ರವೀಂದ್ರ ಜಡೇಜಾ ಕಳೆದ ಕೆಲ ಪಂದ್ಯಗಳಲ್ಲಿ ಉತ್ತಮ ಫಾರ್ಮ್ ಕಂಡುಕೊಂಡಿಲ್ಲ. ಅಷ್ಟೇ ಅಲ್ಲದೆ, ಗಳಿಸಿದ್ದ ಹೆಸರಿಗೆ ತಕ್ಕಂತೆ ಸಾಧನೆ ಮಾಡಲು ಸಾಧ್ಯವಾಗಿಲ್ಲ. ಐಪಿಎಲ್ 2022ರ ಆವೃತ್ತಿಯಲ್ಲಿ ಸಿಎಸ್‌ಕೆ ತಂಡವನ್ನು ನಿಭಾಯಿಸಲು ಸಾಧ್ಯವಾಗದೆ ನಾಯಕತ್ವವನ್ನು ಧೋನಿ ಮಡಿಲಿಗೆ ಹಾಕಿದ್ದರು. ಇದೀಗ ಭಾರತದ ಮಾಜಿ ಆಟಗಾರ ಸಂಜಯ್ ಮಂಜ್ರೇಕರ್ ಜಡೇಜಾ ಕುರಿತಾಗಿ ಹೇಳಿಕೆಯೊಂದನ್ನು ನೀಡಿದ್ದು, ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ.
ಇದನ್ನು ಓದಿ: "ಮೋದಿ, ಶಿವನು ವಿಷ ಕುಡಿದಂತೆ ನೋವು ಸಹಿಸಿಕೊಂಡಿದ್ದರು"
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಂಜಯ್ ಮಂಜ್ರೇಕರ್, 'ದಿನೇಶ್ ಕಾರ್ತಿಕ್ ಅವರು ಪ್ರಬುದ್ಧ ಬ್ಯಾಟ್ಸ್‌ಮನ್ ಆಗಿ ಭಾರತದ ನಂ. 6 ಅಥವಾ 7 ಬ್ಯಾಟ್ಸ್‌ಮನ್ ಆಗಿರಬಹುದು ಎಂದು ತೋರಿಸಿಕೊಟ್ಟಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಟಿ 20 ಸರಣಿಯಲ್ಲಿ ನಾವು ನೋಡಿದಂತೆ ಅವರ ಬ್ಯಾಟಿಂಗ್ ಶೈಲಿ ಅತ್ಯುತ್ತಮವಾಗಿತ್ತು. ಆದರೆ ರವೀಂದ್ರ ಜಡೇಜಾ ಆ ಸ್ಥಾನಕ್ಕೆ ಬರುವುದು ಸುಲಭವಲ್ಲ. ಕಳೆದ ಕೆಲ ಸಮಯದಿಂದ ಕಳಪೆ ಫಾರ್ಮ್‌ನಲ್ಲಿಯೇ ಜಡೇಜಾ ಕಾಣಿಸಿಕೊಂಡಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಜಡೇಜಾ ಟಿ20 ವಿಶ್ವಕಪ್‌ಗೆ ಲಗ್ಗೆ ಇಡುವುದು ಕಷ್ಟ" ಎಂದು ಹೇಳಿದ್ದಾರೆ.
ಭಾರತವು ಸ್ಪೆಷಲಿಸ್ಟ್ ಸ್ಪಿನ್ನರ್ ಆಗಿ ಅಕ್ಷರ್ ಪಟೇಲ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಬಹುದು. ಜೊತೆಗೆ ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್ ಮತ್ತು ರಿಷಬ್ ಪಂತ್ ಕೂಡ ಇದ್ದಾರೆ. ಹಾಗಾಗಿ ರವೀಂದ್ರ ಜಡೇಜಾರ ಆಯ್ಕೆ ಸುಲಭವಲ್ಲ ಎಂದು ಸಂಜಯ್ ಮಂಜ್ರೇಕರ್ ಹೇಳಿದ್ದಾರೆ.
ಇತ್ತೀಚೆಗೆ ಮುಕ್ತಾಯಗೊಂಡ ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ T20I ಸರಣಿಯಲ್ಲಿ ದಿನೇಶ್ ಕಾರ್ತಿಕ್ ಉತ್ತಮ ಪ್ರದರ್ಶನ ನೀಡಿದ್ದರು. 46 ರ ಸರಾಸರಿಯಲ್ಲಿ 92 ರನ್ ಗಳಿಸಿದ್ದರು. ಮತ್ತು ಸ್ಟ್ರೈಕ್ ರೇಟ್ 158.62 ಹೊಂದಿದ್ದರು.
ಇದನ್ನು ಓದಿ: Team India: ರೋಹಿತ್ ನಾಯಕತ್ವದಲ್ಲಿ ಅಪಾಯದಲ್ಲಿದೆ ಈ ಬಲಿಷ್ಠ ಆಟಗಾರನ ವೃತ್ತಿಜೀವನ!
ಇನ್ನು ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಿದ್ದ ಜಡೇಜಾ ಕಳಪೆ ಪ್ರದರ್ಶನ ತೋರಿದ್ದರು. 19.33 ರ ಸರಾಸರಿಯಲ್ಲಿ ಕೇವಲ 116 ರನ್ ಗಳಿಸಿದರು. ಜೊತೆಗೆ 5 ವಿಕೆಟ್ ಪಡೆದಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.