CSK ವಿರುದ್ಧ ಭರ್ಜರಿ ಬ್ಯಾಟಿಂಗ್: ಅಬ್ಬರದ ಅರ್ಧಶತಕ ಸಿಡಿಸಿದ ರಿಷಬ್ ಪಂತ್’ಗೆ ಸ್ಟೇಡಿಯಂನಲ್ಲಿ ಚಪ್ಪಾಳೆಯ ಗೌರವ

Rishabh Pant Fifty vs CSK: ರಿಷಬ್ ಪಂತ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಕೇವಲ 32 ಎಸೆತಗಳನ್ನು ಎದುರಿಸಿ 51 ರನ್‌’ಗಳ ಅದ್ಭುತ ಇನ್ನಿಂಗ್ಸ್ ಆಡಿದರು. ಇದರಲ್ಲಿ 4 ಬೌಂಡರಿ ಹಾಗೂ 3 ಸಿಕ್ಸರ್ ಸೇರಿವೆ.

Written by - Bhavishya Shetty | Last Updated : Mar 31, 2024, 09:57 PM IST
    • ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಬ್ ಪಂತ್ ಅದ್ಭುತ ಬ್ಯಾಟಿಂಗ್
    • ಅಪಘಾತದ ಬಳಿಕ ಮೊದಲ ಬಾರಿಗೆ ಕ್ರಿಕೆಟ್ ಪಂದ್ಯಾವಳಿಯನ್ನು ಆಡುತ್ತಿರುವ ರಿಷಬ್ ಪಂತ್
    • 32 ಎಸೆತಗಳನ್ನು ಎದುರಿಸಿ 51 ರನ್‌’ಗಳ ಅದ್ಭುತ ಇನ್ನಿಂಗ್ಸ್
CSK ವಿರುದ್ಧ ಭರ್ಜರಿ ಬ್ಯಾಟಿಂಗ್: ಅಬ್ಬರದ ಅರ್ಧಶತಕ ಸಿಡಿಸಿದ ರಿಷಬ್ ಪಂತ್’ಗೆ ಸ್ಟೇಡಿಯಂನಲ್ಲಿ ಚಪ್ಪಾಳೆಯ ಗೌರವ title=
rishab pant

Rishabh Pant Fifty vs CSK: IPL 2024ರ 13 ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಬ್ ಪಂತ್ ಅದ್ಭುತವಾಗಿ ಬ್ಯಾಟಿಂಗ್ ಮಾಡಿದ್ದಾರೆ. ಡಿಸೆಂಬರ್ 2022ರಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದ ಬಳಿಕ ಮೊದಲ ಬಾರಿಗೆ ಕ್ರಿಕೆಟ್ ಪಂದ್ಯಾವಳಿಯನ್ನು ಆಡುತ್ತಿರುವ ರಿಷಬ್ ಪಂತ್, ಈ ಪಂದ್ಯದಲ್ಲಿ ಅದ್ಭುತವಾಗಿ ಬ್ಯಾಟಿಂಗ್ ಮಾಡಿ ಅರ್ಧಶತಕ ಬಾರಿಸಿದ್ದಾರೆ.

ಇದನ್ನೂ ಓದಿ: DC Vs CSK : ರಿಷಬ್ ಪಂತ್ ಅರ್ಧಶತಕದ ಆಟ : 180 ರನ್ ಗಳ ಟಾರ್ಗೆಟ್ ನೀಡಿದ DC

ಈ ಪಂದ್ಯದಲ್ಲಿ 160ರ ಆಸುಪಾಸಿನ ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟಿಂಗ್ ಮಾಡಿದ ರಿಷಬ್ ಪಂತ್ ಅರ್ಧಶತಕ ದಾಖಲಿಸಿದ್ದಾರೆ.

ರಿಷಬ್ ಪಂತ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಕೇವಲ 32 ಎಸೆತಗಳನ್ನು ಎದುರಿಸಿ 51 ರನ್‌’ಗಳ ಅದ್ಭುತ ಇನ್ನಿಂಗ್ಸ್ ಆಡಿದರು. ಇದರಲ್ಲಿ 4 ಬೌಂಡರಿ ಹಾಗೂ 3 ಸಿಕ್ಸರ್ ಸೇರಿವೆ. ವಿಶೇಷವೆಂದರೆ ಪಂತ್ ಈ ಇನ್ನಿಂಗ್ಸ್‌’ನ ಮೊದಲ 23 ರನ್‌’ಗಳನ್ನು 23 ಎಸೆತಗಳಲ್ಲಿ ಕಲೆಹಾಕಿದ್ದರು. ಇದಾದ ಬಳಿಕ ಅದ್ಭುತ ಬ್ಯಾಟಿಂಗ್ ಮಾಡಿದ ಅವರು, ಮುಂದಿನ 9 ಎಸೆತಗಳಲ್ಲಿ 28 ರನ್ ಗಳಿಸಿ ಅರ್ಧಶತಕ ಪೂರೈಸಿದರು.

ಇದನ್ನೂ ಓದಿ: ರಿಂಕು ಸಿಂಗ್ ಜೊತೆ ಶಾರುಖ್ ಸಿನಿಮಾದ ಹಾಡು ಹಾಡಿದ ರಸೆಲ್: ಎಷ್ಟೊಂದು ಸೊಗಸಾದ ವಿಡಿಯೋ ವೈರಲ್

ಈ ಪಂದ್ಯದಲ್ಲಿ ರಿಷಬ್ ಪಂತ್ 50 ರನ್ ಪೂರೈಸಿದ ತಕ್ಷಣ ಕ್ರೀಡಾಂಗಣದಲ್ಲಿ ಕುಳಿತಿದ್ದ ಪ್ರತಿಯೊಬ್ಬ ಪ್ರೇಕ್ಷಕರು ಎದ್ದು ನಿಂತು ಚಪ್ಪಾಳೆ ತಟ್ಟಿದ್ದು ಕಂಡುಬಂತು. ಅಭಿಮಾನಿಗಳು ಮಾತ್ರವಲ್ಲ, ಡಗೌಟ್‌’ನಲ್ಲಿ ಕುಳಿತಿದ್ದ ಸಹ ಆಟಗಾರರು ಮತ್ತು ಸಹಾಯಕ ಸಿಬ್ಬಂದಿ ಕೂಡ ಅವರ ಇನಿಂಗ್ಸ್‌’ಗೆ ನಿಂತು ಚಪ್ಪಾಳೆ ತಟ್ಟಿ ವಿಶೇಷ ಗೌರವ ಸಲ್ಲಿಸಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News