Royal Challengers Bengaluru vs Gujarat Titans: ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಮಹತ್ವದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಗುಜರಾತ್ ಟೈಟಾನ್ಸ್ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಜೋಸ್ ಬಟ್ಲರ್ ಸ್ಫೋಟಕ ಆಟದ ಪರಿಣಾಮ ಆರ್‌ಸಿಬಿ ತವರಿನಲ್ಲಿ ಮೊದಲ ಸೋಲು ಕಾಣಬೇಕಾಯಿತು. ಟಾಸ್ ಗೆದ್ದ ಗುಜರಾತ್ ತಂಡದ ನಾಯಕ ಶುಭಮನ್ ಗಿಲ್ ಫೀಲ್ಡಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 169 ರನ್ ಗಳಿಸಿತು.
170 ರನ್‌ಗಳ ಟಾರ್ಗೆಟ್ ಬೆನ್ನತ್ತಿದ ಗುಜರಾತ್ 17.5 ಓವರ್‌ಗಳಲ್ಲಿ ಕೇವಲ 2 ವಿಕೆಟ್ ಕಳೆದುಕೊಂಡು ಭರ್ಜರಿ ಗೆಲುವು ಸಾಧಿಸಿತು. ಗುಜರಾತ್ ಪರ ಅದ್ಭುತ ಆಟವಾಡಿದ ಜೋಸ್ ಬಟ್ಲರ್ 39 ಎಸೆತಗಳಲ್ಲಿ 5 ಬೌಂಡರಿ ಮತ್ತು 6 ಸಿಕ್ಸರ್ ಇದ್ದ ಅಜೇಯ 73 ರನ್ ಗಳಿಸಿ ಮಿಂಚಿದರು. ಇವರಿಗೆ ಉತ್ತಮ ಸಾಥ್ ನೀಡಿದ ಶೆರ್ಫೇನ್ ರುದರ್ಫೋರ್ಡ್ ಅಜೇಯ 30 ರನ್ ಗಳಿಸಿದರು. ಇದಲ್ಲದೆ ಆರಂಭಿಕರಾಗಿ ಕಣಕ್ಕಿಳಿದಿದ್ದ ಸಾಯಿ ಸುದರ್ಶನ್ 49 ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದರು. ನಾಯಕ ಶುಭಮನ್ ಗಿಲ್ 14 ರನ್ ಗಳಿಸಿದರು.
ಇದನ್ನೂ ಓದಿ: RCB vs GT: ಬೆಂಗಳೂರು Vs ಗುಜರಾತ್ ಯಾರು ಗೆಲ್ಲುತ್ತಾರೆ? ಉಭಯ ತಂಡಗಳ ಬಲಾಬಲ ಹೇಗಿದೆ?
ಆರ್‌ಸಿಬಿಗೆ ಮಾರಕವಾದ ಸಿರಾಜ್
Not a great day at the office! ?
Early days! Time to regroup and come back stronger. ?#PlayBold #ನಮ್ಮRCB #IPL2025 #RCBvGT pic.twitter.com/telsICCuN9
— Royal Challengers Bengaluru (@RCBTweets) April 2, 2025
ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿಗೆ ಗುಜರಾತ್ ಬೌಲರ್‌ಗಳು ಆರಂಭಿಕ ಆಘಾತ ನೀಡಿದರು. ಆರಂಭಿಕರಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ 7 ರನ್ ಮತ್ತು ದೇವದತ್ ಪಡಿಕಲ್ 4 ರನ್ ಗಳಿಸಿ ಔಟಾದರು. ಫಿಲ್ ಸಾಲ್ಟ್ ಕೂಡ 14 ರನ್ ಗಳಿಸಿ ನಿರ್ಗಮಿಸಿದರು. ನಾಯಕ ರಜತ್ ಪಾಟಿದಾರ್ ಕೂಡ 12 ರನ್ ಗಳಿಸಿ ನಿರಾಸೆ ಮೂಡಿಸಿದರು. ಆರ್‌ಸಿಬಿ 42 ರನ್ ಗಳಿಸುವಷ್ಟರಲ್ಲಿ 4 ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.
On Display: Brute Force ?
Scorecard ▶ https://t.co/teSEWkWPWL #TATAIPL | #RCBvGT | @gujarat_titans pic.twitter.com/XyHwMy3KVl
— IndianPremierLeague (@IPL) April 2, 2025
ಈ ವೇಳೆ ತಾಳ್ಮೆಯ ಆಟವಾಡಿದ ಲಿಯಾಮ್ ಲಿವಿಂಗ್‌ಸ್ಟೋನ್ ಆಕರ್ಷಕ ಅರ್ಧಶತಕ ಗಳಿಸಿದರು. 40 ಎಸೆತಗಳಲ್ಲಿ 1 ಸಿಕ್ಸರ್ ಮತ್ತು 5 ಬೌಂಡರಿ ಇದ್ದ 54 ರನ್ ಗಳಿಸಿದರು. ಇವರಿಗೆ ಉತ್ತಮ ಸಾಥ್ ನೀಡಿದ ಜಿತೇಶ್ ಶರ್ಮಾ 33 ರನ್ ಗಳಿಸಿದರು. ಕೊನೆಯಲ್ಲಿ ಸ್ಫೋಟಕ ಆಟವಾಡಿದ ಟಿಮ್ ಡೇವಿಡ್ 32 ರನ್ ಗಳಿಸಿದರು. ಗುಜರಾತ್ ಪರ ಬೌಲಿಂಗ್‌ನಲ್ಲಿ ಮೊಹಮ್ಮದ್ ಸಿರಾಜ್ 3 ವಿಕೆಟ್ ಪಡೆದರೆ, ಸಾಯಿ ಕಿಶೋರ್ 2 ವಿಕೆಟ್ ಕಬಳಿಸಿದರು. ಪ್ರಸಿದ್ ಕೃಷ್ಣ, ಅರ್ಷದ್ ಖಾನ್ ಮತ್ತು ಇಶಾಂತ್ ಶರ್ಮಾ ತಲಾ ಒಂದೊಂದು ವಿಕೆಟ್ ಪಡೆದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.









