Kolkata Knight Riders vs Royal Challengers Bengaluru: ಭಾರೀ ನೀರಿಕ್ಷೆ ಹುಟ್ಟಿಸಿರುವ 2025ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಟೂರ್ನಿಯ ಆರಂಭಕ್ಕೆ ಇನ್ನು ಕೇವಲ ಒಂದೇ ದಿನ ಬಾಕಿ ಇದೆ. ಮಾರ್ಚ್ 22ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತಾ ನೈಟ್ ರೈಡರ್ಸ್ (RCB vs KKR) ತಂಡಗಳು ಮುಖಾಮುಖಿಯಾಲಿವೆ. 18ನೇ ಆವೃತ್ತಿಯ ಐಪಿಎಲ್‌ನ ಆರಂಭಿಕ ಪಂದ್ಯದಲ್ಲಿ ರೋಚಕ ಸೆಣಸಾಟ ನಡೆಯಲಿದೆ. ಚೊಚ್ಚಲ ಪ್ರಶಸ್ತಿಗಾಗಿ ಎದುರು ನೋಡುತ್ತಿರುವ ಆರ್‌ಸಿಬಿ ಹಾಗೂ ಹಾಲಿ ಚಾಂಪಿಯನ್ಸ್ ಕೋಲ್ಕತಾ ನಡುವಿನ ಕಾದಾಟವನ್ನ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಉಭಯ ತಂಡಗಳ ನಡುವಿನ ಈ ಸೆಣಸಾಟದಲ್ಲಿ ಯಾರು ಗೆಲುವು ಸಾಧಿಸುತ್ತಾರೆ ಅನ್ನೋದರ ಬಗ್ಗೆ ತೀವ್ರ ಕುತೂಹಲ ಮೂಡಿದೆ.
ಐಪಿಎಲ್ ಮೆಗಾ ಹರಾಜಿನಲ್ಲಿ ಬೆಂಗಳೂರು ಫ್ರಾಂಚೈಸಿಯು ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡೂ ವಿಭಾಗಗಳಲ್ಲಿ ಉತ್ತಮ ಆಟಗಾರರನ್ನ ಖರೀದಿಸಿದೆ. ಫಾಫ್ ಡು ಪ್ಲೆಸಿಸ್ ನಿರ್ಗಮನದಿಂದ ತೆರವಾಗಿರುವ ಆರ್‌ಸಿಬಿ ನಾಯಕತ್ವಕ್ಕೆ ಯುವ ಬ್ಯಾಟ್ಸ್‌ಮನ್ ರಜತ್ ಪಾಟಿದಾರ್‌ಗೆ ಜವಾಬ್ದಾರಿ ವಹಿಸಲಾಗಿದೆ. ಈ ಬಾರಿ ಹೊಸ ರಣತಂತ್ರದೊಂದಿಗೆ ಕಣಕ್ಕೆ ಇಳಿಯಲು ಸಜ್ಜಾಗಿರುವ ಆರ್‌ಸಿಬಿ ಟ್ರೋಫಿ ಮೇಲೆ ಕಣ್ಣಿಟ್ಟಿದೆ. ತಂಡದ ಬ್ಯಾಟಿಂಗ್ ವಿಭಾಗಕ್ಕೆ ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್, ಲಿಯಾಮ್ ಲಿವಿಂಗ್‌ಸ್ಟೋನ್, ರಜತ್ ಪಾಟಿದಾರ್ ಬಲ ತುಂಬಿದರೆ, ಬೌಲಿಂಗ್ ವಿಭಾಗಕ್ಕೆ ಜೋಶ್ ಹೇಝಲ್‌ವುಡ್ ಹಾಗೂ ಭುವನೇಶ್ವರ್ ಕುಮಾರ್ ಮುಂತಾದವರು ಬಲ ತುಂಬಲಿದ್ದಾರೆ. ಇವರಲ್ಲದೆ, ಟಿಮ್ ಡೇವಿಡ್, ಕೃಣಾಲ್ ಪಾಂಡ್ಯ, ರೊಮ್ಯಾರಿಯೊ ಶೆಫರ್ಡ್, ಟಿಮ್ ಭೆಥೆಲ್ ಸೇರಿದಂತೆ ಸ್ಟಾರ್ ಆಲ್‌ರೌಂಡರ್‌ಗಳು ಸಹ ತಂಡದಲ್ಲಿದ್ದಾರೆ.
ಇದನ್ನೂ ಓದಿ: ಕೆಕೆಆರ್ vs ಆರ್‌ಸಿಬಿ ನಡುವಿನ ಉದ್ಘಾಟನಾ ಪಂದ್ಯ ರದ್ದಾಗುವ ಸಾಧ್ಯತೆ! ಕಾರಣ ಇದು
ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡ ಕಳೆದ ಆವೃತ್ತಿಯಲ್ಲಿ ಚಾಂಪಿಯನ್ ಆಗಿತ್ತು. ಆದರೂ ಸಹ ಶ್ರೇಯಸ್ ಅಯ್ಯರ್‌ರನ್ನ ಕೋಲ್ಕತಾ ಫ್ರಾಂಚೈಸಿ ರಿಟೈನ್ ಮಾಡಿಕೊಂಡಿರಲಿಲ್ಲ. ಈ ಹಿನ್ನೆಲೆ ಪ್ರಸಕ್ತ ಟೂರ್ನಿಯಲ್ಲಿ ಅಜಿಂಕ್ಯ ರಹಾನೆ ಕೆಕೆಆರ್ ತಂಡವನ್ನ ಮುನ್ನಡೆಸಲಿದ್ದಾರೆ. ಕಕೆಆರ್ ತಂಡದಲ್ಲಿಯೂ ಸ್ಟಾರ್ ಆಟಗಾರರಿದ್ದಾರೆ. ಬ್ಯಾಟಿಂಗ್ ವಿಭಾಗದಲ್ಲಿ ಕ್ವಿಂಟನ್ ಡಿ ಕಾಕ್, ರೆಹಮಾನುಲ್ಲಾ ಗುರ್ಬಾಜ್, ಅಜಿಂಕ್ಯ ರಹಾನೆ, ವೆಂಕಟೇಶ್ ಅಯ್ಯರ್, ಮನೀಷ್ ಪಾಂಡೆ ಇದ್ದರೆ, ಸುನೀಲ್ ನರೇನ್, ಆಂಡ್ರೆ ರಸೆಲ್ ಮತ್ತು ವೆಂಕಟೇಶ್ ಅಯ್ಯರ್‌ರಂತಹ ಸ್ಟಾರ್ ಆಲ್‌ರೌಂಡರ್‌ಗಳಿದ್ದಾರೆ. ವೇಗದ ಬೌಲಿಂಗ್ ವಿಭಾಗದಲ್ಲಿ ಅನ್ರಿಚ್ ನಾರ್ಟ್ಜೆ, ಹರ್ಷಿತ್ ರಾಣಾ ಇದ್ದರೆ, ಪೂರ್ಣ ಪ್ರಮಾಣದ ಸ್ಪಿನ್ನರ್ ಆಗಿ ವರುಣ್ ಚಕ್ರವರ್ತಿ ಇರಲಿದ್ದಾರೆ.
ಪಿಚ್ ರಿಪೋರ್ಟ್
Cherishing the calm before the matchday storm! ??#PlayBold #ನಮ್ಮRCB #IPL2025 pic.twitter.com/RPs4Of8u35
— Royal Challengers Bengaluru (@RCBTweets) March 21, 2025
ಕೋಲ್ಕತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದ ಪಿಚ್ ಬ್ಯಾಟಿಂಗ್ ಸ್ನೇಹಿಯಾಗಿದೆ. ಇಲ್ಲಿನ ಪಿಚ್ ಫ್ಲ್ಯಾಟ್ ಆಗಿದ್ದು, ಬೌನ್ಸ್ ಸಹ ಇರಲಿದೆ. ಈ ಹಿನ್ನೆಲೆ ದೊಡ್ಡ ಮೊತ್ತವನ್ನು ನಿರೀಕ್ಷೆ ಮಾಡಬಹುದು. ಪಂದ್ಯ ಸಾಗುತ್ತಿದ್ದಂತೆ ಪಿಚ್ ನಿಧಾನವಾಗಲಿದ್ದು, ಸ್ಪಿನ್ನರ್‌ಗಳಿಗೆ ನೆರವಾಗಲಿದೆ ಎಂದು ಹೇಳಲಾಗಿದೆ. ಈ ಕ್ರೀಡಾಂಗಣದಲ್ಲಿ ಒಟ್ಟು 93 ಐಪಿಎಲ್ ಪಂದ್ಯಗಳು ನಡೆದಿದ್ದು, ಮೊದಲು ಬ್ಯಾಟ್ ಮಾಡಿರುವ ತಂಡಗಳು 33ರಲ್ಲಿ ಗೆಲುವು ಪಡೆದಿದ್ದರೆ, ಚೇಸಿಂಗ್ ತಂಡಗಳು 55ರಲ್ಲಿ ಗೆಲುವು ಪಡೆದಿವೆ. ಹೀಗಾಗಿ ಎರಡನೇ ಇನ್ನಿಂಗ್ಸ್ ಆಡುವ ತಂಡಕ್ಕೆ ವಿಜಯಲಕ್ಷ್ಮಿ ಒಲಿಯುವ ಸಾಧ್ಯತೆ ಹೆಚ್ಚಿದ್ದು, ಟಾಸ್ ಇಲ್ಲಿ ಪ್ರಮುಖ ಪಾತ್ರ ನಿರ್ವಹಿಸಲಿದೆ.
ಹವಾಮಾನ ವರದಿ
ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತಾ ನೈಟ್ ರೈಡರ್ಸ್ ತಂಡಗಳ ನಡುವಿನ ಈ ಮಹತ್ವದ ಪಂದ್ಯಕ್ಕೆ ಮಳೆಯ ಭೀತಿ ಇದೆ. ಪಂದ್ಯಕ್ಕೂ ಮುನ್ನ ಇಲ್ಲಿ ಶೇ.65ರಷ್ಟು ಮಳೆ ಬೀಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಹೀಗಾಗಿ ಈ ಪಂದ್ಯಕ್ಕೆ ಮಳೆ ಬರದಿರಲಿ ಅಂತಾ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.
ಮುಖಾಮುಖಿ ದಾಖಲೆ
ಇದುವರೆಗೂ ಉಭಯ ತಂಡಗಳು ಐಪಿಎಲ್ ಟೂರ್ನಿಯಲ್ಲಿ ಒಟ್ಟು 34 ಬಾರಿ ಮುಖಾಮುಖಿಯಾಗಿದ್ದು, ಈ ಪೈಕಿ ಆರ್‌ಸಿಬಿ 20 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ, ಕೆಕೆಆರ್ 14 ತಂಡಗಳಲ್ಲಿ ಗೆಲುವು ಸಾಧಿಸಿದೆ.
ಇದನ್ನೂ ಓದಿ: 2025ರ ಐಪಿಎಲ್ ನಿಯಮಗಳಲ್ಲಿ ಬದಲಾವಣೆ; ಅಭಿಮಾನಿಗಳಿಗೆ ಸಿಗಲಿದೆ ಪೂರ್ಣ ಮನರಂಜನೆ!!
ಎರಡೂ ತಂಡಗಳ ಸಂಭಾವ್ಯ ಪ್ಲೇಯಿಂಗ್ XI
ರಾಯಲ್ ಚಾಲೆಂಜರ್ಸ್ ಬೆಂಗಳೂರು: ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್, ಲಿಯಾಮ್ ಲಿವಿಂಗ್‌ಸ್ಟೋನ್, ಟಿಮ್ ಡೇವಿಡ್, ಕೃಣಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್/ಸುಯಾಶ್ ಶರ್ಮಾ, ಭುವನೇಶ್ವರ್ ಕುಮಾರ್, ಜೋಶ್ ಹೇಝಲ್‌ವುಡ್, ಯಶ್ ದಯಾಳ್
ಕೋಲ್ಕತಾ ನೈಟ್ ರೈಡರ್ಸ್: ಅಜಿಂಕ್ಯ ರಹಾನೆ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಸುನೀಲ್ ನರೇನ್, ವೆಂಕಟೇಶ ಅಯ್ಯರ್, ಮನೀಷ್ ಪಾಂಡೆ, ರಿಂಕು ಸಿಂಗ್, ಆಂಡ್ರೆ ರಸೆಲ್, ಅನ್ರಿಚ್ ನಾರ್ಟ್ಜೆ, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ ಹಾಗೂ ವೈಭವ್ ಅರೋರಾ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.









