RCB vs KKR: ರಹಾನೆ, ನರೈನ್ ಸ್ಫೋಟಕ ಬ್ಯಾಟಿಂಗ್‌, ಆರ್‌ಸಿಬಿಗೆ 175 ರನ್‌ ಟಾರ್ಗೆಟ್‌ ನೀಡಿದ ಕೋಲ್ಕತ್ತಾ!!

IPL 2025: 2025ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟಿ-20 ಕ್ರಿಕೆಟ್ ಟೂರ್ನಿಗೆ ವರ್ಣರಂಜಿತ ಚಾಲನೆ ದೊರಕಿದೆ. ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೋಲ್ಕತ್ತ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗಿವೆ.

Written by - Puttaraj K Alur | Last Updated : Mar 22, 2025, 09:35 PM IST
  • 2025ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟಿ-20 ಟೂರ್ನಿಗೆ ವರ್ಣರಂಜಿತ ಚಾಲನೆ
  • ಉದ್ಘಾಟನಾ ಪಂದ್ಯದಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿ
  • ರಹಾನೆ, ನರೈನ್ ಸ್ಫೋಟಕ ಬ್ಯಾಟಿಂಗ್‌, ಆರ್‌ಸಿಬಿಗೆ 175 ರನ್‌ ಟಾರ್ಗೆಟ್‌ ನೀಡಿದ ಕೋಲ್ಕತ್ತಾ!!
RCB vs KKR: ರಹಾನೆ, ನರೈನ್ ಸ್ಫೋಟಕ ಬ್ಯಾಟಿಂಗ್‌, ಆರ್‌ಸಿಬಿಗೆ 175 ರನ್‌ ಟಾರ್ಗೆಟ್‌ ನೀಡಿದ ಕೋಲ್ಕತ್ತಾ!!
RCB vs KKR

Indian Premier League 2025: 2025ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಟಿ-20 ಕ್ರಿಕೆಟ್ ಟೂರ್ನಿಗೆ ವರ್ಣರಂಜಿತ ಚಾಲನೆ ದೊರಕಿದೆ. ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೋಲ್ಕತ್ತ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗಿವೆ.

ಕೋಲ್ಕತ್ತದ ಈಡನ್ ಗಾರ್ಡನ್ಸ್‌ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್‌ಸಿಬಿ ತಂಡ ನಾಯಕ ರಜತ್ ಪಾಟೀದಾರ್ ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಮೊದಲು ಬ್ಯಾಟಿಂಗ್‌ ಮಾಡಿದ ಕೆಕೆಆರ್‌ ಅದ್ಭುತ ಬ್ಯಾಟಿಂಗ್‌ ಪ್ರದರ್ಶನ ನೀಡುವ ಮೂಲಕ ಆರ್‌ಸಿಬಿಗೆ 175 ರನ್‌ಗಳ ಟಾರ್ಗೆಟ್‌ ನೀಡಿದೆ. 

ಇದನ್ನೂ ಓದಿ: ಹೊಸ ಅಧ್ಯಾಯ-ಹೊಸ ನಾಯಕತ್ವದಲ್ಲಿ ಬರ್ತಿದೆ ಆರ್‌ಸಿಬಿ! ಕೊಹ್ಲಿ ಬ್ಯಾಟಿಂಗ್‌ ಅಷ್ಟೇಅಲ್ಲ... ಈ ಸಲ ಬೆಂಗಳೂರಿಗಿದೆ ಈ ತ್ರಿಮೂರ್ತಿಗಳ ಬೌಲಿಂಗ್ ʼಕಟಾಕ್ಷʼ

ರಹಾನೆ, ನರೈನ್‌ ಸ್ಫೋಟಕ ಬ್ಯಾಟಿಂಗ್‌ 

ಮೊದಲು ಬ್ಯಾಟಿಂಗ್‌ ಮಾಡಿದ ಕೋಲ್ಕತ್ತಾ ತಂಡಕ್ಕೆ ಜೋಶ್ ಹ್ಯಾಜಲ್‌ವುಡ್ ಆರಂಭಿಕ ಆಘಾತ ನೀಡಿದರು. ಉತ್ತಮ ಆರಂಭ ನೀಡಬೇಕಿದ್ದ ಕ್ವಿಂಟನ್ ಡಿ ಕಾಕ್ (4) ಹ್ಯಾಜಲ್‌ವುಡ್‌ ಬೌಲಿಂಗ್‌ನಲ್ಲಿ ಜಿತೇಶ್‌ ಶರ್ಮಾಗೆ ಕ್ಯಾಚಿತ್ತು ನಿರ್ಗಮಿಸಿದರು. ನಂತರ ಬಂದ ನಾಯಕ ಅಜಿಂಕ್ಯ ರಹಾನೆ, ಸುನಿಲ್‌ ನರೈನ್ ಜೊತೆಗೆ ಅದ್ಭುತ ಬ್ಯಾಟಿಂಗ್‌ ಪ್ರದರ್ಶಿಸಿದರು. ಆಕರ್ಷಕ ಅರ್ಧಶತಕ ಸಿಡಿಸಿದ ರಹಾನೆ 31 ಎಸೆತಗಳಲ್ಲಿ 6 ಬೌಂಡರಿ ಮತ್ತು 4 ಸಿಕ್ಸರ್‌ ಇದ್ದ 56 ರನ್‌ ಗಳಿಸಿದರೆ, ನರೈನ್‌ 26 ಎಸೆತಗಳಲ್ಲಿ 5 ಬೌಂಡರಿ ಮತ್ತು 3 ಸಿಕ್ಸರ್‌ ಇದ್ದ 44 ರನ್‌ ಗಳಿಸಿದರು. ಈ ಜೋಡಿ 2ನೇ ವಿಕೆಟ್‌ಗೆ 103 ರನ್‌ಗಳ ಜೊತೆಯಾಟವಾಡಿತು. 

ಕೊನೆಯಲ್ಲಿ ಮಿಂಚಿದ ಅಂಗ್‌ಕ್ರಿಶ್ ರಘುವಂಶಿ (30) ಮತ್ತು ರಿಂಕು ಸಿಂಗ್‌ (12) ರನ್‌ ಗಳಿಸಿದರು. ಕೋಲ್ಕತ್ತಾ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ ಕಳೆದುಕೊಂಡು 174 ರನ್‌ಗಳ ಸ್ಪರ್ಧಾತ್ಮಕ ಮೊತ್ತವನ್ನು ಪೇರಿಸಿತು. ಆರ್‌ಸಿಬಿ ಪರ ಬೌಲಿಂಗ್‌ನಲ್ಲಿ ಕೃನಾಲ್‌ ಪಾಂಡ್ಯ 3, ಜೋಶ್ ಹ್ಯಾಜಲ್‌ವುಡ್ 2 ವಿಕೆಟ್‌ ಪಡೆದರೆ, ಯಶ್‌ ದಯಾಳ್‌, ರಸೀಕ್ ದಾರ್ ಸಲಾಂ ಮತ್ತು ಸುಯೇಶ್ ಶರ್ಮಾ ತಲಾ ಒಂದೊಂದು ವಿಕೆಟ್‌ ಕಬಳಿಸಿದರು. 

ಇದನ್ನೂ ಓದಿ: Rohit Sharma Video: ರೋಹಿತ್‌ ಶರ್ಮಾಗೆ ಪಾಕಿಸ್ತಾನದವರಿಂದ ಅವಮಾನ! ಕೆರಳಿ ಕೆಂಡವಾದ ಟೀಂ ಇಂಡಿಯಾ ಅಭಿಮಾನಿಗಳು

ಎರಡೂ ತಂಡಗಳ ಸ್ಕ್ವಾಡ್‌ ಈ ರೀತಿ ಇದೆ

ರಾಯಲ್ ಚಾಲೆಂಜರ್ಸ್ ಬೆಂಗಳೂರು: ರಜತ್ ಪಾಟೀದಾರ್ (ನಾಯಕ), ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್, ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ, ಟಿಮ್ ಡೇವಿಡ್, ಕೃಣಾಲ್ ಪಾಂಡ್ಯ, ರಸೀಕ್ ದಾರ್ ಸಲಾಂ, ಸುಯೇಶ್ ಶರ್ಮಾ, ಜೋಶ್ ಹ್ಯಾಜಲ್‌ವುಡ್, ಯಶ್‌ ದಯಾಳ್.

ಕೋಲ್ಕತ್ತ ನೈಟ್ ರೈಡರ್ಸ್: ಅಜಿಂಕ್ಯ ರಹಾನೆ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಸುನಿಲ್‌ ನರೈನ್, ವೆಂಕಟೇಶ್ ಅಯ್ಯರ್, ರಿಂಕು ಸಿಂಗ್, ಅಂಗ್‌ಕ್ರಿಶ್ ರಘುವಂಶಿ, ಆ್ಯಂಡ್ರೆ ರಸೆಲ್, ರಮಣದೀಪ್ ಸಿಂಗ್, ಸ್ಪೆನ್ಸರ್ ಜಾನ್ಸನ್, ಹರ್ಷೀತ್ ರಾಣಾ, ವರುಣ್ ಚಕ್ರವರ್ತಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

Trending News