Rohit Sharma: ಐಪಿಎಲ್ 2024ರ 43 ನೇ ಪಂದ್ಯದಲ್ಲಿ ದೆಹಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ಸೆಣಸಾಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ನಿಗದಿತ 20 ಓವರ್’ಗಳಲ್ಲಿ 257 ರನ್ಗಳ ಬೃಹತ್ ಮೊತ್ತ ಕಲೆ ಹಾಕಿತು.
ಜೇಕ್ ಫ್ರೇಸರ್ ಮೆಕ್ ಗುರ್ಕ್ ಸ್ಫೋಟಕ ಹೊಡೆತಗಳ ಮೂಲಕ 27 ಎಸೆತಗಳಲ್ಲಿ 84 ರನ್’ಗಳ ತ್ವರಿತ ಇನ್ನಿಂಗ್ಸ್ ಆಡಿದರು. ಅಂದಹಾಗೆ ಗುರಿ ಬೆನ್ನಟ್ಟುವ ವೇಳೆ ಆರಂಭಿಕರಾದ ರೋಹಿತ್ ಶರ್ಮಾ ಮತ್ತು ಇಶಾನ್ ಕಿಶನ್ ಅಲ್ಪಮೊತ್ತಕ್ಕೆ ಔಟ್ ಆದರು.
ಇಶಾನ್ ಕಿಶನ್ 20 ರನ್ ಗಳಿಸಿದರೆ ರೋಹಿತ್ 8 ರನ್ ಗಳಿಸಲಷ್ಟೇ ಶಕ್ತರಾದರು. ಈ 8 ರನ್’ಗಳ ಅವಧಿಯಲ್ಲಿ ರೋಹಿತ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಶ್ರೇಷ್ಠ ದಾಖಲೆಯನ್ನೂ ಮಾಡಿದ್ದಾರೆ. ಅಂದಹಾಗೆ ಕೊಹ್ಲಿಯನ್ನು ಹಿಂದಿಕ್ಕಿ ಈ ದಾಖಲೆಯನ್ನು ತಮ್ಮ ಹೆಸರಿನಲ್ಲಿ ಬರೆದುಕೊಂಡಿದ್ದಾರೆ.
ರೋಹಿತ್ ಶರ್ಮಾ 5 ರನ್ ಗಳಿಸುತ್ತಿದ್ದಂತೆ, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಐಪಿಎಲ್’ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡರು. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಅವರನ್ನು ಹಿಂದಿಕ್ಕಿ ರೋಹಿತ್ ಈ ದಾಖಲೆಯನ್ನು ತಮ್ಮ ಹೆಸರಿನಲ್ಲಿ ಮಾಡಿಕೊಂಡಿದ್ದಾರೆ.
ವಿರಾಟ್ ಕೊಹ್ಲಿ ಐಪಿಎಲ್’ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 1030 ರನ್ ಗಳಿಸಿದ್ದಾರೆ. ಇದೀಗ ಈ ತಂಡದ ವಿರುದ್ಧ ರೋಹಿತ್ ಹೆಸರಿನಲ್ಲಿ 1034 ರನ್ ದಾಖಲಾಗಿವೆ.
ಇದನ್ನೂ ಓದಿ: ಪೆನ್ ಡ್ರೈವ್ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿ: ಕುಶಾಲಾ ಸ್ವಾಮಿ
ದೆಹಲಿ ಕ್ಯಾಪಿಟಲ್ಸ್ ವಿರುದ್ಧ ಐಪಿಎಲ್’ನಲ್ಲಿ 1000+ ರನ್ ಗಳಿಸುವಲ್ಲಿ ಯಶಸ್ವಿಯಾದ ಇಬ್ಬರು ಬ್ಯಾಟ್ಸ್ಮನ್’ಗಳೆಂದರೆ ಅದು ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ. ರಿಷಬ್ ಪಂತ್ ನಾಯಕತ್ವದ ತಂಡದ ವಿರುದ್ಧ ಐಪಿಎಲ್’ನಲ್ಲಿ 34 ಪಂದ್ಯಗಳಲ್ಲಿ ರೋಹಿತ್ ಆರು ಅರ್ಧಶತಕಗಳನ್ನು ಗಳಿಸಿದ್ದಾರೆ. ರೋಹಿತ್ ಮತ್ತು ಕೊಹ್ಲಿ ನಂತರ ಅಜಿಂಕ್ಯ ರಹಾನೆ ಮೂರನೇ ಸ್ಥಾನದಲ್ಲಿದ್ದಾರೆ. ಅವರು 858 ರನ್ ಗಳಿಸಿದ್ದಾರೆ. ರಾಬಿನ್ ಉತ್ತಪ್ಪ 740 ರನ್ ಗಳಿಸಿ ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಇನ್ನು ಧೋನಿ 5ನೇ ಸ್ಥಾನದಲ್ಲಿದ್ದು, 709 ರನ್ ಗಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.