Indian Premier League 2025: ಇಂಡಿಯನ್ ಪ್ರೀಮಿಯರ್ ಲೀಗ್ (IPL) ಟೂರ್ನಿಯ 20ನೇ ಪಂದ್ಯದಲ್ಲಿ ಸೋಮವಾರ ಮುಂಬೈ ಇಂಡಿಯನ್ಸ್ ವಿರುದ್ಧ ಚಾಯಲ್ ಚಾಲೆಂಜರ್ಸ್ ಬೆಂಗಳೂರು 12 ರನ್‌ಗಳ ಭರ್ಜರಿ ಗೆಲುವು ಸಾಧಿಸಿತು. ಬರೋಬ್ಬರಿ 10 ವರ್ಷಗಳ ಬಳಿಕ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಮುಂಬೈ ವಿರುದ್ಧ ಗೆಲುವು ಸಾಧಿಸುವ ಮೂಲಕ ಆರ್‌ಸಿಬಿ ಹೊಸ ಇತಿಹಾಸ ಸೃಷ್ಟಿಸಿದೆ.
ಟಾಸ್ ಗೆದ್ದ ಮುಂಬೈ ನಾಯಕ ಹಾರ್ದಿಕ ಪಾಂಡ್ಯ ಫೀಲ್ಡಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 221 ರನ್ ಗಳಿಸಿತು. ಬೃಹತ್ ಮೊತ್ತದ ಟಾರ್ಗೆಟ್ ಬೆನ್ನತ್ತಿದ ಮುಂಬೈ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 209 ರನ್ ಗಳಿಸಲಷ್ಟೇ ಶಕ್ತಿವಾಯಿತು.
ರಜತ್ ಪಾಟೀದಾರ್ ಅಬ್ಬರದ ಬ್ಯಾಟಿಂಗ್!!
Innovation at its best! ❤
Rajat Patidar brings out some unorthodox shots against his opposite number ?
Updates ▶ https://t.co/Arsodkwgqg#TATAIPL | #MIvRCB | @rrjjt_01 | @RCBTweets pic.twitter.com/RcRhhYEIJj
— IndianPremierLeague (@IPL) April 7, 2025
ಆರ್‌ಸಿಬಿ ಕ್ಯಾಪ್ಟನ್ ರಜತ್ ಪಾಟೀದಾರ್ ಸ್ಫೋಟಕ ಬ್ಯಾಟಿಂಗ್ ಹೊಡೆತಕ್ಕೆ ಹಾರ್ದಿಕ್ ಪಾಂಡ್ಯ ಪಡೆ ಬೆಚ್ಚಿಬಿದ್ದಿದೆ. ಕೇವಲ 32 ಎಸೆತಗಳಲ್ಲಿ ನಾಲ್ಕು ಸಿಕ್ಸರ್ ಮತ್ತು ಐದು ಬೌಂಡರಿ ಸೇರಿದಂತೆ 64 ರನ್ ಗಳಿಸಿದ ಪಾಟೀದಾರ್ ವಾಂಖೆಡೆ ಕ್ರೀಡಾಂಗಣದಲ್ಲಿ ಅಕ್ಷರಶಃ ಅಬ್ಬರಿಸಿದರು. ಮೈದಾನದ ಮೂಲೆ ಮೂಲೆಗೂ ಬೌಂಡರಿ ಮತ್ತು ಸಿಕ್ಸರ್ ಹೊಡೆಯುವ ಮೂಲಕ ಪಾಟೀದಾರ್ ಮುಂಬೈ ಬೌಲರ್‌ಗಳ ಬೇವರಿಳಿಸಿದರು.
ಇನ್ನು ವಿರಾಟ್ ಕೊಹ್ಲಿ ಸಹ ಈ ಪಂದ್ಯದಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ್ದು, 42 ಎಸೆತಗಳಲ್ಲಿ 2 ಸಿಕ್ಸರ್ ಮತ್ತು ಎಂಟು ಬೌಂಡರಿ ಸೇರಿದಂತೆ 67 ರನ್ ಬಾರಿಸಿದರು. ಇನ್ನು ದೇವದತ್ ಪಡಿಕ್ಕಲ್ ಸಹ ಸ್ಫೋಟಕ ಬ್ಯಾಟಿಂಗ್ ಮಾಡುವ ಮೂಲಕ ಕೇವಲ 22 ಎಸೆತಗಳಲ್ಲಿ 3 ಸಿಕ್ಸರ್ ಮತ್ತು 2 ಬೌಂಡರಿ ಇದ್ದ 37 ರನ್ ಬಾರಿಸಿದರು.
ಜಿತೇಶ್ ಶರ್ಮಾ ಕೂಡ ಮುಂಬೈ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದರು. 19 ಎಸೆತಗಳಲ್ಲಿ 4 ಸಿಕ್ಸರ್ ಮತ್ತು 2 ಬೌಂಡರಿ ಸೇರಿದಂತೆ ಅಜೇಯ 40 ರನ್ ಬಾರಿಸಿದರು. ಮುಂಬೈ ಪರ ಹಾರ್ದಿಕ್ ಪಾಂಡ್ಯ ಮತ್ತು ಟ್ರೆಂಟ್ ಬೌಲ್ಟ್ ತಲಾ 2 ವಿಕೆಟ್ ಪಡೆದರೆ ವಿಘ್ನೇಶ್ ಪುತುರ್ 1 ವಿಕೆಟ್ ಪಡೆದರು.
ಮುಂಬೈ ಪರ ತಿಲಕ್ ವರ್ಮಾ (56) ಆಕರ್ಷಕ ಅರ್ಧಶತಕ ಸಿಡಿಸಿದರೆ, ನಾಯಕ ಹಾರ್ದಿಕ್ ಪಾಂಡ್ಯ (42) ರನ್ ಗಳಿಸಿದರು. ಇನ್ನುಳಿದಂತೆ ಸೂರ್ಯಕುಮಾರ್ ಯಾದವ್ (28), ವಿಲ್ ಜಾಕ್ಸ್ (22), ರೋಹಿತ್ ಶರ್ಮಾ (17), ರಯಾನ್ ರಿಕೆಲ್ಟನ್ (17) ಮತ್ತು ನಮನ್ ಧೀರ್ (11) ರನ್ ಗಳಿಸಿದರು. ಆರ್‌ಸಿಬಿ ಪರ ಬೌಲಿಂಗ್‌ನಲ್ಲಿ ಮಿಂಚಿದ ಕೃನಾಲ್ ಪಾಂಡ್ಯ (45ಕ್ಕೆ 4) ಕೊನೆಯ ಓವರ್‌ನಲ್ಲಿ ಮೂರು ವಿಕೆಟ್‌ಗಳನ್ನು ಪಡೆಯುವ ಮೂಲಕ ತಂಡಕ್ಕೆ ಅಮೋಘ ಗೆಲುವು ತಂದುಕೊಟ್ಟರು. ಯಶ್ ದಯಾಳ್ ಮತ್ತು ಜೋಶ್ ಹ್ಯಾಜಲ್‌ವುಡ್ ತಲಾ 2 ವಿಕೆಟ್ ಪಡೆದರೆ, ಭುವನೇಶ್ವರ್ ಕುಮಾರ್ 1 ವಿಕೆಟ್ ಕಬಳಿಸಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.









