IND vs ENG Playing 11: ಟಿ20 ವಿಶ್ವಕಪ್‌ 2024 ರ ಎರಡನೇ ಸೆಮಿಫೈನಲ್ ಪಂದ್ಯ ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯಲಿದೆ. ಎರಡೂ ತಂಡಗಳು ಜೂನ್ 27 ರಂದು ಗಯಾನಾದಲ್ಲಿ ಮುಖಾಮುಖಿಯಾಗಲಿವೆ. ಟೀಮ್ ಇಂಡಿಯಾ‌ ಮತ್ತು ಇಂಗ್ಲೆಂಡ್ ಎರಡೂ ತಂಡಗಳಿ ಸಾಕಷ್ಟು ಬಲಶಾಲಿಯಾಗಿವೆ. 2022ರಲ್ಲಿ ಇಂಗ್ಲೆಂಡ್ ಸೆಮಿಫೈನಲ್‌ನಲ್ಲಿ ಭಾರತವನ್ನು 10 ವಿಕೆಟ್‌ಗಳಿಂದ ಸೋಲಿಸಿತ್ತು. ಆ ಸೋಲಿನ ಸೇಡು ತೀರಿಸಿಕೊಳ್ಳಲು ರೋಹಿತ್ ಶರ್ಮಾ ಮುಂದಾಗಿದ್ದಾರೆ.


COMMERCIAL BREAK
SCROLL TO CONTINUE READING

ಟಿ20 ವಿಶ್ವಕಪ್‌ 2022 ರ ಸೆಮಿಫೈನಲ್‌ನಲ್ಲಿ 10 ವಿಕೆಟ್‌ಗಳ ಹೀನಾಯ ಸೋಲಿನ ನಂತರ ಭಾರತ ತನ್ನ ಅಗ್ರ ಕ್ರಮಾಂಕದಲ್ಲಿ ಬದಲಾವಣೆ ಮಾಡಿದೆ. ಗಯಾನಾದಲ್ಲಿ ಇಲ್ಲಿಯವರೆಗೆ ಸ್ಪಿನ್ನರ್‌ಗಳಿಗೆ ಪಿಚ್‌ ಸಾಕಷ್ಟು ನೆರವು ಸಿಕ್ಕಿದೆ. ಹೀಗಿರುವಾಗ ಭಾರತದ ಕುಲದೀಪ್ ಯಾದವ್ ಹಾಗೂ ಇಂಗ್ಲೆಂಡ್‌ನ ಆದಿಲ್ ರಶೀದ್ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಈ ಪಂದ್ಯಕ್ಕೆ ಮಳೆಯ ಭೀತಿ ಕೂಡ ಎದುರಾಗಿದೆ.  


ಇದನ್ನೂ ಓದಿ: IND vs ENG: ಸೆಮಿಸ್‌ಗೂ ಮುನ್ನ ಭಾರತ ತಂಡದಲ್ಲಿ ಪ್ರಮುಖ ಬದಲಾವಣೆ..! ತಂಡದಿಂದ ಹೊರಬೀಳಲಿದ್ದಾರಾ ಸ್ಟಾರ್‌ ಆಟಗಾರ..? 


ಟೀಮ್‌ ಇಂಡಿಯಾಗೆ ಮೊಹಮ್ಮದ್ ಸಿರಾಜ್ ಪುನರಾಗಮನ ಮಾಡುತ್ತಾರಾ ಎಂಬುದು ದೊಡ್ಡ ಪ್ರಶ್ನೆಯಾಗಿ ಉಳಿದಿದೆ. ಸಿರಾಜ್ ಸೇರ್ಪಡೆ ಭಾರತದ ವೇಗದ ದಾಳಿಗೆ ಇನ್ನಷ್ಟು ಬಲವನ್ನು ನೀಡಬಹುದು. ಚೆಂಡನ್ನು ಸ್ವಿಂಗ್ ಮಾಡುವುದರ ಜೊತೆಗೆ ವೇಗ ಮತ್ತು ನಿಖರತೆಯೊಂದಿಗೆ ಬೌಲ್ ಮಾಡುವ ಸಿರಾಜ್ ಸಾಮರ್ಥ್ಯವು ತಂಡದ ಗೆಲುವಿಗೆ ನೆರವಾಗಬಹುದು. ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ ಸಿರಾಜ್ 3 ಪಂದ್ಯಗಳನ್ನು ಆಡಿದ್ದು, ಕೇವಲ 1 ವಿಕೆಟ್ ಪಡೆದಿದ್ದಾರೆ. 


ಎರಡೂ ತಂಡಗಳ ಸಂಭಾವ್ಯ ಪ್ಲೇಯಿಂಗ್‌ 11 ಹೀಗಿದೆ: 


ಭಾರತ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ಅಕ್ಸರ್ ಪಟೇಲ್, ರವೀಂದ್ರ ಜಡೇಜಾ, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ.


ಇಂಗ್ಲೆಂಡ್: ಫಿಲಿಪ್ ಸಾಲ್ಟ್, ಜೋಸ್ ಬಟ್ಲರ್ (ನಾಯಕ ಮತ್ತು ವಿಕೆಟ್ ಕೀಪರ್), ಜಾನಿ ಬೈರ್‌ಸ್ಟೋವ್, ಹ್ಯಾರಿ ಬ್ರೂಕ್, ಮೊಯಿನ್ ಅಲಿ, ಲಿಯಾಮ್ ಲಿವಿಂಗ್‌ಸ್ಟೋನ್, ಸ್ಯಾಮ್ ಕರ್ರಾನ್, ಕ್ರಿಸ್ ಜೋರ್ಡಾನ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ರೀಸ್ ಟೋಪ್ಲಿ.


ಇದನ್ನೂ ಓದಿ: ಟೈಮ್ಸ್ ಸ್ಕ್ವೇರ್‌ನಲ್ಲಿ ವಿರಾಟ್‌ ಕೋಹ್ಲಿ ಪ್ರತಿಮೆ: ವಿದೇಶಕ್ಕೂ ಹಬ್ಬಿದ ಕಿಂಗ್‌ ಹವಾ..! 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.