ಐಪಿಎಲ್‌ನಲ್ಲಿ ಅರ್ಧಶತಕ ಪೂರೈಸಿ ಹೊಸ ದಾಖಲೆ ನಿರ್ಮಿಸಿದ ವಿರಾಟ್ ಕೊಹ್ಲಿ
Virat Kohli Record: ಐಪಿಎಲ್ ಟೂರ್ನಿಯಲ್ಲಿ 7334 ರನ್‌ಗಳೊಂದಿಗೆ ಅತಿ ಹೆಚ್ಚು ರನ್ ಗಳಿಸಿರುವ ಅದ್ಭುತ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ನಿನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ಮತ್ತೊಂದು ದಾಖಲೆ ನಿರ್ಮಿಸಿದ್ದಾರೆ.
Virat Kohli New Record: ಐಪಿಎಲ್ 2024ರ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಎರಡನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಅನ್ನು ನಾಲ್ಕು ವಿಕೆಟ್‌ಗಳಿಂದ ಸೋಲಿಸಿತು. ಈ ಋತುವಿನಲ್ಲಿ ಬೆಂಗಳೂರು ತಂಡಕ್ಕೆ ಇದು ಮೊದಲ ಗೆಲುವಾಗಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾದ ರನ್ ಮೆಷಿನ್ ಖ್ಯಾತಿಯ ಆರ್‌ಸಿಬಿ ಆಟಗಾರ ವಿರಾಟ್ ಕೊಹ್ಲಿ ತಮ್ಮ ಹೆಸರಿನಲ್ಲಿ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ.
ಐಪಿಎಲ್ (IPL) ಟೂರ್ನಿಯಲ್ಲಿ 7334 ರನ್‌ಗಳೊಂದಿಗೆ ಅತಿ ಹೆಚ್ಚು ರನ್ ಗಳಿಸಿರುವ ಅದ್ಭುತ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ, ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿನ್ನೆ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ 77 ರನ್ ಕಲೆಹಾಕುವ ಮೂಲಕ ಬಿರುಸಿನ ಅರ್ಧಶತಕ ಪೂರೈಸಿದ್ದಾರೆ. ಇದು ಐಪಿಎಲ್‌ನಲ್ಲಿ ವಿರಾಟ್ ಕೊಹ್ಲಿ ಅವರ 51ನೇ ಅರ್ಧಶತಕವಾಗಿದೆ.
ನಿನ್ನೆ ಪಂಜಾಬ್ ಕಿಂಗ್ಸ್ (Punjab Kings) ವಿರುದ್ಧ ತವರಿನ ನೆಲದಲ್ಲಿ ಆರ್‌ಸಿಬಿ ಭರ್ಜರಿ ಜಯ ದಾಖಲಿಸಿದೆ. ಈ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru) ತಂಡದ ಈ ಗೆಲುವಿನಲ್ಲಿ ವಿರಾಟ್ ಅವರ ಅದ್ಭುತ ಇನ್ನಿಂಗ್ಸ್ ಮೂಲಕ ತಂಡಕ್ಕೆ ಗೆಲುವಿನ ರುವಾರಿಯಾದರೂ.
ಇದನ್ನೂ ಓದಿ- RCB ಗೆಲುವಿನ ಬಳಿಕ ಮಡದಿ-ಮಕ್ಕಳೊಂದಿಗೆ ವಿರಾಟ್ ಕೊಹ್ಲಿ ವಿಡಿಯೋ ಕಾಲ್: ವಾಚ್ ಕ್ಯೂಟ್ ವಿಡಿಯೋ
ಪಂಜಾಬ್ ಕಿಂಗ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಆರ್‌ಸಿಬಿಯ ವಿರಾಟ್ ಕೊಹ್ಲಿ 49 ಎಸೆತಗಳಲ್ಲಿ 77 ರನ್ ಗಳಿಸಿ ಅದ್ಭುತ ಇನ್ನಿಂಗ್ಸ್ ಆಡಿದರು. ಅವರ ಇನ್ನಿಂಗ್ಸ್‌ನಲ್ಲಿ ಅವರು 11 ಬೌಂಡರಿಗಳು ಮತ್ತು ಎರಡು ಸಿಕ್ಸರ್‌ಗಳನ್ನು ಹೊಡೆದರು. ಈ ಮೂಲಕ ವಿರಾಟ್ ಕೇವಲ 31 ಎಸೆತಗಳಲ್ಲಿ ಅರ್ಧಶತಕವನ್ನು ಪೂರೈಸಿದರು. ಇದು ಟಿ20 ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ಅವರ 100ನೇ ಅರ್ಧಶತಕವಾಗಿದೆ.
ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಮತ್ತು ಅತಿ ಹೆಚ್ಚು ಶತಕಗಳನ್ನು ಗಳಿಸಿರುವ ಕೊಹ್ಲಿ, ಇದೀಗ ಭಾರತೀಯ ಬ್ಯಾಟ್ಸ್‌ಮನ್‌ಗಳಲ್ಲಿ ಗರಿಷ್ಠ 50 ಪ್ಲಸ್ ಸ್ಕೋರ್ ಗಳಿಸಿರುವ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.
ಇದನ್ನೂ ಓದಿ- CSK ಪ್ಲೇಯಿಂಗ್-11ಗೆ ಈ ಮಾರಕ ಬೌಲರ್ ಎಂಟ್ರಿ !ಕಳೆದ ಸೀಸನ್ ನಲ್ಲಿ ಕಪ್ ಗೆದ್ದಿರುವ ಹಿಂದಿನ ರೂವಾರಿ ಈತ !
ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್‌ನಲ್ಲಿ (T20 Cricket) 100 ಬಾರಿ 50+ ಸ್ಕೋರ್ ಗಳಿಸಿದ ಮೊದಲ ಭಾರತೀಯ ಬ್ಯಾಟ್ಸ್‌ಮನ್ ಹಾಗೂ ವಿಶ್ವದ ಮೂರನೇ ಬ್ಯಾಟ್ಸ್‌ಮನ್. ಟಿ20 ಕ್ರಿಕೆಟ್‌ನಲ್ಲಿ ಗರಿಷ್ಠ 50+ ರನ್ ಗಳಿಸಿದ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿದೆ. ಈ ವಿಷಯದಲ್ಲಿ ಡೇವಿಡ್ ವಾರ್ನರ್ ಎರಡನೇ ಸ್ಥಾನದಲ್ಲಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.