Rishabh Pant health update : ಭಾರತೀಯ ಕ್ರಿಕೆಟ್ ತಂಡದ ಭವಿಷ್ಯದ ಹಾಗೂ ಭರವಸೆಯ ಆಟಗಾರ ರಿಷಬ್ ಪಂತ್ ಇತ್ತೀಚೆಗಷ್ಟೇ ದೊಡ್ಡ ಕಾರು ಅಪಘಾತಕ್ಕೀಡಾಗಿದ್ದರು. ಗಂಭೀರ ಗಾಯಗಳೊಂದಿಗೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದಲ್ಲಿ ಅವರ ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ನಿರಂತರ ಚಿಕಿತ್ಸೆ ಪಡೆಯುತ್ತಿದ್ದ ರಿಷಬ್ ಪಂತ್ ಅಂತಿಮ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದು, ಇದೀಗ ಆರೋಗ್ಯವಾಗಿದ್ದಾರೆ. ಈ ಬಗ್ಗೆ ತಮ್ಮ ಟ್ವಿಟರ್ ಪೇಜ್‌ನಲ್ಲಿಯೂ ಮಾಹಿತಿ ನೀಡಿದ್ದಾರೆ.
ಸದ್ಯ ಆಸ್ಪತ್ರೆಯಲ್ಲಿರುವ ರಿಷಬ್ ಪಂತ್ 2 ವಾರಗಳಲ್ಲಿ ಆಸ್ಪತ್ರೆಯಿಂದ ಸಂಪೂರ್ಣ ಡಿಸ್ಚಾರ್ಜ್ ಆಗುವ ನಿರೀಕ್ಷೆ ಇದೆ. ಅವರನ್ನು ಮುಂಬೈನ ಕೋಕಿಲಾಪೆನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಲ ಮೊಣಕಾಲಿನ ಅಸ್ಥಿರಜ್ಜು ಮೇಲೆ ಎರಡು ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ರಿಷಭ್ ಪಂತ್‌ಗೆ ಶಸ್ತ್ರಚಿಕಿತ್ಸೆ ನಡೆಸಿರುವ ವೈದ್ಯರು ಶೀಘ್ರದಲ್ಲೇ ಅವರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗುವ ಭರವಸೆ ವ್ಯಕ್ತಪಡಿಸಿದ್ದಾರೆ.
I may not have been able to thank everyone individually, but I must acknowledge these two heroes who helped me during my accident and ensured I got to the hospital safely. Rajat Kumar & Nishu Kumar, Thank you. I'll be forever grateful and indebted 🙏♥️ pic.twitter.com/iUcg2tazIS
— Rishabh Pant (@RishabhPant17) January 16, 2023
ಇದನ್ನೂ ಓದಿ: 2023 ರ ಐಪಿಎಲ್ ಗೆ ಮರಳಲಿದ್ದಾರೆ ರಿಷಬ್ ಪಂತ್ : ಕೋಚ್ ರಿಕಿ ಪಾಂಟಿಂಗ್
ಇದೇ ವೇಳೆ ರಿಷಬ್ ಪಂತ್ ಇನ್ನೆರಡು ವಾರಗಳಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರೂ ಭಾರತ ತಂಡಕ್ಕೆ ವಾಪಸಾಗುವುದು ಯಾವಾಗ ಎಂಬ ಪ್ರಶ್ನೆ ಎದ್ದಿದೆ. ವೈದ್ಯರ ಸಲಹೆಯಂತೆ ಎಲ್ಲವೂ ಸುಸೂತ್ರವಾಗಿ ನಡೆದರೆ ಇನ್ನೆರಡು ತಿಂಗಳಲ್ಲಿ ರಿಷಬ್ ಪಂತ್ ಸಹಜ ಸ್ಥಿತಿಗೆ ಮರಳಲಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ. ಆದರೆ ಈ ವರ್ಷದ 50 ಓವರ್‌ಗಳ ವಿಶ್ವಕಪ್‌ನೊಂದಿಗೆ ರಿಷಬ್ ಪಂತ್ ಅದರಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆಯೇ? ಎಂಬ ಸಂದೇಹವಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.