ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ವಿಶ್ವದಾಖಲೆ ಮಾಡಿದ್ದಾರೆ. T20I ಕ್ರಿಕೆಟ್‌ನಲ್ಲಿ ಹಿಟ್‌ಮ್ಯಾನ್ ರೋಹಿತ್ ಶರ್ಮಾ ಸಿಕ್ಸರ್ ಕಿಂಗ್ ಆಗಿ ಹೊರಹೊಮ್ಮಿದ್ದಾರೆ. ನಾಗ್ಪುರದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಅವರು ಈ ದೊಡ್ಡ ಸಾಧನೆ ಮಾಡಿದ್ದಾರೆ.


COMMERCIAL BREAK
SCROLL TO CONTINUE READING

ಈ ಪಂದ್ಯವು ಒದ್ದೆಯಾದ ಪಿಚ್ ನಿಂದಾಗಿ ಕೇವಲ 8-8 ಓವರ್‌ಗಳಿಗೆ ಸೀಮಿತವಾಗಿತ್ತು. ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ರೋಹಿತ್ ಮೊದಲ ಸಿಕ್ಸರ್ ಬಾರಿಸಿದ ತಕ್ಷಣ ಈ ವಿಶ್ವ ದಾಖಲೆ ಮಾಡಿದ್ದಾರೆ.  


ಇದನ್ನೂ ಓದಿ: IND vs AUS 2nd T20I: ಆಸ್ಟ್ರೇಲಿಯಾ ಬಗ್ಗುಬಡಿದ ಭಾರತ: ಆಸೀಸ್ ವಿರುದ್ಧ ಟೀಂ ಇಂಡಿಯಾಗೆ ಭರ್ಜರಿ ಜಯ


ರೋಹಿತ್ ಶರ್ಮಾ ಆಸ್ಟ್ರೇಲಿಯಾ ವಿರುದ್ಧದ ಮೊದಲ ಓವರ್‌ನ ಮೂರನೇ ಎಸೆತದಲ್ಲಿ ಮೊದಲ ಸಿಕ್ಸರ್ ಬಾರಿಸಿದರು. ಅಂತರರಾಷ್ಟ್ರೀಯ ಕ್ರಿಕೆಟ್‌ನ ಕಡಿಮೆ ಸ್ವರೂಪದಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಬ್ಯಾಟ್ಸ್‌ಮನ್ ಎನಿಸಿಕೊಂಡರು.


ಈ ವಿಷಯದಲ್ಲಿ ಅವರು ನ್ಯೂಜಿಲೆಂಡ್‌ನ ಆರಂಭಿಕ ಬ್ಯಾಟ್ಸ್‌ಮನ್ ಮಾರ್ಟಿನ್ ಗಪ್ಟಿಲ್ ಅವರ ದಾಖಲೆಯನ್ನು ಮುರಿದು ನೂತನ ದಾಖಲೆಯನ್ನು ನಿರ್ಮಿಸಿದ್ದಾರೆ. ಮಾರ್ಟಿನ್ ಗುಪ್ಟಿಲ್ ಅವರ ಹೆಸರಿಗೆ 172 ಸಿಕ್ಸರ್ ಗಳು ಸೇರಿವೆ. ಆದರೆ ರೋಹಿತ್ ಶರ್ಮಾ ಆಸ್ಟ್ರೇಲಿಯಾ ವಿರುದ್ಧ ಸಿಕ್ಸರ್ ಬಾರಿಸುವ ಮೂಲಕ T20I ಕ್ರಿಕೆಟ್‌ನಲ್ಲಿ ಒಟ್ಟು 173 ಸಿಕ್ಸರ್ ಗಳನ್ನು ಸಿಡಿಸಿದ್ದಾರೆ.


T20I ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ರೋಹಿತ್ ಈಗ ನಂಬರ್ ಒನ್ ಸ್ಥಾನ ಪಡೆದುಕೊಂಡಿದ್ದಾರೆ ಮಾರ್ಟಿನ್ ಗಪ್ಟಿಲ್ ಎರಡನೇ ಮತ್ತು ಕ್ರಿಸ್ ಗೇಲ್ ಮೂರನೇ ಸ್ಥಾನದಲ್ಲಿದ್ದಾರೆ.


79 ಪಂದ್ಯಗಳಲ್ಲಿ 124 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಅದೇ ಸಮಯದಲ್ಲಿ, ಈ ಸ್ವರೂಪದಲ್ಲಿ 120 ಸಿಕ್ಸರ್‌ಗಳನ್ನು ಹೊಡೆದ ಇಂಗ್ಲೆಂಡ್‌ನ ಮಾಜಿ ನಾಯಕ ಇಯಾನ್ ಮಾರ್ಗನ್ ಅವರ ಹೆಸರು ನಾಲ್ಕನೇ ಸ್ಥಾನದಲ್ಲಿದೆ. ಇವರಲ್ಲದೆ ಆಸ್ಟ್ರೇಲಿಯಾ ತಂಡದ ನಾಯಕ ಆ್ಯರನ್ ಫಿಂಚ್ 118 ಸಿಕ್ಸರ್‌ಗಳೊಂದಿಗೆ ಐದನೇ ಸ್ಥಾನದಲ್ಲಿದ್ದಾರೆ.


ಈ ಟಿ20 ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್‌ಗಳ ಬಗ್ಗೆ ನಾವು ಮಾತನಾಡಿದರೆ, ರೋಹಿತ್ ಶರ್ಮಾ ಈ ವಿಷಯದಲ್ಲೂ ರಾಜನಾಗಿ ಉಳಿದುಕೊಂಡಿದ್ದಾರೆ. 


ಇದನ್ನೂ ಓದಿ: Legends League 2022: ಭಿಲ್ವಾರ ಕಿಂಗ್ಸ್- ಇಂಡಿಯಾ ಕ್ಯಾಪಿಟಲ್ಸ್ ನಡುವಿನ ಪಂದ್ಯದಲ್ಲಿ ಗೆಲುವು ಈ ತಂಡಕ್ಕೆ ಪಕ್ಕಾ!


T20I ಕ್ರಿಕೆಟ್‌ನಲ್ಲಿ 3600 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಪುರುಷರ ಕ್ರಿಕೆಟ್‌ನಲ್ಲಿ 3600 ರನ್‌ಗಳನ್ನು ಗಳಿಸಲು ಯಾವುದೇ ಕ್ರಿಕೆಟಿಗರಿಗೆ ಸಾಧ್ಯವಾಗಿಲ್ಲ. ವಿರಾಟ್ ಕೊಹ್ಲಿ ಇಲ್ಲಿಯವರೆಗೆ 3586 ರನ್ ಗಳಿಸಿದ್ದಾರೆ. ಈ ಇಬ್ಬರು ಬ್ಯಾಟ್ಸ್‌ಮನ್‌ಗಳ ನಡುವೆ ಬಹಳ ಸಮಯದಿಂದ ಪೈಪೋಟಿ ನಡೆಯುತ್ತಿದ್ದು, ಇದರಲ್ಲಿ ಮಾರ್ಟಿನ್ ಗಪ್ಟಿಲ್ (3497) ಅವರ ಹೆಸರೂ ಇದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.