Indian Premier League 2025: ವಿರಾಟ್ ಕೊಹ್ಲಿ ಮತ್ತು ಫಿಲ್ ಸಾಲ್ಟ್ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಗೆಲುವು ಸಾಧಿಸಿದೆ. ಕೋಲ್ಕತ್ತದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಶನಿವಾರ ನಡೆದ 2025ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೆಕೆಆರ್ ವಿರುದ್ಧ ಆರ್‌ಸಿಬಿ 7 ವಿಕೆಟ್‌ಗಳ ಗೆಲುವು ಸಾಧಿಸುವ ಮೂಲಕ ಶುಭಾರಂಭ ಮಾಡಿದೆ.
Rain? Sure, our boys Reigned! ?
Took no prisoners tonight. Excellent start! ?❤️#PlayBold #ನಮ್ಮRCB #IPL2025 #KKRvRCB pic.twitter.com/ftaC54R9tv
— Royal Challengers Bengaluru (@RCBTweets) March 22, 2025
18ನೇ ಋತುವಿನ ಐಪಿಎಲ್ ಟಿ-20 ಕ್ರಿಕೆಟ್ ಟೂರ್ನಿಗೆ ವರ್ಣರಂಜಿತ ಚಾಲನೆ ದೊರಕಿದೆ. ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೋಲ್ಕತ್ತ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗಿದ್ದವು. ಟಾಸ್ ಗೆದ್ದ ಆರ್‌ಸಿಬಿ ತಂಡ ನಾಯಕ ರಜತ್ ಪಾಟೀದಾರ್ ಫೀಲ್ಡಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡುವ ಮೂಲಕ ಆರ್‌ಸಿಬಿಗೆ 175 ರನ್‌ಗಳ ಟಾರ್ಗೆಟ್ ನೀಡಿತು. ಬೃಹತ್ ಮೊತ್ತದ ಟಾರ್ಗೆಟ್ ಚೇಸಿಂಗ್ ಮಾಡುವಲ್ಲಿ ಯಶಸ್ಸಿಯಾದ ಆರ್‌ಸಿಬಿ 16.2 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 177 ರನ್ ಗಳಿಸಿ ಭರ್ಜರಿ ಗೆಲುವು ಸಾಧಿಸಿತು.
ಇದನ್ನೂ ಓದಿ: Rohit Sharma Video: ರೋಹಿತ್ ಶರ್ಮಾಗೆ ಪಾಕಿಸ್ತಾನದವರಿಂದ ಅವಮಾನ! ಕೆರಳಿ ಕೆಂಡವಾದ ಟೀಂ ಇಂಡಿಯಾ ಅಭಿಮಾನಿಗಳು
ಕೊಹ್ಲಿ-ಸಾಲ್ಟ್ ಸ್ಫೋಟಕ ಬ್ಯಾಟಿಂಗ್
ಕೆಕೆಆರ್ ನೀಡಿದ ಬೃಹತ್ ಮೊತ್ತದ ಟಾರ್ಗೆಟ್ ಬೆನ್ನತ್ತಿದ ಆರ್‌ಸಿಬಿ ಪರ ಆರಂಭಿಕರಾಗಿ ಕಣಕ್ಕಿಳಿದ ಫಿಲ್ ಸಾಲ್ಟ್ ಮತ್ತು ವಿರಾಟ್ ಕೊಹ್ಲಿ ಮೊದಲ ವಿಕೆಟ್‌ಗೆ 95 ರನ್‌ಗಳ ಅದ್ಭುತ ಜೊತೆಯಾಟವಾಡಿದರು. ಮನಬಂದಂತೆ ಕೆಕೆಆರ್ ಬೌಲರ್‌ಗಳನ್ನು ದಂಡಿಸಿದ ಸಾಲ್ಟ್ 31 ಎಸೆತಗಳಲ್ಲಿ 9 ಬೌಂಡರಿ ಮತ್ತು 2 ಸಿಕ್ಸರ್ ಇದ್ದ 56 ರನ್ ಗಳಿಸಿದರು. ಆರ್‌ಸಿಬಿ ಸೇರಿದ ಚೊಚ್ಚಲ ಪಂದ್ಯದಲ್ಲಿ ಸಾಲ್ಟ್ ಆಕರ್ಷಕ ಅರ್ಧಶತಕ ಸಿಡಿಸಿದ್ದು ವಿಶೇಷವಾಗಿತ್ತು. ವಿರಾಟ್ ಕೊಹ್ಲಿ 36 ಎಸೆತಗಳಲ್ಲಿ 4 ಬೌಂಡರಿ 3 ಸಿಕ್ಸರ್ ಇದ್ದ 59 ರನ್ ಗಳಿಸಿ ಔಟಾಗದೆ ಉಳಿದರು. ಇನ್ನುಳಿದಂತೆ ನಾಯಕ ರಜತ್ ಪಾಟೀದಾರ್ (34), ದೇವದತ್ ಪಡಿಕ್ಕಲ್ (10) ಮತ್ತು ಯಾಮ್ ಲಿವಿಂಗ್‌ಸ್ಟೋನ್ ಔಟಾಗದೆ 15 ರನ್ ಗಳಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು. ಕೆಕೆಆರ್ ಪರ ವೈಭವ್ ಅರೋರಾ, ವರುಣ್ ಚಕ್ರವರ್ತಿ ಮತ್ತು ಸುನಿಲ್ ನರೈನ್ ತಲಾ ಒದೊಂದು ವಿಕೆಟ್ ಪಡೆದರು.
Rain? Sure, our boys Reigned! ?
Took no prisoners tonight. Excellent start! ?❤️#PlayBold #ನಮ್ಮRCB #IPL2025 #KKRvRCB pic.twitter.com/ftaC54R9tv
— Royal Challengers Bengaluru (@RCBTweets) March 22, 2025
ರಹಾನೆ, ನರೈನ್ ಸ್ಫೋಟಕ ಬ್ಯಾಟಿಂಗ್
ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕತ್ತಾ ತಂಡಕ್ಕೆ ಜೋಶ್ ಹ್ಯಾಜಲ್‌ವುಡ್ ಆರಂಭಿಕ ಆಘಾತ ನೀಡಿದರು. ಉತ್ತಮ ಆರಂಭ ನೀಡಬೇಕಿದ್ದ ಕ್ವಿಂಟನ್ ಡಿ ಕಾಕ್ (4) ಹ್ಯಾಜಲ್‌ವುಡ್ ಬೌಲಿಂಗ್‌ನಲ್ಲಿ ಜಿತೇಶ್ ಶರ್ಮಾಗೆ ಕ್ಯಾಚಿತ್ತು ನಿರ್ಗಮಿಸಿದರು. ನಂತರ ಬಂದ ನಾಯಕ ಅಜಿಂಕ್ಯ ರಹಾನೆ, ಸುನಿಲ್ ನರೈನ್ ಜೊತೆಗೆ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದರು. ಆಕರ್ಷಕ ಅರ್ಧಶತಕ ಸಿಡಿಸಿದ ರಹಾನೆ 31 ಎಸೆತಗಳಲ್ಲಿ 6 ಬೌಂಡರಿ ಮತ್ತು 4 ಸಿಕ್ಸರ್ ಇದ್ದ 56 ರನ್ ಗಳಿಸಿದರೆ, ನರೈನ್ 26 ಎಸೆತಗಳಲ್ಲಿ 5 ಬೌಂಡರಿ ಮತ್ತು 3 ಸಿಕ್ಸರ್ ಇದ್ದ 44 ರನ್ ಗಳಿಸಿದರು. ಈ ಜೋಡಿ 2ನೇ ವಿಕೆಟ್‌ಗೆ 103 ರನ್‌ಗಳ ಜೊತೆಯಾಟವಾಡಿತು.
ಕೊನೆಯಲ್ಲಿ ಮಿಂಚಿದ ಅಂಗ್‌ಕ್ರಿಶ್ ರಘುವಂಶಿ (30) ಮತ್ತು ರಿಂಕು ಸಿಂಗ್ (12) ರನ್ ಗಳಿಸಿದರು. ಕೋಲ್ಕತ್ತಾ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 174 ರನ್‌ಗಳ ಸ್ಪರ್ಧಾತ್ಮಕ ಮೊತ್ತವನ್ನು ಪೇರಿಸಿತು. ಆರ್‌ಸಿಬಿ ಪರ ಬೌಲಿಂಗ್‌ನಲ್ಲಿ ಕೃನಾಲ್ ಪಾಂಡ್ಯ 3, ಜೋಶ್ ಹ್ಯಾಜಲ್‌ವುಡ್ 2 ವಿಕೆಟ್ ಪಡೆದರೆ, ಯಶ್ ದಯಾಳ್, ರಸೀಕ್ ದಾರ್ ಸಲಾಂ ಮತ್ತು ಸುಯೇಶ್ ಶರ್ಮಾ ತಲಾ ಒಂದೊಂದು ವಿಕೆಟ್ ಕಬಳಿಸಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.









