IND vs WI, Rohit Sharma: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌’ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಪೋರ್ಟ್ ಆಫ್ ಸ್ಪೇನ್‌’ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನ, ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಶ್ರೀಲಂಕಾ ಬ್ಯಾಟ್ಸ್‌ಮನ್ ಮಹೇಲಾ ಜಯವರ್ಧನೆ ಅವರ ಟೆಸ್ಟ್ ಕ್ರಿಕೆಟ್‌’ನಲ್ಲಿ ದೊಡ್ಡ ವಿಶ್ವ ದಾಖಲೆಯನ್ನು ಮುರಿದಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಭಾರತ-ಪಾಕ್ ಪಂದ್ಯದಲ್ಲಿ ಥರ್ಡ್ ಅಂಪೈರ್ ವೈಫಲ್ಯ! ಫ್ಯಾನ್ಸ್ ಆಕ್ರೋಶಕ್ಕೆ ಕಾರಣವಾಯ್ತು ಆ ಒಂದು ಎಸೆತ


ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್‌’ನಲ್ಲಿ ರೋಹಿತ್ ಶರ್ಮಾ 44 ಎಸೆತಗಳಲ್ಲಿ 5 ಬೌಂಡರಿ ಮತ್ತು 3 ಸಿಕ್ಸರ್‌’ಗಳನ್ನು ಒಳಗೊಂಡಂತೆ 57 ರನ್ ಗಳಿಸಿದರು. ಈ ಸಂದರ್ಭದಲ್ಲಿ ಕೇವಲ 35 ಎಸೆತಗಳಲ್ಲಿ ಅರ್ಧಶತಕ ಕಲೆಹಾಕಿದ್ದಾರೆ.


ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್‌’ನಲ್ಲಿ ರೋಹಿತ್ ಶರ್ಮಾ 57 ರನ್ ಗಳಿಸುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಟೆಸ್ಟ್ ಕ್ರಿಕೆಟ್‌’ನಲ್ಲಿ ಸತತ 30 ಇನ್ನಿಂಗ್ಸ್‌’ಗಳಲ್ಲಿ ಎರಡಂಕಿ ದಾಟಿದ್ದಾರೆ. ಈ ಸಾಧನೆ ಮಾಡಿದ ವಿಶ್ವದ ಮೊದಲ ಮತ್ತು ಏಕೈಕ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಹಿಂದೆ ಈ ವಿಶ್ವ ದಾಖಲೆ ಶ್ರೀಲಂಕಾದ ಹಿರಿಯ ಬ್ಯಾಟ್ಸ್‌ಮನ್ ಮಹೇಲಾ ಜಯವರ್ಧನೆ ಹೆಸರಿನಲ್ಲಿತ್ತು. ಮಹೇಲಾ ಜಯವರ್ಧನೆ ಸತತ 29ನೇ ಇನ್ನಿಂಗ್ಸ್‌’ನಲ್ಲಿ ಟೆಸ್ಟ್ ಕ್ರಿಕೆಟ್‌’ನಲ್ಲಿ ಎರಡಂಕಿ ದಾಟಿದ್ದರು. ಮಹೇಲಾ ಜಯವರ್ಧನೆ ಅವರ ಈ ದೊಡ್ಡ ವಿಶ್ವ ದಾಖಲೆಯನ್ನು ರೋಹಿತ್ ಶರ್ಮಾ ಈಗ ಮುರಿದಿದ್ದಾರೆ.


ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌’ನಲ್ಲಿ ಸತತ 30 ಇನ್ನಿಂಗ್ಸ್‌’ಗಳಲ್ಲಿ ಎರಡಂಕಿ ದಾಟಿದ್ದಾರೆ ಮತ್ತು ಇದುವರೆಗೆ ಯಾವುದೇ ಬ್ಯಾಟ್ಸ್‌ಮನ್‌ಗೆ ಹಾಗೆ ಮಾಡಲು ಸಾಧ್ಯವಾಗಿಲ್ಲ. ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ರೋಹಿತ್ ಶರ್ಮಾ 57 ರನ್ ಗಳಿಸಿದರು ಮತ್ತು ಇದು ಅವರ ಟೆಸ್ಟ್ ವೃತ್ತಿಜೀವನದ ವೇಗದ ಅರ್ಧಶತಕವಾಗಿದೆ. ಇದಕ್ಕೂ ಮುನ್ನ 2021ರಲ್ಲಿ ಇಂಗ್ಲೆಂಡ್ ವಿರುದ್ಧ ಚೆನ್ನೈ ಟೆಸ್ಟ್‌ನಲ್ಲಿ ರೋಹಿತ್ 47 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ಇದೀಗ ಆ ದಾಖಲೆಯನ್ನು ರೋಹಿತ್ ಮುರಿದಿದ್ದಾರೆ.


ಇದನ್ನೂ ಓದಿ: 1 ಶತಕಕ್ಕೆ 7 ವಿಶ್ವದಾಖಲೆಗಳು ಉಡೀಸ್..! ‘ಕಿಂಗ್’ ಕೊಹ್ಲಿ ಬತ್ತಳಿಕೆ ಸೇರಿದ ಸಚಿನ್, ಜಾಕ್ವೆಸ್ ಕಾಲಿಸ್’ರ ಈ ದಾಖಲೆ


ಟೆಸ್ಟ್ ಕ್ರಿಕೆಟ್‌ನಲ್ಲಿ ಆರಂಭಿಕರಾದ ರೋಹಿತ್ ಶರ್ಮಾ ಸರಾಸರಿ 53.54. ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಕ್ರಿಕೆಟ್ ಟೆಸ್ಟ್ ನ ನಾಲ್ಕನೇ ದಿನವಾದ ಇಂದು ಭಾರತ ಎರಡು ವಿಕೆಟ್ ನಷ್ಟಕ್ಕೆ 181 ರನ್ ಗಳಿಸಿ ಎರಡನೇ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿದ್ದು, ಆತಿಥೇಯರಿಗೆ 365 ರನ್ ಗಳ ಗುರಿ ನೀಡಿದೆ. ನಾಯಕ ರೋಹಿತ್ ಶರ್ಮಾ 57 ರನ್ ಗಳಿಸಿದರೆ, ಇಶಾನ್ ಕಿಶನ್ 52 ರನ್ ಗಳಿಸಿದರು. ಇದಕ್ಕೂ ಮುನ್ನ ಭಾರತ ನೀಡಿದ 438 ರನ್‌ಗಳಿಗೆ ಉತ್ತರವಾಗಿ ವೆಸ್ಟ್ ಇಂಡೀಸ್ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 255 ರನ್ ಗಳಿಸಲಷ್ಟೇ ಶಕ್ತವಾಗಿ 183 ರನ್‌ಗಳಿಂದ ಹಿನ್ನಡೆ ಅನುಭವಿಸಿತ್ತು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.