ನವದೆಹಲಿ: ‘ಅಥ್ಲೆಟಿಕ್ಸ್ ನಲ್ಲಿ ಚಿನ್ನ ಗೆಲ್ಲುವುದು ನನ್ನ ಕನಸಾಗಿತ್ತು. 37 ವರ್ಷಗಳಿಂದ ಅಪೂರ್ಣವಾಗಿ ಉಳಿದಿದ್ದ ನನ್ನ ಕನಸನ್ನು ಪೂರ್ಣಗೊಳಿಸಿದ ನಿನಗೆ ಶುಭಾಶಯಗಳು. ಧನ್ಯವಾದಗಳು ಮಗನೇ’. ಹೀಗೆ ಹೇಳಿದ್ದು ಇಂಡಿಯನ್ ಗೋಲ್ಡನ್ ಗರ್ಲ್ ಖ್ಯಾತಿಯ ಪಿ.ಟಿ.ಉಷಾ. ಹೌದು, ಟೋಕಿಯೊ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಶನಿವಾರ 87.58 ಮೀ. ದೂರ ಜಾವೆಲಿನ್ ಎಸೆಯುವ ಮೂಲಕ ಭಾರತಕ್ಕೆ ಮೊದಲ ಚಿನ್ನದ ಪದಕ ತಂದುಕೊಟ್ಟ ನೀರಜ್ ಚೋಪ್ರಾ ಹೊಸ ಇತಿಹಾಸ ಬರೆದಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Breaking News: ಭಾರತಕ್ಕೆ ಮತ್ತೊಂದು ಪದಕ: ಕಂಚಿಗೆ ಮುತ್ತಿಕ್ಕಿದ ಬಜರಂಗ್ ಪೂನಿಯಾ


ಭಾರತಕ್ಕೆ ಅಥ್ಲೆಟಿಕ್ ನಲ್ಲಿ ಮೊದಲ ಚಿನ್ನದ ಪದಕ ಸಿಕ್ಕಂತಾಗಿದೆ. ಅಥ್ಲೆಟಿಕ್ ನ ವೈಯಕ್ತಿಕ ವಿಭಾಗದಲ್ಲಿ ಚಿನ್ನ ಗೆಲ್ಲುವ ಮೂಲಕ ನೀರಜ್ ಚೋಪ್ರಾ ಮಹತ್ವದ ಸಾಧನೆ ಮಾಡಿದ್ದಾರೆ. ಬಂಗಾರದ ಪದಕಕ್ಕೆ ಮುತ್ತಿಕ್ಕಿದ 23 ವರ್ಷದ ‘ಚಿನ್ನ’ದ ಹುಡುಗ ನೀರಜ್ ಚೋಪ್ರಾಗೆ ದೇಶಾದ್ಯಂತ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದೆ. ರಾಷ್ಟ್ರಪತಿ ರಾಮನಾಥ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ನೀರಜ್ ಚೋಪ್ರಾ ಸಾಧನೆಯನ್ನು ಕೊಂಡಾಡಿದ್ದಾರೆ. ಇಡೀ ದೇಶದಲ್ಲಿಯೇ ಸಂಭ್ರಮಾಚರಣೆ ನಡೆಯುತ್ತಿದೆ. ನೀರಜ್ ಚೋಪ್ರಾಗೆ ಅನೇಕ ರಾಜ್ಯ ಸರ್ಕಾರಗಳು ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಬಹುಮಾನ ಘೋಷಿಸಿದ್ದಾರೆ.


Tokyo Olympics 2020: ಗಾಲ್ಫ್ ನಲ್ಲಿ ಪದಕ ಜಸ್ಟ್ ಮಿಸ್, ಟೋಕಿಯೊದಲ್ಲಿ ಕನ್ನಡತಿಯ ಸಾಧನೆ


2008ರ ಬೀಜಿಂಗ್ ಒಲಿಂಪಿಕ್ಸ್‌ ನಲ್ಲಿ 10 ಮೀ. ಏರ್ ರೈಫಲ್ ಶೂಟಿಂಗ್ ನಲ್ಲಿ ಅಭಿನವ್ ಬಿಂದ್ರಾ ಚಿನ್ನದ ಪದಕ ಗೆಲ್ಲುವ ಮೂಲಕ ಒಲಿಂಪಿಕ್ಸ್‌ ವೈಯುಕ್ತಿಕ ವಿಭಾಗದಲ್ಲಿ ಸ್ವರ್ಣ ಗೆದ್ದ ಭಾರತದ ಮೊದಲ ಅಥ್ಲೀಟ್ ಎನ್ನುವ ದಾಖಲೆ ಬರೆದಿದ್ದರು. ಇದೀಗ ನೀರಜ್ ಚೋಪ್ರಾ ಕೂಡ ಆ ಸಾಧನೆ ಮಾಡುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಟ್ರಾಕ್ ಮತ್ತು ಫೀಲ್ಡ್ ಅಥ್ಲೀಟ್ ಒಬ್ಬ ಒಲಿಂಪಿಕ್ಸ್​ನಲ್ಲಿ ಚಿನ್ನ ಗೆಲ್ಲುವ ಕನಸು ನನಸಾದಂತಾಗಿದೆ. ಅತ್ಯಂತ ಸಂಭ್ರಮ ಮತ್ತು ಖುಷಿಯಿಂದ ಪಿ.ಟಿ.ಉಷಾ ಟ್ವೀಟ್ ಮಾಡಿ ನೀರಜ್ ಗೆ ಶುಭಾಶಯಗಳನ್ನು ತಿಳಿಸಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ