RCB vs GT: ನಿರಾಸೆ ಮೂಡಿಸಿದ ಕೊಹ್ಲಿ, ಗುಜರಾತ್‌ಗೆ 170 ರನ್‌ಗಳ ಟಾರ್ಗೆಟ್‌ ನೀಡಿದ ಆರ್‌ಸಿಬಿ!!

RCB vs GT: ಮೊದಲು ಬ್ಯಾಟಿಂಗ್‌ ಮಾಡಿದ ಆರ್‌ಸಿಬಿಗೆ ಗುಜರಾತ್‌ ಬೌಲರ್‌ಗಳು ಆರಂಭಿಕ ಆಘಾತ ನೀಡಿದರು. ಆರಂಭಿಕರಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ 7 ರನ್ ಮತ್ತು ದೇವದತ್ ಪಡಿಕಲ್ 4 ರನ್ ಗಳಿಸಿ ಔಟಾದರು. ಫಿಲ್‌ ಸಾಲ್ಟ್ ಕೂಡ 14 ರನ್‌ ಗಳಿಸಿ ನಿರ್ಗಮಿಸಿದರು. ನಾಯಕ ರಜತ್‌ ಪಾಟಿದಾರ್‌ ಕೂಡ 12 ರನ್‌ ಗಳಿಸಿ ನಿರಾಸೆ ಮೂಡಿಸಿದರು. 

Written by - Puttaraj K Alur | Last Updated : Apr 2, 2025, 09:26 PM IST
  • ಗುಜರಾತ್‌ ಟೈಟಾನ್ಸ್‌ ವಿರುದ್ಧ ಆಕರ್ಷಕ ಅರ್ಧಶತಕ ಗಳಿಸಿದ ಲಿಯಾಮ್ ಲಿವಿಂಗ್‌ಸ್ಟೋನ್
  • ಶುಭಮನ್‌ ಗಿಲ್‌ ಪಡೆಗೆ 170 ರನ್‌ಗಳ ಟಾರ್ಗೆಟ್‌ ನೀಡಿದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು
  • ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 3 ವಿಕೆಟ್‌ ಪಡೆದು ಮಿಂಚಿದ ಮೊಹಮ್ಮದ್‌ ಸಿರಾಜ್‌
RCB vs GT: ನಿರಾಸೆ ಮೂಡಿಸಿದ ಕೊಹ್ಲಿ, ಗುಜರಾತ್‌ಗೆ 170 ರನ್‌ಗಳ ಟಾರ್ಗೆಟ್‌ ನೀಡಿದ ಆರ್‌ಸಿಬಿ!!

Royal Challengers Bengaluru vs Gujarat Titans: ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್‌ ಟೂರ್ನಿಯ 14 ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು vs ಗುರಾಜತ್‌ ಟೈಟಾನ್ಸ್‌ ಮುಖಾಮುಖಿಯಾಗಿವೆ. ಟಾಸ್‌ ಗೆದ್ದ ಗುಜರಾತ್‌ ತಂಡದ ನಾಯಕ ಶುಭಮನ್‌ ಗಿಲ್‌ ಫೀಲ್ಡಿಂಗ್‌ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟಿಂಗ್‌ ಮಾಡಿದ ಆರ್‌ಸಿಬಿ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ ಕಳೆದುಕೊಂಡು 169 ರನ್‌ ಗಳಿಸಿದೆ. ಈ ಮೂಲಕ ಗುಜರಾತ್‌ಗೆ 170 ರನ್‌ಗಳ ಟಾರ್ಗೆಟ್‌ ನೀಡಿದೆ. 

Add Zee News as a Preferred Source

ಮೊದಲು ಬ್ಯಾಟಿಂಗ್‌ ಮಾಡಿದ ಆರ್‌ಸಿಬಿಗೆ ಗುಜರಾತ್‌ ಬೌಲರ್‌ಗಳು ಆರಂಭಿಕ ಆಘಾತ ನೀಡಿದರು. ಆರಂಭಿಕರಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ 7 ರನ್ ಮತ್ತು ದೇವದತ್ ಪಡಿಕಲ್ 4 ರನ್ ಗಳಿಸಿ ಔಟಾದರು. ಫಿಲ್‌ ಸಾಲ್ಟ್ ಕೂಡ 14 ರನ್‌ ಗಳಿಸಿ ನಿರ್ಗಮಿಸಿದರು. ನಾಯಕ ರಜತ್‌ ಪಾಟಿದಾರ್‌ ಕೂಡ 12 ರನ್‌ ಗಳಿಸಿ ನಿರಾಸೆ ಮೂಡಿಸಿದರು. ಆರ್‌ಸಿಬಿ 42 ರನ್‌ ಗಳಿಸುವಷ್ಟರಲ್ಲಿ 4 ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.

ಇದನ್ನೂ ಓದಿ: RCB vs GT: ಬೆಂಗಳೂರು Vs ಗುಜರಾತ್ ಯಾರು ಗೆಲ್ಲುತ್ತಾರೆ? ಉಭಯ ತಂಡಗಳ ಬಲಾಬಲ ಹೇಗಿದೆ?

ಈ ವೇಳೆ ತಾಳ್ಮೆಯ ಆಟವಾಡಿದ ಲಿಯಾಮ್ ಲಿವಿಂಗ್‌ಸ್ಟೋನ್ ಆಕರ್ಷಕ ಅರ್ಧಶತಕ ಗಳಿಸಿದರು. 40 ಎಸೆತಗಳಲ್ಲಿ 1 ಸಿಕ್ಸರ್‌ ಮತ್ತು 5 ಬೌಂಡರಿ ಇದ್ದ 54 ರನ್‌ ಗಳಿಸಿದರು. ಇವರಿಗೆ ಉತ್ತಮ ಸಾಥ್‌ ನೀಡಿದ ಜಿತೇಶ್‌ ಶರ್ಮಾ 33 ರನ್‌ ಗಳಿಸಿದರು. ಕೊನೆಯಲ್ಲಿ ಸ್ಫೋಟಕ ಆಟವಾಡಿದ ಟಿಮ್‌ ಡೇವಿಡ್‌ 32 ರನ್‌ ಗಳಿಸಿದರು. ‌

ಗುಜರಾತ್‌ ಪರ ಬೌಲಿಂಗ್‌ನಲ್ಲಿ ಮೊಹಮ್ಮದ್‌ ಸಿರಾಜ್‌ 3 ವಿಕೆಟ್‌ ಪಡೆದರೆ, ಸಾಯಿ ಕಿಶೋರ್‌ 2 ವಿಕೆಟ್‌ ಕಬಳಿಸಿದರು. ಪ್ರಸಿದ್‌ ಕೃಷ್ಣ, ಅರ್ಷದ್‌ ಖಾನ್‌ ಮತ್ತು ಇಶಾಂತ್‌ ಶರ್ಮಾ ತಲಾ ಒಂದೊಂದು ವಿಕೆಟ್‌ ಪಡೆದರು. 

ಇದನ್ನೂ ಓದಿ: ಬೆಂಗಳೂರಿನ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ಶ್ರಮಿಸಿದ್ದ ಎಂ.ಚಿನ್ನಸ್ವಾಮಿ..! ಇಲ್ಲಿದೆ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ಶ್ರಮಿಸಿದ ಸಾಧಕನೊಬ್ಬನ ರೋಚಕ ಕಥೆ..!

RCB vs GT: ಎರಡೂ ತಂಡಗಳ ಸಂಭಾವ್ಯ ಆಡುವ XI

ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್‌ವುಡ್, ಯಶ್ ದಯಾಲ್.

ಇಂಪ್ಯಾಕ್ಟ್ ಪ್ಲೇಯರ್ : ಸುಯಶ್ ಶರ್ಮಾ

ಗುಜರಾತ್ ಟೈಟಾನ್ಸ್: ಶುಭಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಶೆರ್ಫೇನ್ ರುದರ್‌ಫೋರ್ಡ್, ಶಾರುಖ್ ಖಾನ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಆರ್.ಸಾಯಿ ಕಿಶೋರ್, ಕಗಿಸೊ ರಬಾಡ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.

ಇಂಪ್ಯಾಕ್ಟ್ ಪ್ಲೇಯರ್: ಮಹಿಪಾಲ್ ಲೊಮ್ರೋರ್

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Puttaraj K Alur

ಪುಟ್ಟರಾಜ ಕೆ ಆಲೂರ ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser) ನ್ಯೂಸ್‌, ಒಪೊಯಿ‌ (Opoyi) ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. ...Read More

Trending News