್ಲೇಯಿಂಗ್ 11 ಬಗ್ಗೆ ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Ireland vs India: ಐರ್ಲೆಂಡ್ ವಿರುದ್ಧ ಟೀಮ್ ಇಂಡಿಯಾಗೆ 2 ರನ್ ಗಳ ರೋಚಕ ಜಯ 


ಭಾರತದ ಮಾಜಿ ಕ್ರಿಕೆಟಿಗ ಮತ್ತು ಮುಖ್ಯ ಕೋಚ್ ರವಿಶಾಸ್ತ್ರಿ ಶುಕ್ರವಾರ ಪ್ರತಿಭಾವಂತ ತಿಲಕ್ ವರ್ಮಾ ಅವರನ್ನು ಏಕದಿನ ವಿಶ್ವಕಪ್ ಭಾರತ ತಂಡದ ಮಧ್ಯಮ ಕ್ರಮಾಂಕದಲ್ಲಿ ಸೇರಿಸಿಕೊಳ್ಳಬೇಕು ಎಂದು ಹೇಳಿದ್ದಾರೆ. ಅಕ್ಟೋಬರ್ 5 ರಿಂದ ವಿಶ್ವಕಪ್ ಆರಂಭವಾಗಲಿದ್ದು, ನವೆಂಬರ್ 19 ರಂದು ಅಹಮದಾಬಾದ್‌’ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಫೈನಲ್ ಪಂದ್ಯ ನಡೆಯಲಿದೆ.


20ರ ಹರೆಯದ ಅನುಭವಿ ಬ್ಯಾಟ್ಸ್’ಮನ್ ತಿಲಕ್ ವರ್ಮಾ ಎಡಗೈ ಬ್ಯಾಟ್ಸ್’ಮನ್ ಆಗಿರುವುದರಿಂದ ಅವರನ್ನು ತಂಡಕ್ಕೆ ಸೇರಿಸಿಕೊಂಡರೆ ಹೆಚ್ಚಿನ ಲಾಭವಾಗಲಿದೆ ಎಂದು ಶಾಸ್ತ್ರಿ ಹೇಳಿದ್ದಾರೆ.


ಸ್ಟಾರ್ ಸ್ಪೋರ್ಟ್ಸ್‌’ಗೆ ನೀಡಿದ ಸಂದರ್ಶನದಲ್ಲಿ ರವಿಶಾಸ್ತ್ರಿ, “ತಿಲಕ್ ವರ್ಮಾ ಅವರ ಆಟದಿಂದ ನಾನು ತುಂಬಾ ಪ್ರಭಾವಿತನಾಗಿದ್ದೇನೆ. ನಮಗೆ ಮಧ್ಯಮ ಕ್ರಮಾಂಕದಲ್ಲಿ ಎಡಗೈ ಬ್ಯಾಟ್ಸ್‌’ಮನ್’ಬೇಕು. ಮಧ್ಯಮ ಕ್ರಮಾಂಕದಲ್ಲಿ ಯುವರಾಜ್ ಸಿಂಗ್ ಮತ್ತು ಸುರೇಶ್ ರೈನಾ ಅವರಂತಹ ಆಟಗಾರರು ಬೇಕಾದರೆ, ನಾನು ಖಂಡಿತವಾಗಿಯೂ ಅವರ (ತಿಲಕ್ ವರ್ಮಾ) ಹೆಸರನ್ನು ಪರಿಗಣಿಸುತ್ತೇನೆ" ಶಾಸ್ತ್ರಿ ಹೇಳಿದರು.


1983ರ ವಿಶ್ವಕಪ್ ವಿಜೇತ ತಂಡದ ಸಹ ಆಟಗಾರ ಸಂದೀಪ್ ಪಾಟೀಲ್ ಕೂಡ ತಿಲಕ್ ವರ್ಮಾ ಅವರನ್ನು ಹೊಗಳಿದ್ದರು. ಸೂರ್ಯಕುಮಾರ್ ಯಾದವ್ ಅವರನ್ನು ತಂಡದಲ್ಲಿ ಉಳಿಸಿಕೊಳ್ಳುವ ಬಗ್ಗೆಯೂ ಮಾತನಾಡಿದ್ದಾರೆ. ಭಾರತ ತಂಡದ ಮಾಜಿ ಆಯ್ಕೆಗಾರ ಸಂದೀಪ್ ಪಾಟೀಲ್, “ಖಂಡಿತವಾಗಿಯೂ ನಾನು ತಿಲಕ್ ವರ್ಮಾ ಮತ್ತು ಸೂರ್ಯಕುಮಾರ್ ಯಾದವ್ ಅವರನ್ನು ತಂಡದಲ್ಲಿ ಇರಿಸಿಕೊಳ್ಳಲು ಬಯಸುತ್ತೇನೆ. ತಿಲಕ್ ವರ್ಮಾ ಮತ್ತು ಸೂರ್ಯಕುಮಾರ್ ಇಬ್ಬರೂ ನನ್ನ ತಂಡದಲ್ಲಿ ಇರುತ್ತಾರೆ” ಎಂದಿದ್ದಾರೆ,


ಇದನ್ನೂ ಓದಿ: “ಬಯಸಿಯೋ, ಬಯಸದೆಯೋ ನಿವೃತ್ತಿ ಘೋಷಿಸುತ್ತಿದ್ದೇನೆ”: 13 ವರ್ಷಗಳ ಕ್ರಿಕೆಟ್ ಜೀವನಕ್ಕೆ ಅಂತ್ಯ ಹಾಡಿದ ವಿಶ್ವದ ಶ್ರೇಷ್ಠ ನಾಯಕ


ತಿಲಕ್ ವರ್ಮಾ ಇತ್ತೀಚೆಗೆ ತಮ್ಮ ಅಂತರರಾಷ್ಟ್ರೀಯ ಕ್ರಿಕೆಟ್‌’ನಲ್ಲಿ ತಮ್ಮ ಚೊಚ್ಚಲ ಸರಣಿಯಲ್ಲಿ ಆಕರ್ಷಕ ಪ್ರದರ್ಶನ ನೀಡಿದ್ದಾರೆ. 39, 51, 49 ನಾಟೌಟ್, 7 ನಾಟೌಟ್ ಮತ್ತು 27 ರನ್‌’ಗಳ ಇನ್ನಿಂಗ್ಸ್‌’ಗಳನ್ನು ಆಡಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.