IPL 2024 : ಮುಂದಿನ ವರ್ಷದ ಇಂಡಿಯನ್ ಪ್ರೀಮಿಯರ್ ಲೀಗ್ ತಯಾರಿ ಈಗಲೇ ಆರಂಭವಾಗಿದೆ. ಸದ್ಯಕ್ಕೆ ತಂಡದಲ್ಲಿರುವ ಆಟಗಾರರನ್ನು ಉಳಿಸಿಕೊಳ್ಳುವ ಪ್ರಯತ್ನ ನಡೆಯುತ್ತಿದೆ. ಯಾಕೆಂದರೆ ತಂಡ ಯಾರನ್ನು ಉಳಿಸಿಕೊಳ್ಳಲು ಬಯಸುತ್ತದೆಯೋ ಆ ಆಟಗಾರರ ಪಟ್ಟಿಯನ್ನು ನವೆಂಬರ್ 26ರೊಳಗೆ ಐಪಿಎಲ್ ಆಡಳಿತ ಮಂಡಳಿಗೆ ಸಲ್ಲಿಸಬೇಕು. ಡಿಸೆಂಬರ್ ನಲ್ಲಿ ಐಪಿಎಲ್ ಮಿನಿ ಹರಾಜು ನಡೆಯಲಿದೆ. ಈ ಬಾರಿ ಐಪಿಎಲ್ ಹರಾಜು ಪ್ರಕ್ರಿಯೆ ಭಾರತದ ಬದಲು ದುಬೈನಲ್ಲಿ ನಡೆಯಲಿದೆ ಎನ್ನಲಾಗಿದೆ. ಮಾತ್ರವಲ್ಲ ಮುಂದಿನ ವರ್ಷ ಮಾರ್ಚ್ ಮತ್ತು ಮೇ ನಡುವೆ ದೇಶದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿರುವ ಕಾರಣ, ಐಪಿಎಲ್ 2024 ಯುಎಇಯಲ್ಲಿ ನಡೆಯುವ ಸಾಧ್ಯತೆಯಿದೆ.
ಇಲ್ಲಿಯವರೆಗಿನ ಐಪಿಎಲ್ ಪಂದ್ಯಾವಳಿಯಲ್ಲಿ ಟ್ರೋಫಿ ಗೆದ್ದಿರುವ ತಂಡ ಗಳೆಂದರೆ, ಚೆನ್ನೈ ಸೂಪರ್ ಕಿಂಗ್ಸ್, ಮುಂಬೈ ಇಂಡಿಯನ್ಸ್, ರಾಜಸ್ಥಾನ ರಾಯಲ್ಸ್, ಸನ್ ರೈಸರ್ಸ್ ಹೈದರಾಬಾದ್, ಡೆಕ್ಕನ್ ಚಾರ್ಜರ್ಸ್ ಮತ್ತು ಕೆಕೆಆರ್. ಪ್ರತಿ ಬಾರಿಯೂ ಕಪ್ ಗೆಲ್ಲುವ ಫೆವರಿಟ್ ತಂಡ ಆರ್‌ಸಿಬಿ ಒಂದು ಬಾರಿಯೂ ಟ್ರೋಫಿ ಗೆದ್ದಿಲ್ಲ. ಈ ಹಿನ್ನೆಲೆಯಲ್ಲಿ ಮುಂದಿನ ಸೀಸನ್ ನಲ್ಲಿ ಟ್ರೋಫಿ ಗೆಲ್ಲುವ ಉತ್ಸಾಹದಲ್ಲಿದೆ ಆರ್ ಸಿಬಿ. ಇದಕ್ಕಾಗಿ ತಯಾರಿ ಕೂಡಾ ನಡೆಸುತ್ತಿದೆ. ವಿಶ್ವಕಪ್‌ನಲ್ಲಿ ಅಸಾಧಾರಣ ಪ್ರದರ್ಶನ ನೀಡುತ್ತಿರುವ ಕಿವೀಸ್ ಆಲ್‌ರೌಂಡರ್ ರಚಿನ್ ರವೀಂದ್ರ ಅವರನ್ನು ಖರೀದಿಸಲು ತಂಡ ಮುಂದಾಗಿದೆ ಎನ್ನಲಾಗಿದೆ. ಇದಕ್ಕಾಗಿ ಕೋಟಿ ಕೋಟಿ ಹರಿಸಲು ಕೂಡಾ ಸಿದ್ದವಾಗಿದೆ ಎನ್ನಲಾಗಿದೆ.
ಇದನ್ನೂ ಓದಿ : ಭಾರತ OR ನ್ಯೂಜಿಲೆಂಡ್.. ಸೆಮಿಫೈನಲ್‌ನಲ್ಲಿ ಗೆಲುವು ಇವರದ್ಧೇ! ಜ್ಯೋತಿಷಿಗಳ ಭವಿಷ್ಯ ನಿಜವಾಗುತ್ತಾ?
ತನ್ನ ಚೊಚ್ಚಲ ವಿಶ್ವಕಪ್‌ನಲ್ಲಿ ರಚಿನ್ ರವೀಂದ್ರ 9 ಪಂದ್ಯಗಳಲ್ಲಿ 565 ರನ್ ಗಳಿಸಿದ್ದಾರೆ. ಈ ಮೂಲಕ ಅತಿ ಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ರಚಿನ್ ಖಾತೆಯಲ್ಲಿ 3 ಶತಕವಿದೆ. ಈ ಹಿನ್ನೆಲೆಯಲ್ಲಿ ಬ್ಯಾಟಿಂಗ್ ನಲ್ಲಿ ಅಬ್ಬರಿಸುತ್ತಿರುವ ರಚಿನ್ ಆರ್ ಸಿಬಿ ತಂಡ ಸೇರಿಕೊಂಡರೆ ಈ ಸಲ ಕಪ್ ಗೆಲ್ಲುವುದು ಪಕ್ಕಾ ಎನ್ನುವುದು ಎಲ್ಲರ ಲೆಕ್ಕಾಚಾರ.
ಇನ್ನು ರಚಿನ ಅವರನ್ನು ಸೆಳೆಯಲು ಮುಂದಾಗಿರುವುದು ಆರ್ ಸಿಬಿ ಮಾತ್ರವಲ್ಲ. ಸನ್‌ರೈಸರ್ಸ್ ಹೈದರಾಬಾದ್, ಡೆಲ್ಲಿ ಕ್ಯಾಪಿಟಲ್ಸ್, ರಾಜಸ್ಥಾನ್ ರಾಯಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಕೂಡಾ ಈ ನಿಟ್ಟಿನಲ್ಲಿ ತಮ್ಮ ಪ್ರಯತ್ನ ಮುಂದುವರೆಸಿವೆ.
ಇದನ್ನೂ ಓದಿ : ಭಾರತ vs ನ್ಯೂಜಿಲೆಂಡ್ ಸೆಮಿಫೈನಲ್’ನಲ್ಲಿ ಗೆಲ್ಲೋದು ಇದೇ ತಂಡ: ಮುಲಾಜಿಲ್ಲದೆ ಕಾರಣ ಸಮೇತ ಭವಿಷ್ಯ ನುಡಿದ ಭಜ್ಜಿ