ಭಾರತ-ವೆಸ್ಟ್‌ ಇಂಡೀಸ್‌ ಪ್ರವಾಸದಲ್ಲಿ ಈ ಸೂಪರ್‌ ಸ್ಟಾರ್‌ ಆಟಗಾರ ಕಾಣಿಸೋದು ಡೌಟ್‌: ಕಾರಣ ಏನು ಗೊತ್ತಾ?

ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಭಾರತದ ಸೂಪರ್ ಸ್ಟಾರ್ ಆಲ್ ರೌಂಡರ್ ಹಾಗೂ ತಂಡದ ಉಪನಾಯಕ ರವೀಂದ್ರ ಜಡೇಜಾ ಗಾಯಗೊಂಡಿದ್ದಾರೆ. ಇದು ಭಾರತ ತಂಡದ ಸಂಕಷ್ಟವನ್ನು ಹೆಚ್ಚಿಸಿದೆ. ಗಾಯದ ಸಮಸ್ಯೆಯಿಂದಾಗಿ ರವೀಂದ್ರ ಜಡೇಜಾ ತಂಡದ ಒಳಾಂಗಣ ಅಭ್ಯಾಸದಲ್ಲಿ ಭಾಗವಹಿಸಿರಲಿಲ್ಲ. ಜಡೇಜಾ ಅವರ ಗಾಯ ಎಷ್ಟು ಗಂಭೀರವಾಗಿದೆ ಎಂಬುದು ಇನ್ನೂ ತಿಳಿದುಬಂದಿಲ್ಲ. ಆದರೆ ಅಭ್ಯಾಸದ ಅವಧಿಗಳಲ್ಲಿ ಅವರು ಗೈರು ಹಾಜರಾದ ಕಾರಣ, ಮುಂದಿನ ಪಂದ್ಯಗಳಲ್ಲಿ ಅವರು ಆಡುವುದು ಅನುಮಾನವಾಗಿದೆ. ಜಡೇಜಾ ಮೊಣಕಾಲಿನ ಗಾಯಕ್ಕೆ ಒಳಗಾಗಿದ್ದು, ಬಿಸಿಸಿಐ ವೈದ್ಯಕೀಯ ತಂಡ ತನಿಖೆ ನಡೆಸುತ್ತಿದೆ.

Written by - Bhavishya Shetty | Last Updated : Jul 22, 2022, 12:59 PM IST
  • ಭಾರತ-ವೆಸ್ಟ್ ಇಂಡೀಸ್ ನಡುವಿನ ಮೂರು ಪಂದ್ಯಗಳ ಸರಣಿ
  • ಸರಣಿಯ ಮೊದಲ ಪಂದ್ಯ ಇಂದು ನಡೆಯಲಿದೆ
  • ರವೀಂದ್ರ ಜಡೇಜಾ ಗಾಯಗೊಂಡಿದ್ದು, ಆಟದಲ್ಲಿ ಭಾಗವಹಿಸುವ ಸಾಧ್ಯತೆ ಕಡಿಮೆ ಇದೆ
ಭಾರತ-ವೆಸ್ಟ್‌ ಇಂಡೀಸ್‌ ಪ್ರವಾಸದಲ್ಲಿ ಈ ಸೂಪರ್‌ ಸ್ಟಾರ್‌ ಆಟಗಾರ ಕಾಣಿಸೋದು ಡೌಟ್‌: ಕಾರಣ ಏನು ಗೊತ್ತಾ?  title=
Ravindra Jadeja

ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯವನ್ನು ಭಾರತ ತಂಡ ಇಂದು (ಜುಲೈ 22) ಆಡಲಿದೆ. ಇದಕ್ಕಾಗಿ ಟೀಂ ಇಂಡಿಯಾ ಸಂಪೂರ್ಣ ತಯಾರಿ ನಡೆಸಿದೆ. ಆದರೆ ಸ್ಟಾರ್ ಆಟಗಾರನೊಬ್ಬ ಗಾಯಗೊಂಡು ಭಾರತ ತಂಡದ ಸಂಕಷ್ಟವನ್ನು ಹೆಚ್ಚಿಸಿದ್ದಾನೆ. ಈ ಆಟಗಾರ ಸಂಪೂರ್ಣ ವೆಸ್ಟ್ ಇಂಡೀಸ್ ಸರಣಿಯಿಂದ ಹೊರಗುಳಿಯು ಸಾಧ್ಯತೆ ಇದೆ. ಈ ಆಟಗಾರನ ಜಾಗದಲ್ಲಿ ಯಾವ ಆಟಗಾರ ಆಡಲಿದ್ದಾರೆ ಎಂಬುದು ನಾಯಕ ಶಿಖರ್ ಧವನ್ ಮುಂದಿರುವ ದೊಡ್ಡ ಸವಾಲು.

ಇದನ್ನೂ ಓದಿ: ಪ್ರಥಮ ಬಾರಿಗೆ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ ಫೈನಲ್‌ ಪ್ರವೇಶಿಸಿದ ಭಾರತ: ಪದಕದ ನಿರೀಕ್ಷೆ

ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಭಾರತದ ಸೂಪರ್ ಸ್ಟಾರ್ ಆಲ್ ರೌಂಡರ್ ಹಾಗೂ ತಂಡದ ಉಪನಾಯಕ ರವೀಂದ್ರ ಜಡೇಜಾ ಗಾಯಗೊಂಡಿದ್ದಾರೆ. ಇದು ಭಾರತ ತಂಡದ ಸಂಕಷ್ಟವನ್ನು ಹೆಚ್ಚಿಸಿದೆ. ಗಾಯದ ಸಮಸ್ಯೆಯಿಂದಾಗಿ ರವೀಂದ್ರ ಜಡೇಜಾ ತಂಡದ ಒಳಾಂಗಣ ಅಭ್ಯಾಸದಲ್ಲಿ ಭಾಗವಹಿಸಿರಲಿಲ್ಲ. ಜಡೇಜಾ ಅವರ ಗಾಯ ಎಷ್ಟು ಗಂಭೀರವಾಗಿದೆ ಎಂಬುದು ಇನ್ನೂ ತಿಳಿದುಬಂದಿಲ್ಲ. ಆದರೆ ಅಭ್ಯಾಸದ ಅವಧಿಗಳಲ್ಲಿ ಅವರು ಗೈರು ಹಾಜರಾದ ಕಾರಣ, ಮುಂದಿನ ಪಂದ್ಯಗಳಲ್ಲಿ ಅವರು ಆಡುವುದು ಅನುಮಾನವಾಗಿದೆ. ಜಡೇಜಾ ಮೊಣಕಾಲಿನ ಗಾಯಕ್ಕೆ ಒಳಗಾಗಿದ್ದು, ಬಿಸಿಸಿಐ ವೈದ್ಯಕೀಯ ತಂಡ ತನಿಖೆ ನಡೆಸುತ್ತಿದೆ.

ಏಕದಿನ ಸರಣಿಯಿಂದ ಹೊರಗುಳಿಯುವ ಸಾಧ್ಯತೆ:
ಕ್ರಿಕ್‌ಬಜ್ ವರದಿಯ ಪ್ರಕಾರ, ಟಿ-20 ವಿಶ್ವಕಪ್ ಮತ್ತು ಏಷ್ಯಾ ಕಪ್ ಅನ್ನು ಗಮನದಲ್ಲಿಟ್ಟುಕೊಂಡು, ರವೀಂದ್ರ ಜಡೇಜಾ ಅವರಿಗೆ ಒಡಿಐ ಸರಣಿಯಿಂದ ವಿಶ್ರಾಂತಿ ನೀಡಬಹುದು. ಇದರಿಂದ ಅವರು ಗಾಯದಿಂದ ಮುಕ್ತಿ ಪಡೆದು ಮುಂದಿನ ದಿನಗಳಲ್ಲಿ ತಂಡವನ್ನು ಸೇರಬಹುದು. ಜಡೇಜಾ ಕಿಲ್ಲರ್ ಬೌಲಿಂಗ್ ಮತ್ತು ಡ್ಯಾಶಿಂಗ್ ಬ್ಯಾಟಿಂಗ್‌ನಲ್ಲಿ ಪರಿಣಿತಿ ಹೊಂದಿರುವ ಆಟಗಾರ. ಭಾರತ ಇನ್ನೇನು ಸೋಲುತ್ತದೆ ಎಂಬ ಪಂದ್ಯಗಳನ್ನು ತಮ್ಮ ಚತುರತೆಯಿಂದ ಗೆದ್ದುಕೊಟ್ಟ ಭಾರತೀಯ ಆಟಗಾರ. ಇದೀಗ ಜಡೇಜಾ ಚೇತರಿಸಿಕೊಂಡರೆ, ಅವರು ಐದು ಪಂದ್ಯಗಳ ಟಿ20 ಸರಣಿಯಲ್ಲಿ ಭಾಗವಹಿಸಬಹುದಾಗಿದೆ. 

ಮೊದಲ ಏಕದಿನ ಪಂದ್ಯದಲ್ಲಿ ರವೀಂದ್ರ ಜಡೇಜಾ ಬದಲಿಗೆ ಅಕ್ಷರ್ ಪಟೇಲ್‌ಗೆ ಅವಕಾಶ ಲಭಿಸುವ ಸಾಧ್ಯತೆ ಇದೆ. ಭಾರತ ತಂಡ ಕಳೆದ 16 ವರ್ಷಗಳಲ್ಲಿ ವೆಸ್ಟ್ ಇಂಡೀಸ್ ನೆಲದಲ್ಲಿ ಒಂದೇ ಒಂದು ಏಕದಿನ ಸರಣಿಯನ್ನು ಸೋತಿಲ್ಲ. ಇನ್ನು ಪ್ರಸ್ತುತ ಟೀಂ ಇಂಡಿಯಾ ಅನೇಕ ಮ್ಯಾಚ್ ವಿನ್ನರ್ ಆಟಗಾರರನ್ನು ಹೊಂದಿದೆ. ಆದರೂ ರವೀಂದ್ರ ಜಡೇಜಾರಂತಹ ಆಟಗಾರ ತಂಡದಲ್ಲಿ ಕಾಣಿಸಿಕೊಳ್ಳದಿರುವುದು ಕೊಂಚ ಸಂಕಷ್ಟ ತಂದಿದೆ ಎನ್ನಬಹುದು. 

ಇದನ್ನೂ ಓದಿ: ಅಧಿಕ ಮೈಲೇಜ್ ನೀಡುವ ಸಿಎನ್‌ಜಿ ಕಾರು

ವೆಸ್ಟ್ ಇಂಡೀಸ್ ವಿರುದ್ಧದ ಭಾರತ ಏಕದಿನ ತಂಡ:
ಶಿಖರ್ ಧವನ್ (ನಾಯಕ), ರಿತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ಡಬ್ಲ್ಯುಕೆ), ಸಂಜು ಸ್ಯಾಮ್ಸನ್ (ಡಬ್ಲ್ಯುಕೆ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಅಕ್ಸರ್ ಪಟೇಲ್, ಅವೇಶ್ ಖಾನ್, ಪ್ರಶಾನ್ ಖಾನ್ , ಮೊಹಮ್ಮದ್ ಸಿರಾಜ್ ಮತ್ತು ಅರ್ಷದೀಪ್ ಸಿಂಗ್

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News