ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲು ಕಂಡಿದೆ. ಆದರೆ ಮುಂಬರುವ ಪಂದ್ಯಗಳಲ್ಲಿ ಗೆಲುವು ಸಾಧಿಸಲು ತಂಡ ಕಸರತ್ತು ನಡೆಸುತ್ತಿದೆ. ಇನ್ನು ಟೀಂ ಇಂಡಿಯಾ ವಿಶ್ವದ ಅತ್ಯುತ್ತಮ ಕ್ರಿಕೆಟ್ ತಂಡಗಳಲ್ಲಿ ಒಂದಾಗಿರೋದು ಎಲ್ಲರಿಗೂ ತಿಳಿದ ಸಂಗತಿ. ಆದರೆ 2022 ರಲ್ಲಿ ಈ ಆಟಗಾರನ ಅನುಪಸ್ಥಿತಿಯಿಂದ ತಂಡವು ದುರ್ಬಲವಾಗಿ ಕಾಣಿಸಿಕೊಳ್ಳುತ್ತಿದೆ. ಅಷ್ಟೇ ಅಲ್ಲದೆ ಈ ವರ್ಷ ಒಂದೇ ಒಂದು ಪಂದ್ಯವನ್ನು ಸಹ ಟೀಂ ಇಂಡಿಯಾ ಗೆದ್ದಿಲ್ಲ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಈ ಸೂಪರ್ ಹಿಟ್ ಯೋಜನೆಯಲ್ಲಿ 50 ಸಾವಿರ ಠೇವಣಿ ಇರಿಸಿ, 3300 ಪಿಂಚಣಿ ಪಡೆಯಿರಿ


ಈ ಸರಣಿಯಲ್ಲಿ ಟೀಂ ಇಂಡಿಯಾ ಬಲಿಷ್ಠ ಆಟಗಾರನನ್ನು ಕಳೆದುಕೊಂಡಿದೆ. 2022 ರಲ್ಲಿ, ಈ ಆಟಗಾರನಿಲ್ಲದೆ ಭಾರತ ತಂಡವು ಒಂದೇ ಒಂದು ಪಂದ್ಯವನ್ನು ಗೆಲ್ಲಲು ಸಾಧ್ಯವಾಗಲಿಲ್ಲ. ಈ ಆಟಗಾರ ಬೇರೆ ಯಾರೂ ಅಲ್ಲ, ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ. 2022ರಲ್ಲಿ ರೋಹಿತ್ ಶರ್ಮಾ ಇಲ್ಲದೇ ಎಲ್ಲಾ ಪಂದ್ಯಗಳಲ್ಲಿ ಸೋಲು ಕಂಡಿರುವ ಟೀಂ ಇಂಡಿಯಾ, ರೋಹಿತ್ ನಾಯಕತ್ವದಲ್ಲಿದ್ದಾಗ ಎಲ್ಲಾ ಪಂದ್ಯಗಳನ್ನು ಗೆದ್ದಿದೆ.


ದಾಖಲೆಗಳು ಹೇಳೋದೇನು? 
ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಈ ವರ್ಷ 11 ಪಂದ್ಯಗಳನ್ನು ಆಡಿದ್ದು, ಈ ಎಲ್ಲಾ ಪಂದ್ಯಗಳಲ್ಲಿ ತಂಡವು ಗೆದ್ದಿದೆ. ರೋಹಿತ್ ನಾಯಕತ್ವದಲ್ಲಿ ಟೀಂ ಇಂಡಿಯಾ ಎರಡು ಟೆಸ್ಟ್, 3 ಏಕದಿನ ಹಾಗೂ 6 ಟಿ20 ಪಂದ್ಯಗಳನ್ನು ಆಡಿದೆ. ರೋಹಿತ್ ಹೊರತುಪಡಿಸಿ ಉಳಿದ 7 ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಮತ್ತು ರಿಷಬ್ ಪಂತ್ ತಂಡವನ್ನು ಮುನ್ನಡೆಸಿದ್ದಾರೆ. ಈ ಎಲ್ಲಾ ಪಂದ್ಯಗಳಲ್ಲಿ ಟೀಂ ಇಂಡಿಯಾ ಸೋಲು ಕಂಡಿದೆ.


ಇದನ್ನೂ ಓದಿ: ದಪ್ಪ ಮೂಗಿನಿಂದ ನೀವು ತೊಂದರೆಗೊಳಗಾಗಿದ್ದೀರಾ? ಸರ್ಜರಿ ಇಲ್ಲದೆ ಈ ರೀತಿ ಶಾರ್ಪ್ ನೋಸ್ ಪಡೆಯಿರಿ


ರಿಷಬ್ ಪಂತ್‌ಗೆ ಪರೀಕ್ಷೆ: 
ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಟೀಂ ಇಂಡಿಯಾದ ನಾಯಕತ್ವವು ರಿಷಬ್ ಪಂತ್ ಕೈಯಲ್ಲಿದೆ. ಪಂತ್ ಮೊದಲ ಬಾರಿಗೆ ಟೀಮ್ ಇಂಡಿಯಾದ ನಾಯಕತ್ವವನ್ನು ವಹಿಸಿಕೊಳ್ಳುತ್ತಿದ್ದಾರೆ. ಜೊತೆಗೆ ನಾಯಕನಾಗಿ ಮೊದಲ ಗೆಲುವಿಗಾಗಿ ಕಾಯುತ್ತಿದ್ದಾರೆ. ಎರಡು ತಂಡಗಳ ನಡುವಿನ ಎರಡನೇ ಪಂದ್ಯ ಭಾನುವಾರ ಕಟಕ್‌ನಲ್ಲಿ ನಡೆಯಲಿದೆ. 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.