“ಇದು ಟೀಂ ಇಂಡಿಯಾ ಅಲ್ಲ.. ಮುಂಬೈ ತಂಡ”! ಈ ಕ್ರಿಕೆಟಿಗನಿಗೆ ಅವಕಾಶ ನೀಡದಕ್ಕೆ ಟ್ರೋಲ್’ಗೆ ಗುರಿಯಾದ ರೋಹಿತ್
Team India Troll: ಗುರುವಾರ ಬ್ರಿಡ್ಜ್ ಟೌನ್ ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ ಅವರಿಗೆ ಪ್ಲೇಯಿಂಗ್ 11 ನಲ್ಲಿ ಸ್ಥಾನ ನೀಡಲಿಲ್ಲ.
Team India Troll: ಟೀಂ ಇಂಡಿಯಾ, ನಾಯಕ ರೋಹಿತ್ ಶರ್ಮಾ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮತ್ತು ಆಯ್ಕೆದಾರರನ್ನು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರವಾಗಿ ಟ್ರೋಲ್ ಮಾಡಲಾಗುತ್ತಿದೆ. ಟೀಂ ಇಂಡಿಯಾದ ನಿರ್ವಹಣೆಯ ಈ ಒಂದು ಹೆಜ್ಜೆಯಿಂದ ಮತ್ತು ರೋಹಿತ್ ಶರ್ಮಾ ಅವರ ನಡೆಯಿಂದ ಸಮಸ್ಯೆ ಕಾಣಿಸಿಕೊಂಡಿದೆ.
ಇದನ್ನೂ ಓದಿ: World Cup 2023: ಇಂಡೋ-ಪಾಕ್ ಪಂದ್ಯದ ಪ್ರತಿ 10 ಸೆಕೆಂಡ್ ಜಾಹಿರಾತಿಗೆ ರೂ.30 ಲಕ್ಷ ಫಿಕ್ಸ್…!!
ಗುರುವಾರ ಬ್ರಿಡ್ಜ್ ಟೌನ್ ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ ಅವರಿಗೆ ಪ್ಲೇಯಿಂಗ್ 11 ನಲ್ಲಿ ಸ್ಥಾನ ನೀಡಲಿಲ್ಲ. ಇದಲ್ಲದೇ ರೋಹಿತ್ ಶರ್ಮಾ ಅವರು ಇಶಾನ್ ಕಿಶನ್ ಅವರನ್ನು ಟೀಂ ಇಂಡಿಯಾದ ಪ್ಲೇಯಿಂಗ್ ಇಲೆವೆನ್‌ನಲ್ಲಿ ವಿಕೆಟ್ ಕೀಪರ್ ಕಂ ಬ್ಯಾಟ್ಸ್‌ಮನ್ ಆಗಿ ಸೇರಿಸಿಕೊಳ್ಳುವುದರ ಜೊತೆಗೆ ಸೂರ್ಯಕುಮಾರ್ ಯಾದವ್‌ಗೆ ಅವಕಾಶ ನೀಡಿದರು. ರೋಹಿತ್ ಶರ್ಮಾ ಅವರ ಈ ನಿರ್ಧಾರ ಬೆಂಕಿಗೆ ತುಪ್ಪ ಸುರಿದಂತೆ ಆಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್:
ಸೋಷಿಯಲ್ ಮೀಡಿಯಾದಲ್ಲಿ, ಅಭಿಮಾನಿಗಳು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರನ್ನು ಕೆಟ್ಟದಾಗಿ ಟ್ರೋಲ್ ಮಾಡಿದ್ದಾರೆ. ಯಾವ ತಪ್ಪಿನಿಂದಾಗಿ ಸಂಜು ಸ್ಯಾಮ್ಸನ್ ಗೆ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್ ನಲ್ಲಿ ಅವಕಾಶ ಸಿಗುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ. ಈ ಸಂದರ್ಭದಲ್ಲಿ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಆಯ್ಕೆ ಸಮಿತಿಯಲ್ಲಿ ಮುಂಬೈ ಲಾಬಿಯ ಪ್ರಾಬಲ್ಯದ ಬಗ್ಗೆ ಅಭಿಮಾನಿಗಳು ಕಿಡಿಕಾರಿದ್ದಾರೆ.
10 ವರ್ಷಗಳ ಬಳಿಕ Team India ಏಕದಿನದಲ್ಲಿ ಅವಕಾಶ ಪಡೆದ ಕೊಹ್ಲಿ ಗೆಳೆಯ! ಇನ್ಮುಂದೆ ಕಾರುಬಾರು ಶುರು…
ಬಿಸಿಸಿಐ ಕೆಲವು ದಿನಗಳಿಂದ ಸಂಜು ಸ್ಯಾಮ್ಸನ್ ಅವರನ್ನು ನಿರ್ಲಕ್ಷಿಸುತ್ತಿದೆ. ಅಷ್ಟೇ ಅಲ್ಲದೆ, ಬಿಸಿಸಿಐ ಕೈಯಲ್ಲಿ ಸಂಜು ಸ್ಯಾಮ್ಸನ್ ಕೈಗೊಂಬೆಯಂತೆ ಕಾಣುತ್ತಿದ್ದಾರೆ. ಸಂಜು ಸ್ಯಾಮ್ಸನ್ 2015 ರಲ್ಲಿ ಭಾರತಕ್ಕಾಗಿ ತಮ್ಮ ಅಂತರರಾಷ್ಟ್ರೀಯ ವೃತ್ತಿಜೀವನವನ್ನು ಪ್ರಾರಂಭಿಸಿದ್ದಾರೆ. ಅಂದಿನಿಂದ ಇಲ್ಲಿಯವರೆಗೆ ಟೀಮ್ ಇಂಡಿಯಾದಲ್ಲಿ ಸರಿಯಾದ ಸ್ಥಾನ ಸಿಗದೆ ಪರದಾಡುತ್ತಿದ್ದಾರೆ. ಸಂಜು ಸ್ಯಾಮ್ಸನ್ ಕಳೆದ ಸುಮಾರು 8 ವರ್ಷಗಳಿಂದ ಭಾರತಕ್ಕಾಗಿ ಕೇವಲ 28 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ. ಸ್ಫೋಟಕ ಬ್ಯಾಟ್ಸ್‌ಮನ್ ಆಗಿದ್ದು, ಜತೆಗೆ ಅತ್ಯುತ್ತಮ ವಿಕೆಟ್ ಕೀಪರ್ ಹೌದು, ಅಷ್ಟೇ ಅಲ್ಲದೆ, ದೆ, ಫೀಲ್ಡಿಂಗ್ ನಲ್ಲಿಯೂ ಅವರು ಸಾಕಷ್ಟು ಕೊಡುಗೆ ನೀಡಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ