ನವದೆಹಲಿ: ಚೆನ್ನೈ ನ ಎಂ.ಎ.ಚಿದಂಬರಂ ಸ್ಟೇಡಿಯಂ ನಲ್ಲಿ ನಡೆಯುತ್ತಿರುವ ಐಪಿಎಲ್ 2021 ಟೂರ್ನಿಯ 10 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 20 ಓವರ್ ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ 204 ರನ್ ಗಳ ಬೃಹತ್ ಗುರಿಯನ್ನು ನೀಡಿದೆ.
ಇದನ್ನೂ ಓದಿ: ಭಾರತೀಯ ಅಭಿಮಾನಿಗಳು, ಕ್ರಿಕೆಟಿಗರು, ಎಲ್ಲರೂ ಈ ವಿದೇಶಿ ಬ್ಯಾಟ್ಸ್‌ಮನ್ ಫ್ಯಾನ್ಸ್
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಆರ್ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ ಅವರ ನಿರ್ಧಾರ ಆರಂಭದಲ್ಲಿ ತಪ್ಪಾಯಿತೇನೋ ಎನ್ನುವಂತಾಗಿತ್ತು.ತಂಡದ ಮೊತ್ತ 9 ರನ್ ಗಳಾಗುವಷ್ಟರಲ್ಲಿ ವಿರಾಟ್ ಕೊಹ್ಲಿ ಮತ್ತು ರಜತ್ ಪಾತಿದಾರ್ ವಿಕೆಟ್ ಒಪ್ಪಿಸುವ ಮೂಲಕ ಆರಂಭಿಕ ಆಘಾತವನ್ನು ಎದುರಿಸಿತು.
.@RCBTweets post 2⃣0⃣4⃣/4⃣ on the board against #KKR! @Gmaxi_32 7⃣8⃣@ABdeVilliers17 7⃣6⃣* @chakaravarthy29 2⃣/3⃣9⃣
The @KKRiders chase shall commence shortly! #VIVOIPL #RCBvKKR
Scorecard 👉 https://t.co/sgj6gqp6tS pic.twitter.com/zwrO8QbHxh
— IndianPremierLeague (@IPL) April 18, 2021
ಇದನ್ನೂ ಓದಿ: ಎಬಿಡಿ ವಿಲಿಯರ್ಸ್ ಪ್ರಕಾರ ಈ ವರ್ಷದ ಐಪಿಎಲ್ ಟೂರ್ನಿಯಲ್ಲಿ ಅತ್ಯುತ್ತಮ ತಂಡ ಯಾವುದು ಗೊತ್ತೇ ?
ಈ ಹಂತದಲ್ಲಿ ಬ್ಯಾಟಿಂಗ್ ಗೆ ಇಳಿದ ಗ್ಲೆನ್ ಮ್ಯಾಕ್ಸ್ ವೆಲ್ (Glenn Maxwell) ಕೇವಲ 49 ಎಸೆತಗಳಲ್ಲಿ 78 ರನ್ ಗಳನ್ನು ಸಿಡಿಸಿದರು, ಇದರಲ್ಲಿ ಮೂರು ಭರ್ಜರಿ ಸಿಕ್ಸರ್ ಹಾಗೂ ಒಂಬತ್ತು ಬೌಂಡರಿಗಳು ಸೇರಿದ್ದವು. ಇನ್ನೊಂದೆಡೆಗೆ ಕೊನೆಯಲ್ಲಿ ಸ್ಪೋಟಕ ಬ್ಯಾಟಿಂಗ್ ಮಾಡಿದ ಎಬಿ ಡಿ ವಿಲಿಯರ್ಸ್ (AB de Villiers) ಕೇವಲ 34 ಎಸೆತಗಳಲ್ಲಿ ಮೂರು ಸಿಕ್ಸರ್ ಹಾಗೂ 9 ಬೌಂಡರಿ ಗಳೊಂದಿಗೆ 76 ರನ್ ಗಳಿಸಿ ಅಜೇಯರಾಗಿ ಉಳಿಯುವ ಮೂಲಕ ತಂಡದ ಮೊತ್ತವನ್ನು 200 ಗಡಿ ದಾಟಲು ನೆರವಾದರು. ಇನ್ನೊಂದೆಡೆ ಕೈಲ್ ಜ್ಯಾಮಿಸನ್ ಕೂಡ ಒಂದು ಸಿಕ್ಸರ್ ಹಾಗೂ ಒಂದು ಬೌಂಡರಿ ಮೂಲಕ 11 ರನ್ ಗಳಿಸಿ ಅಜೇಯರಾಗಿ ಉಳಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.