Rishabh Pant car Accident: ಭೀಕರ ಅಪಘಾತಕ್ಕೀಡಾಗಿ ಸುಟ್ಟು ಕರಕಲಾದ ರಿಷಬ್ ಪಂತ್ ಕಾರು: ಕ್ರಿಕೆಟಿಗನಿಗೆ ಗಂಭೀರ ಗಾಯ!

Rishabh Pant car Accident: ಮಂಜು ಕವಿದಿದ್ದ ಪರಿಣಾಮ ಸರಿಯಾಗಿ ರಸ್ತೆ ಕಾಣದಿರುವುದೇ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ. ರೂರ್ಕಿ, ಮಂಗಳೂರು ಕೊತ್ವಾಲಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ವರದಿಯ ಪ್ರಕಾರ ಮಂಜಿನಿಂದಾಗಿ ಅಪಘಾತ ಸಂಭವಿಸಿದೆ. ಅತಿವೇಗದಿಂದ ಡಿವೈಡರ್‌ಗೆ ಡಿಕ್ಕಿ ಹೊಡೆದಿದ್ದು, ಪಂತ್ ಗಂಭೀರವಾಗಿ ಗಾಯಗೊಂಡಿದ್ದಾರೆ.

Written by - Bhavishya Shetty | Last Updated : Dec 30, 2022, 09:47 AM IST
    • ರಿಷಬ್ ಪಂತ್ ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದಾರೆ
    • ಕಾರು ನಿಯಂತ್ರಣ ತಪ್ಪಿ ಮೊದಲು ಡಿವೈಡರ್‌ಗೆ ಡಿಕ್ಕಿ ಹೊಡೆದು ನಂತರ ಸುಟ್ಟು ಭಸ್ಮವಾಗಿದೆ
    • ಅಪಘಾತದಲ್ಲಿ ಪಂತ್ ಅವರ ತಲೆ ಮತ್ತು ಕಾಲಿಗೆ ಪೆಟ್ಟಾಗಿದೆ
Rishabh Pant car Accident: ಭೀಕರ ಅಪಘಾತಕ್ಕೀಡಾಗಿ ಸುಟ್ಟು ಕರಕಲಾದ ರಿಷಬ್ ಪಂತ್ ಕಾರು: ಕ್ರಿಕೆಟಿಗನಿಗೆ ಗಂಭೀರ ಗಾಯ! title=
rishab pant

Rishabh Pant car Accident: ಭಾರತ ಕ್ರಿಕೆಟ್ ತಂಡದ ಬ್ಯಾಟ್ಸ್‌ಮನ್ ರಿಷಬ್ ಪಂತ್ ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಪಂತ್ ದೆಹಲಿಯಿಂದ ರೂರ್ಕಿಯಲ್ಲಿರುವ ತನ್ನ ನಿವಾಸಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಅವರ ಕಾರು ಅಪಘಾತಕ್ಕೀಡಾಗಿದೆ. ಅಪಘಾತ ಎಷ್ಟು ಭೀಕರವಾಗಿತ್ತೆಂದರೆ ಕಾರು ನಿಯಂತ್ರಣ ತಪ್ಪಿ ಮೊದಲು ಡಿವೈಡರ್‌ಗೆ ಡಿಕ್ಕಿ ಹೊಡೆದು ನಂತರ ಸುಟ್ಟು ಭಸ್ಮವಾಗಿದೆ. ಈ ಅಪಘಾತದಲ್ಲಿ ಪಂತ್ ಅವರ ತಲೆ ಮತ್ತು ಕಾಲಿಗೆ ಪೆಟ್ಟಾಗಿದೆ.

ಇದನ್ನೂ ಓದಿ: ಹೊಸ ವರ್ಷಾಚರಣೆಗೆ ‘ನಮ್ಮ ಮೆಟ್ರೋ’ದಿಂದ ಗಿಫ್ಟ್: ರಾತ್ರಿ 2 ಗಂಟೆವರೆಗೆ ಅವಧಿ ವಿಸ್ತರಿಸಿದ BMRCL

ಅಪಘಾತದ ನಂತರ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ರಿಷಬ್ ಪಂತ್ ಅವರನ್ನು ಸದ್ಯ ಡೆಹ್ರಾಡೂನ್‌ನ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

 

ಮಂಜು ಕವಿದಿದ್ದ ಪರಿಣಾಮ ಸರಿಯಾಗಿ ರಸ್ತೆ ಕಾಣದಿರುವುದೇ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ. ರೂರ್ಕಿ, ಮಂಗಳೂರು ಕೊತ್ವಾಲಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ವರದಿಯ ಪ್ರಕಾರ ಮಂಜಿನಿಂದಾಗಿ ಅಪಘಾತ ಸಂಭವಿಸಿದೆ. ಅತಿವೇಗದಿಂದ ಡಿವೈಡರ್‌ಗೆ ಡಿಕ್ಕಿ ಹೊಡೆದಿದ್ದು, ಪಂತ್ ಗಂಭೀರವಾಗಿ ಗಾಯಗೊಂಡಿದ್ದಾರೆ.

ಇದನ್ನೂ ಓದಿ: ಹೊಸ ವರ್ಷಾಚರಣೆಗೆ ಮಂಗಳೂರಿನಲ್ಲಿ ಪ್ರತ್ಯೇಕ ನಿಯಮ: ಜಿಲ್ಲಾಡಳಿತದ ಮಾರ್ಗಸೂಚಿ ಹೀಗಿದೆ

ಸ್ಥಳದಲ್ಲಿದ್ದ ಜನರು ಪಂತ್ ಅವರನ್ನು ಕಾರಿನಿಂದ ಕೆಳಗಿಳಿಸಿ ನಂತರ 108 ಗೆ ಕರೆ ಮಾಡಿ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

 

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News