ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ15ನೇ ಆವತ್ತಿಯ 27ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಇಂದು ಸಂಜೆ 7.30ಕ್ಕೆ ನಡೆಯಲಿದೆ.
ಇದನ್ನು ಓದಿ: KKR : ಮ್ಯಾಚ್ ವಿನ್ನರ್‌ಗಳಿಂದ ತುಂಬಿದೆ ಕೋಲ್ಕತ್ತಾ ಟೀಂ, ಪ್ಲೇಯಿಂಗ್ 11 ನಲ್ಲಿ ಈ ದಿಗ್ಗಜರು
ಈ ಬಾರಿ ನಾಯಕ ಫಾಫ್ ಡು ಪ್ಲೆಸಿಸ್ ನಾಯಕತ್ವದಲ್ಲಿ ಕಣಕ್ಕಿಳಿದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದೆ. ಆದರೆ ಹ್ಯಾಟ್ರಿಕ್ ಜಯ ಸಾಧಿಸಿ ಕೊನೆಯದಾಗಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದ ತನ್ನ ಐದನೇ ಪಂದ್ಯದಲ್ಲಿ 217 ರನ್‌ಗಳ ಬೃಹತ್ ಮೊತ್ತವನ್ನು ಬೆನ್ನತ್ತುವಲ್ಲಿ ವಿಫಲವಾಗಿ 23 ರನ್‌ಗಳ ಸೋಲನ್ನು ಅನುಭವಿಸಿತ್ತು. ಸದ್ಯ ಟೂರ್ನಿಯಲ್ಲಿ ಆಡಿರುವ 5 ಪಂದ್ಯಗಳಲ್ಲಿ 3 ಆಟವನ್ನು ಆರ್‌ಸಿಬಿ ತಂಡ ಗೆದ್ದಿದ್ದು, ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ. ಇನ್ನೊಂದೆಡೆ ಇಲ್ಲಿಯವರೆಗೂ ಆಡಿರುವ 4 ಪಂದ್ಯಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್, 2 ಪಂದ್ಯಗಳನ್ನು ಗೆದ್ದಿದ್ದು, ಉಳಿದೆರಡು ಪಂದ್ಯಗಳಲ್ಲಿ ಸೋಲನ್ನು ಅನುಭವಿಸಿ ಅಂಕಪಟ್ಟಿಯಲ್ಲಿ ಏಳನೇ ಸ್ಥಾನ ಪಡೆದುಕೊಂಡಿದೆ.
ಇನ್ನು ಎರಡೂ ತಂಡಗಳ ನಡುವೆ ಐಪಿಎಲ್ ಇತಿಹಾಸದ ಮುಖಾಮುಖಿಯಲ್ಲಿ ಯಾವ ತಂಡ ಎಷ್ಟು ಪಂದ್ಯಗಳಲ್ಲಿ ಜಯ ಸಾಧಿಸಿದೆ ಎಂಬುದರ ಕುರಿತಾದ ವಿವರ ಇಲ್ಲಿದೆ. ಐಪಿಎಲ್ ಇತಿಹಾಸದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವೆ ಒಟ್ಟು 26 ಪಂದ್ಯಗಳು ನಡೆದಿದೆ. ಈ ಪೈಕಿ ಆರ್‌ಸಿಬಿ 15 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ 10 ಪಂದ್ಯಗಳಲ್ಲಿ ಜಯವನ್ನು ಕಂಡಿದೆ. ಉಳಿದೊಂದು ಪಂದ್ಯವು ಯಾವುದೇ ಫಲಿತಾಂಶವಿಲ್ಲದೇ ಅಂತ್ಯಗೊಂಡಿದೆ. ಈ ಮೂಲಕ ಐಪಿಎಲ್ ಮುಖಾಮುಖಿ ಪಂದ್ಯಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸ್ಪಷ್ಟ ಮೇಲುಗೈ ಸಾಧಿಸಿದೆ.
ಇದನ್ನು ಓದಿ: GT vs RR : ಅಗ್ರಸ್ಥಾನಕ್ಕೇರಿದ ಗುಜರಾತ್ ಟೈಟಾನ್ಸ್ : ಹಾರ್ದಿಕ್ ಪಾಂಡ್ಯ ನಾಯಕತ್ವದ ಬಗ್ಗೆ ಮೆಚ್ಚುಗೆ ವ್ಯಕ್ತ
ಇನ್ನೊಂದೆಡೆ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವಿನ ಕೊನೆಯ 5 ಪಂದ್ಯಗಳ ಮುಖಾಮುಖಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ 3 ಪಂದ್ಯಗಳನ್ನು ಗೆದ್ದು ಬೀಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು 2 ಪಂದ್ಯಗಳಲ್ಲಿ ಗೆದ್ದಿದೆ. ಈ ಮೂಲಕ ಇತ್ತಂಡಗಳ ನಡುವಿನ ಕೊನೆಯ 5 ಪಂದ್ಯಗಳ ಮುಖಾಮುಖಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಮೇಲುಗೈ ಸಾಧಿಸಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.