RCB Final Match Shreyanka Record: ಮಹಿಳಾ ಪ್ರೀಮಿಯರ್ ಲೀಗ್ (WPL 2024) ನ ಫೈನಲ್ ಪಂದ್ಯ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 8 ವಿಕೆಟ್‌ಗಳಿಂದ ಸೋಲಿಸಿ ಮೊದಲ ಬಾರಿಗೆ ಪ್ರಶಸ್ತಿ ಗೆದ್ದುಕೊಂಡಿತು.


COMMERCIAL BREAK
SCROLL TO CONTINUE READING

ಡೆಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು, ಆದರೆ ಆರ್‌ಸಿಬಿ ಬೌಲರ್‌ಗಳ ಮುಂದೆ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಸಂಪೂರ್ಣ ವಿಫಲವಾಯಿತು, ಏಕೆಂದರೆ ಆತಿಥೇಯ ತಂಡ 18.3 ಓವರ್‌ಗಳಲ್ಲಿ 113 ರನ್‌ಗಳಿಗೆ ಆಲೌಟ್ ಆಯಿತು. ಇದೇ ವೇಳೆ ಆರ್‌ಸಿಬಿ ಪರ ಶ್ರೇಯಾಂಕಾ ಪಾಟೀಲ್ ಐತಿಹಾಸಿಕ ಪ್ರದರ್ಶನ ನೀಡಿದರು.


ಇದನ್ನೂ ಓದಿ-Womens Premier League 2024: ಖಡಕ್‌ ರೊಟ್ಟಿಯ ಹೊಡೆತಕ್ಕೆ ನಲುಗಿದ ಡೆಲ್ಲಿ ಕ್ಯಾಪಿಟಲ್ಸ್‌! ‌


21 ವರ್ಷದ ಶ್ರೇಯಾಂಕಾ ಪಾಟೀಲ್ ಅದ್ಭುತ ಬೌಲಿಂಗ್ ಮಾಡುವ ಮೂಲಕ RCB ತಂಡದ ಅತ್ಯಂತ ಯಶಸ್ವಿ ಬೌಲರ್ ಆಗಿ ಗುರುತಿಸಿಕೊಂಡರು.. ಇವರು 3.3 ಓವರ್ ಗಳಲ್ಲಿ 12 ರನ್ ನೀಡಿ 4 ವಿಕೆಟ್ ಪಡೆದರು. ಇದರೊಂದಿಗೆ ಮಹಿಳಾ ಪ್ರೀಮಿಯರ್ ಲೀಗ್ ನ ಅಂತಿಮ ಪಂದ್ಯದಲ್ಲಿ ಶ್ರೇಯಾಂಕಾ ಪಾಟೀಲ್ ಅತ್ಯುತ್ತಮ ಸ್ಪೆಲ್ ಮಾಡಿದ ಬೌಲರ್ ಎನಿಸಿಕೊಂಡರು. ಈ ಮೊದಲು ಈ ದಾಖಲೆ ಮುಂಬೈ ಇಂಡಿಯನ್ಸ್‌ನ ಹೈಲಿ ಮ್ಯಾಥ್ಯೂಸ್ ಹೆಸರಿನಲ್ಲಿತ್ತು. ಮ್ಯಾಥ್ಯೂಸ್ 2023 ರ ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ 4 ಓವರ್‌ಗಳಲ್ಲಿ 15 ರನ್‌ಗಳಿಗೆ 3 ವಿಕೆಟ್ ಪಡೆದಿದ್ದರು..


ಈ ಪಂದ್ಯದಲ್ಲಿ ಶ್ರೇಯಾಂಕಾ ಪಾಟೀಲ್ ಹೊರತಾಗಿ ಸೋಫಿ ಮೊಲಿನೆಕ್ಸ್ ಕೂಡ ಅದ್ಭುತವಾಗಿ ಬೌಲಿಂಗ್ ಮಾಡಿದ್ದಾರೆ. ಅವರು 4 ಓವರ್‌ಗಳಲ್ಲಿ 20 ರನ್‌ ನೀಡಿ 3 ವಿಕೆಟ್‌ ಪಡೆದರು. ಸೋಫಿ ಮೊಲಿನೆಕ್ಸ್ ಒಂದೇ ಓವರ್‌ನಲ್ಲಿ ಎಲ್ಲಾ ಮೂರು ವಿಕೆಟ್‌ಗಳನ್ನು ಪಡೆದರು. ಇದಕ್ಕೂ ಮೊದಲು ಡೆಲ್ಲಿ ಕ್ಯಾಪಿಟಲ್ಸ್ ವೇಗವಾಗಿ ರನ್ ಗಳಿಸುತ್ತಿತ್ತು, ಆದರೆ ಸೋಫಿ ಒಂದೇ ಓವರ್‌ನಲ್ಲಿ ಆಟವನ್ನೇ ಬದಲಾಯಿಸಿದರು.


ಇದನ್ನೂ ಓದಿ-WPL 2024: ಐತಿಹಾಸಿಕ ಡಬ್ಲ್ಯೂಪಿಎಲ್ ಪ್ರಶಸ್ತಿ ಗೆದ್ದ ನಂತರ ಸ್ಮೃತಿ ಮಂಧಾನಾಗೆ ವಿರಾಟ್ ಕೊಹ್ಲಿಯಿಂದ ವೀಡಿಯೊ ಕರೆ


ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆರಂಭಿಕ ಆಟಗಾರ್ತಿ ಶಫಾಲಿ ವರ್ಮಾ ಅತ್ಯಂತ ಯಶಸ್ವಿ ಬ್ಯಾಟ್ಸ್‌ಮನ್ ಆಗಿದ್ದರು. ಇವರು 27 ಎಸೆತಗಳಲ್ಲಿ 44 ರನ್ ಗಳಿಸಿ ಸ್ಫೋಟಕ ಆಟವಾಡಿದರು. ಈ ವೇಳೆ ಅವರು 2 ಬೌಂಡರಿ ಹಾಗೂ 3 ಸಿಕ್ಸರ್‌ಗಳನ್ನು ಬಾರಿಸಿದರು.  


ಇಂಡಿಯನ್ ಪ್ರೀಮಿಯರ್ ಲೀಗ್ 2008 ರಲ್ಲಿ ಪ್ರಾರಂಭವಾದಾಗಿನಿಂದ, ಫ್ರಾಂಚೈಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಒಮ್ಮೆಯೂ ಟ್ರೋಫಿ ಗೆದ್ದಿರಲಿಲ್ಲ.. 16 ವರ್ಷಗಳ ಇತಿಹಾಸದಲ್ಲಿ, ತಂಡವನ್ನು ವಿರಾಟ್ ಕೊಹ್ಲಿ ಸೇರಿದಂತೆ ಅನೇಕ ವಿಶ್ವ ದರ್ಜೆಯ ದಿಗ್ಗಜರು ಮುನ್ನಡೆಸಿದ್ದಾರೆ ಆದರೆ ಅವರ ಕನಸುಗಳು ಈಡೇರಿಲ್ಲ.. ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯ ಟ್ರೋಫಿ ಹಂಬಲವು ಮಹಿಳಾ ಪ್ರೀಮಿಯರ್ ಲೀಗ್ 2024 ರಲ್ಲಿ ಕೊನೆಗೊಂಡಿದ್ದು.. ಸ್ಮೃತಿ ಮಂಧಾನ ನಾಯಕತ್ವದಲ್ಲಿ ಬೆಂಗಳೂರು ಮೊದಲ ಬಾರಿಗೆ ಟ್ರೋಫಿ ಗೆದ್ದಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ