RCB vs CSK: ಚೆನ್ನೈ ವಿರುದ್ಧ ಅಬ್ಬರಿಸಿದ ವಿರಾಟ್ ಕೊಹ್ಲಿ; ಹಲವು ದಾಖಲೆಗಳು ಪುಡಿ ಪುಡಿ!!

RCB vs CSK: ಚೆನ್ನೈ ಸೂಪರ್‌ ಕಿಂಗ್ಸ್‌ ಅಬ್ಬರ ಬ್ಯಾಟಿಂಗ್‌ ಪ್ರದರ್ಶಿಸಿ ಅರ್ಧಶತಕ ಬಾರಿಸಿದ ವಿರಾಟ್‌ ಕೊಹ್ಲಿ ಒಂದೇ ಪಂದ್ಯದಲ್ಲಿ ಹಲವು ದಾಖಲೆಗಳನ್ನ ಬ್ರೇಕ್‌ ಮಾಡುವ ಮೂಲಕ ತಾನು ಕಿಂಗ್‌ ಅನ್ನೋದನ್ನ ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.

Written by - Puttaraj K Alur | Last Updated : May 3, 2025, 11:56 PM IST
RCB vs CSK: ಚೆನ್ನೈ ವಿರುದ್ಧ ಅಬ್ಬರಿಸಿದ ವಿರಾಟ್ ಕೊಹ್ಲಿ; ಹಲವು ದಾಖಲೆಗಳು ಪುಡಿ ಪುಡಿ!!

RCB vs CSK: ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಐಪಿಎಲ್ ಟೂರ್ನಿಯ 52ನೇ ಪಂದ್ಯದಲ್ಲಿ ರನ್‌ ಮಷಿನ್ ಖ್ಯಾತಿಯ ವಿರಾಟ್ ಕೊಹ್ಲಿ ಹಲವು ಹೊಸ ದಾಖಲೆಗಳನ್ನು ನಿರ್ಮಿಸಿದ್ದಾರೆ.

Add Zee News as a Preferred Source

ಕೇವಲ 33 ಎಸತೆಗಳಲ್ಲಿ 5 ಬೌಂಡರಿ ಮತ್ತು 5 ಸಿಕ್ಸರ್‌ ಇದ್ದ 62 ರನ್ ಗಳಿಸಿದ ಕೊಹ್ಲಿ, ಖಲೀಲ್ ಅಹ್ಮದ್‌ರ ಶಾರ್ಟ್ ಬಾಲ್ ಅನ್ನು 85 ಮೀಟರ್ ಸಿಕ್ಸರ್ ಬಾರಿಸುವ ಮೂಲಕ ಆರ್‌ಸಿಬಿ ಪರ 304 ಸಿಕ್ಸರ್‌ ಸಿಡಿಸಿದರು. ಈ ಮೂಲಕ ವಿರಾಟ್ ಕೊಹ್ಲಿ ಟಿ-20ಯಲ್ಲಿ ತಂಡವೊಂದರ ಪರ 300 ಸಿಕ್ಸರ್‌ ಬಾರಿಸಿದ ಮೊದಲ ಬ್ಯಾಟರ್‌ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಮಾಜಿ ಕ್ರಿಕೆಟಿಗ ಕ್ರಿಸ್‌ಗೇಲ್‌ 263 ಸಿಕ್ಸರ್‌ ಸಿಡಿಸಿ ಈ ಸಾಧನೆ ಮಾಡಿದ 2ನೇ ಆಟಗಾರನಾದ್ರೆ, ಮುಂಬೈ ಇಂಡಿಯನ್ಸ್‌ನ ರೋಹಿತ್‌ ಶರ್ಮಾ 262 ಸಿಕ್ಸರ್‌ ಮೂಲಕ 3ನೇ ಸ್ಥಾನದಲ್ಲಿದ್ದಾರೆ. ಅದೇ ರೀತಿ ಕೀರನ್‌ ಪೋಲಾರ್ಡ್‌ (ಮುಂಬೈ ಇಂಡಿಯನ್ಸ್‌) 258 ಸಿಕ್ಸರ್‌ ಮೂಲಕ 4ನೇ ಸ್ಥಾನ ಮತ್ತು ಎಂ.ಎಸ್‌.ಧೋನಿ (ಚೆನ್ನೈ ಸೂಪರ್‌ ಕಿಂಗ್ಸ್) 257 ಸಿಕ್ಸರ್‌ ಸಿಡಿಸಿ 5ನೇ ಸ್ಥಾನದಲ್ಲಿದ್ದಾರೆ.

ಇದನ್ನೂ ಓದಿ: Virat Kohli: ʼಇದು ನನ್ನ ಕೊನೆಯ ಪಂದ್ಯ; ಅವರಿಗಾಗಿ ನನ್ನ ನಿವೃತ್ತಿʼ... ಎನ್ನುತ್ತಾ ನಿವೃತ್ತಿ ದಿನಾಂಕ ಸಮೇತ ಕಾರಣ ಬಹಿರಂಗಪಡಿಸಿದ ವಿರಾಟ್‌ ಕೊಹ್ಲಿ

 ಒಂದೇ ತಂಡದ ವಿರುದ್ಧ ಅತಿಹೆಚ್ಚು ರನ್:‌ ಈ ಪಂದ್ಯದಲ್ಲಿ 62 ರನ್‌ ಗಳಿಸಿದ ಕೊಹ್ಲಿ ಒಂದೇ ತಂಡದ ವಿರುದ್ಧ ಅತಿಹೆಚ್ಚು ರನ್‌ ಅಂದರೆ ಒಟ್ಟು 1,146 ರನ್‌ ಗಳಿಸಿದ ಆಟಗಾರನೆಂಬ ಹೆಗ್ಗಳಿಕೆಗೆ ಪಾತ್ರರಾದರು. ಚೆನ್ನೈ ವಿರುದ್ಧ ಕೊಹ್ಲಿ ಐಪಿಎಲ್‌ನಲ್ಲಿ 1,146 ರನ್ ಗಳಿಸಿದ್ದಾರೆ. ಈ ಮೂಲಕ ವಿರಾಟ್‌ ಡೇವಿಡ್‌ ವಾರ್ನರ್ ಅವರ ದಾಖಲೆ ಅಳಿಸಿ ಹಾಕಿದ್ದಾರೆ. ಡೇವಿಡ್ ವಾರ್ನರ್‌ ಪಂಜಾಬ್‌ ಕಿಂಗ್ಸ್‌ ವಿರುದ್ಧ ಒಟ್ಟು 1,134 ರನ್ ಗಳಿಸಿದ್ದರು.

ಅತಿಹೆಚ್ಚು ಅರ್ಧಶತಕ: ಚೆನ್ನೈ ವಿರುದ್ಧ ಅಬ್ಬರಿಸುವ ಮೂಲಕ ಕೊಹ್ಲಿ ಐಪಿಎಲ್‌ ಟೂರ್ನಿಯಲ್ಲಿ 55ನೇ ಅರ್ಧಶತಕ ಗಳಿಸಿದರು. ಇದಲ್ಲದೆ ಅವರು ಅತಿಹೆಚ್ಚು ಜಂಟಿ ಅರ್ಧಶತಕ ಅಂದರೆ 62 ಅರ್ಧಶತಕ ಗಳಿಸಿದ ಆಟಗಾರನೆಂಬ ಹೆಗ್ಗಳಿಕೆಗೆ ಪಾತ್ರರಾದರು.  

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅತಿಹೆಚ್ಚು ಸಿಕ್ಸರ್: ವಿರಾಟ್ ಕೊಹ್ಲಿ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಿ-20ಯಲ್ಲಿ 150 ಸಿಕ್ಸರ್ ಬಾರಿಸಿದ ಮೊದಲ ಆಟಗಾರನೆಂಬ ಹಿರಿಮೆಗೆ ಪಾತ್ರರಾಗಿದ್ದಾರೆ. ಕೊಹ್ಲಿ ಈ ಕ್ರೀಡಾಂಗಣದಲ್ಲಿ ಒಟ್ಟು 154 ಸಿಕ್ಸರ್‌ಗಳನ್ನ ಬಾರಿಸಿದ್ದಾರೆ.

ಚೆನ್ನೈ ವಿರುದ್ಧ ಐದು ಸಿಕ್ಸರ್: 33 ಎಸೆತಗಳಲ್ಲಿ 62 ರನ್ ಗಳಿಸಿದ ಕೊಹ್ಲಿ ಈ ಪಂದ್ಯದಲ್ಲಿ ಐದು ಸಿಕ್ಸರ್ ಬಾರಿಸಿದರು. ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ವಿರುದ್ಧ ಕೊಹ್ಲಿ ಐದು ಸಿಕ್ಸರ್ ಹೊಡೆದದ್ದು ಇದು ಎರಡನೇ ಬಾರಿ. 2014ರಲ್ಲಿ ಚೆನ್ನೈ ವಿರುದ್ಧ 5 ಸಿಕ್ಸರ್ ಹೊಡೆದಿದ್ದರು.

ಇದನ್ನೂ ಓದಿ: 12 ವರ್ಷಗಳಿಗೊಮ್ಮೆ ಸಿದ್ಧಿಸುವ ಅಪರೂಪದ ರಾಜಯೋಗದಲ್ಲಿ ವಿರಾಟ್‌ ಕೊಹ್ಲಿ ಜನನ; ಈ ಯೋಗ ಜಾತಕದಲ್ಲಿದ್ರೆ ಅವರಷ್ಟು ಲಕ್ಕಿ ಜಗತಲ್ಲೇ ಯಾರೂ ಇರಲ್ಲ!! ನಿಮ್ಮ ಜಾತಕದಲ್ಲೂ ಆ ಯೋಗ ಇದ್ಯಾ?

ಆರೆಂಜ್‌ ಕ್ಯಾಪ್‌ ರೇಸ್‌ನಲ್ಲಿ ಅಗ್ರಸ್ಥಾನ: ಈ ಆವೃತ್ತಿಯಲ್ಲಿ ಸ್ಫೋಟಕ ಪ್ರದರ್ಶನ ನೀಡುತ್ತಿರುವ ಕೊಹ್ಲಿ 505 ರನ್‌ ಗಳಿಸಿ ಆರೆಂಜ್‌ ಕ್ಯಾಪ್‌ ರೇಸ್‌ನಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಗುಜರಾತ್ ಟೈಟಾನ್ಸ್‌ನ ಸಾಯಿ ಸುದರ್ಶನ್ 504 ರನ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, ಮುಂಬೈ ಇಂಡಿಯನ್ಸ್‌ನ ಸೂರ್ಯ ಕುಮಾರ್ ಯಾದವ್ 475 ರನ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ಕೊಹ್ಲಿ ಐಪಿಎಲ್‌ನಲ್ಲಿ 8ನೇ ಬಾರಿಗೆ 500ಕ್ಕೂ ಹೆಚ್ಚು ರನ್‌ ಗಳಿಸಿದ ಮೊದಲಿಗನಾಗಿದ್ದಾರೆ. 7 ಬಾರಿ 500ಕ್ಕೂ ಹೆಚ್ಚು ರನ್‌ ಗಳಿಸಿದ ಡೇವಿಡ್‌ ವಾರ್ನರ್‌ 2ನೇ ಸ್ಥಾನದಲ್ಲಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Puttaraj K Alur

ಪುಟ್ಟರಾಜ ಕೆ ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.  

ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser)ನ್ಯೂಸ್‌, ಒಪೊಯಿ‌ (Opoyi)ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

...Read More

Trending News