ಟಿ20 ವಿಶ್ವಕಪ್‌ನಲ್ಲಿ ರೋಹಿತ್ - ಕೊಹ್ಲಿ ಇರಲೇಬೇಕು, ಟೀಂ ಇಂಡಿಯಾ ಬಗ್ಗೆ ಈ ಅನುಭವಿ ಆಟಗಾರ ಹೇಳಿದ್ದೇನು?

T20 World Cup: ಈ ವರ್ಷದ ಜೂನ್‌ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ನ ವೇಳಾಪಟ್ಟಿಯನ್ನು ಐಸಿಸಿ ಪ್ರಕಟಿಸಿದೆ. 

Written by - Chetana Devarmani | Last Updated : Jan 6, 2024, 07:26 AM IST
  • ಟಿ20 ವಿಶ್ವಕಪ್‌ನ ವೇಳಾಪಟ್ಟಿ ಪ್ರಕಟ
  • ಟಿ20 ವಿಶ್ವಕಪ್‌ನಲ್ಲಿ ರೋಹಿತ್ - ಕೊಹ್ಲಿ ಇರಲೇಬೇಕು
  • ಟೀಂ ಇಂಡಿಯಾ ಬಗ್ಗೆ ಈ ಅನುಭವಿ ಆಟಗಾರ ಹೇಳಿದ್ದೇನು?
ಟಿ20 ವಿಶ್ವಕಪ್‌ನಲ್ಲಿ ರೋಹಿತ್ - ಕೊಹ್ಲಿ ಇರಲೇಬೇಕು, ಟೀಂ ಇಂಡಿಯಾ ಬಗ್ಗೆ ಈ ಅನುಭವಿ ಆಟಗಾರ ಹೇಳಿದ್ದೇನು?   title=

T20 World Cup: ಐಸಿಸಿ ಟಿ20 ವಿಶ್ವಕಪ್ 2024ರ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ಟೂರ್ನಿ ಜೂನ್ 1 ರಿಂದ ಆರಂಭವಾಗಲಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ನಡೆಯಲಿದೆ. 

ಲೆಗ್ ಸ್ಪಿನ್ನರ್ ಪಿಯೂಷ್ ಚಾವ್ಲಾ ಅವರು ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಇಬ್ಬರೂ T20 ವಿಶ್ವಕಪ್ ತಂಡದ ಭಾಗಬೇಕು ಎಂದಿದ್ದಾರೆ. ಅಮೆರಿಕ ಮತ್ತು ವೆಸ್ಟ್ ಇಂಡೀಸ್‌ನಲ್ಲಿ ನಡೆಯುವ ಟೂರ್ನಿಯಲ್ಲಿ ಭಾರತಕ್ಕೆ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅಗತ್ಯವಿದೆ ಎಂದು ಹೇಳಿದ್ದಾರೆ. ದೊಡ್ಡ ಪಂದ್ಯಗಳಲ್ಲಿ ಒತ್ತಡವನ್ನು ನಿಭಾಯಿಸಲು ತಿಳಿದಿರುವ ಕೊಹ್ಲಿ ಮತ್ತು ರೋಹಿತ್ ಅವರಂತಹ ಅನುಭವಿ ಆಟಗಾರರನ್ನು ಹೊರಗಿಡಬಾರದು ಎಂದಿದ್ದಾರೆ.

ಇದನ್ನೂ ಓದಿ: T20 World Cup 2024 ವೇಳಾಪಟ್ಟಿ ಬಿಡುಗಡೆ, ಭಾರತ-ಪಾಕ್ ಪಂದ್ಯದ ದಿನಾಂಕ ಪ್ರಕಟ! 

ಕೊಹ್ಲಿ ಮತ್ತು ರೋಹಿತ್ ವಿಭಿನ್ನವಾಗಿ ಯೋಚಿಸುವರು. ಒಮ್ಮೆ ಮೈದಾನಕ್ಕೆ ಬಂದರೆ, ಹಿಂದೆ ಏನಾಯಿತು ಎಂದು ನೀವು ಯೋಚಿಸುವುದಿಲ್ಲ. ಆ ಪರಿಸ್ಥಿತಿಗೆ ತಕ್ಕಂತೆ ಆಡುತ್ತಾರೆ. ಕಷ್ಟದ ಸಂದರ್ಭಗಳಲ್ಲಿ ಅನುಭವವು ಮುಖ್ಯವಾಗಿರುತ್ತದೆ. ಇಬ್ಬರೂ ಭಾರತದ ಅನುಭವಿ ಆಟಗಾರರು ಟಿ20 ವಿಶ್ವಕಪ್‌ ತಂಡದಲ್ಲಿ ಇರಬೇಕು ಎಂದು ಚಾವ್ಲ ಹೇಳಿದ್ದಾರೆ. 

ಭಾರತ ಜನವರಿ 11 ರಿಂದ ಅಫ್ಘಾನಿಸ್ತಾನ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡಬೇಕಾಗಿದೆ. ಇದಕ್ಕಾಗಿ ಭಾರತ ತಂಡವನ್ನು ಪ್ರಕಟಿಸಿಲ್ಲ. ಇದರಲ್ಲಿ ಕೊಹ್ಲಿ ಮತ್ತು ರೋಹಿತ್‌ ಸ್ಥಾನ ಪಡೆಯಬಹುದು ಎನ್ನಲಾಗಿದೆ. 

ಭಾರತದ T20 ವಿಶ್ವಕಪ್ ಪಂದ್ಯಗಳು

ಭಾರತವು 9 ಜೂನ್ 2024 ರಂದು ನ್ಯೂಯಾರ್ಕ್‌ನಲ್ಲಿ ಪಾಕಿಸ್ತಾನವನ್ನು ಎದುರಿಸಲಿದೆ. ಅನುಭವಿ ಆಟಗಾರ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ 2007 ರಲ್ಲಿ ಪಾಕಿಸ್ತಾನವನ್ನು ಸೋಲಿಸುವ ಮೂಲಕ ಟೀಮ್ ಇಂಡಿಯಾ ಮೊದಲ ಬಾರಿಗೆ T20 ವಿಶ್ವಕಪ್ ಗೆದ್ದಿತು. ಅಂದಿನಿಂದ ಇಲ್ಲಿಯವರೆಗೆ ಭಾರತಕ್ಕೆ ಈ ಟೂರ್ನಿಯನ್ನು ಗೆಲ್ಲಲು ಸಾಧ್ಯವಾಗಿಲ್ಲ. ಭಾರತ ಈ ಟೂರ್ನಿಯ ಆರಂಭಿಕ ಪಂದ್ಯವನ್ನು ಜೂನ್ 5 ರಂದು ಐರ್ಲೆಂಡ್ ವಿರುದ್ಧ ಆಡಲಿದೆ. 

ಇದನ್ನೂ ಓದಿ: W,0,W,0,W,0... ಈ ಬೌಲರ್ ಬಿರುಗಾಳಿಗೆ ಮಂಕಾದ ಎದುರಾಳಿ ತಂಡ ! 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News