ಹಿಟ್’ಮ್ಯಾನ್’ ಭರ್ಜರಿ ಶತಕಕ್ಕೆ ಸ್ಟೀವ್ ಸ್ಮಿತ್ ದಾಖಲೆ ಉಡೀಸ್! ವಿಂಡೀಸ್ ನೆಲದಲ್ಲಿ Team India ನಾಯಕನಿಂದ ಇತಿಹಾಸ ಸೃಷ್ಟಿ

IND vs WI, Rohit Sharma Century: ವೆಸ್ಟ್ ಇಂಡೀಸ್ ವಿರುದ್ಧ ಡೊಮಿನಿಕಾದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ ಶತಕ ಸಿಡಿಸುವ ಮೂಲಕ ಸ್ಟೀವ್ ಸ್ಮಿತ್ ಅವರ ಶ್ರೇಷ್ಠ ದಾಖಲೆಯನ್ನು ಸರಿಗಟ್ಟಿದ್ದಾರೆ.

Written by - Bhavishya Shetty | Last Updated : Jul 14, 2023, 08:01 AM IST
    • ಡೊಮಿನಿಕಾದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಶತಕ ಬಾರಿಸಿದ ರೋಹಿತ್ ಶರ್ಮಾ
    • ಟೆಸ್ಟ್ ವೃತ್ತಿಜೀವನದ 10 ನೇ ಶತಕವನ್ನು ಬಾರಿಸುವ ಮೂಲಕ ಅದ್ಭುತ ಸೃಷ್ಟಿಸಿದ್ದಾರೆ.
    • ಈ ಇನ್ನಿಂಗ್ಸ್‌ ನಲ್ಲಿ 10 ಬೌಂಡರಿ ಮತ್ತು 2 ಸಿಕ್ಸರ್‌ಗಳು ಸೇರಿವೆ.
ಹಿಟ್’ಮ್ಯಾನ್’ ಭರ್ಜರಿ ಶತಕಕ್ಕೆ ಸ್ಟೀವ್ ಸ್ಮಿತ್ ದಾಖಲೆ ಉಡೀಸ್! ವಿಂಡೀಸ್ ನೆಲದಲ್ಲಿ Team India ನಾಯಕನಿಂದ ಇತಿಹಾಸ ಸೃಷ್ಟಿ title=
Rohit Sharma

IND vs WI, Rohit Sharma Century: ಟೀಂ ಇಂಡಿಯಾದ ನಾಯಕ 'ಹಿಟ್‌ಮ್ಯಾನ್' ರೋಹಿತ್ ಶರ್ಮಾ ವೆಸ್ಟ್ ಇಂಡೀಸ್ ವಿರುದ್ಧ ಡೊಮಿನಿಕಾದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಶತಕ ಬಾರಿಸುವ ಮೂಲಕ ಇತಿಹಾಸವನ್ನು ಸೃಷ್ಟಿಸಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧ ಡೊಮಿನಿಕಾದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ ನಲ್ಲಿ ರೋಹಿತ್ ಶರ್ಮಾ ತಮ್ಮ ಟೆಸ್ಟ್ ವೃತ್ತಿಜೀವನದ 10 ನೇ ಶತಕವನ್ನು ಬಾರಿಸುವ ಮೂಲಕ ಅದ್ಭುತ ಸೃಷ್ಟಿಸಿದ್ದಾರೆ. ರೋಹಿತ್ ಶರ್ಮಾ ತಮ್ಮ ಇನ್ನಿಂಗ್ಸ್‌ ನಲ್ಲಿ 221 ಎಸೆತಗಳಲ್ಲಿ 103 ರನ್ ಗಳಿಸಿದ್ದರು. ಈ ಇನ್ನಿಂಗ್ಸ್‌ ನಲ್ಲಿ 10 ಬೌಂಡರಿ ಮತ್ತು 2 ಸಿಕ್ಸರ್‌ಗಳು ಸೇರಿವೆ.

ಇದನ್ನೂ ಓದಿ: ಗವಾಸ್ಕರ್, ಸೆಹ್ವಾಗ್ ಕೂಡ ಮಾಡಲು ಸಾಧ್ಯವಾಗದ ಆ ವಿಶೇಷ ದಾಖಲೆ ಬರೆದ ಜೈಸ್ವಾಲ್!

ವೆಸ್ಟ್ ಇಂಡೀಸ್ ವಿರುದ್ಧ ಡೊಮಿನಿಕಾದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ ಶತಕ ಸಿಡಿಸುವ ಮೂಲಕ ಸ್ಟೀವ್ ಸ್ಮಿತ್ ಅವರ ಶ್ರೇಷ್ಠ ದಾಖಲೆಯನ್ನು ಸರಿಗಟ್ಟಿದ್ದಾರೆ. ಟೀಂ ಇಂಡಿಯಾ ನಾಯಕ 'ಹಿಟ್‌ಮ್ಯಾನ್' ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್‌ ನ ಎಲ್ಲಾ ಮೂರು ಮಾದರಿಗಳಲ್ಲಿ (ಟೆಸ್ಟ್, ಏಕದಿನ ಮತ್ತು ಟಿ20) 44 ಶತಕಗಳನ್ನು ಪೂರ್ಣಗೊಳಿಸಿದ್ದಾರೆ. ಈ ಮೂಲಕ ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್ ಸ್ಟೀವ್ ಸ್ಮಿತ್ ಅವರ ಅಂತರಾಷ್ಟ್ರೀಯ ಕ್ರಿಕೆಟ್‌ ನಲ್ಲಿ 44 ಶತಕಗಳ ದಾಖಲೆಯನ್ನು ಸರಿಗಟ್ಟಿದ್ದಾರೆ

ರೋಹಿತ್ ಶರ್ಮಾ 5 ತಿಂಗಳ ನಂತರ ಟೆಸ್ಟ್ ಕ್ರಿಕೆಟ್‌ ನಲ್ಲಿ ಶತಕ ಬಾರಿಸಿದ್ದಾರೆ. ಇದಕ್ಕೂ ಮೊದಲು, ಫೆಬ್ರವರಿ 2023 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್ ಗವಾಸ್ಕರ್ ಸರಣಿ 2023 ರಲ್ಲಿ ನಾಗ್ಪುರ ಟೆಸ್ಟ್‌ ನಲ್ಲಿ ಶತಕ ಗಳಿಸಿದ್ದರು.

ಡೊಮಿನಿಕಾದಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಶತಕವನ್ನು ಬಾರಿಸಿ, ಕಳಪೆ ಫಾರ್ಮ್’ನಿಂದ ಉತ್ತಮ ಫಾರ್ಮ್ ಗೆ ಮರಳಿದ್ದಾರೆ. ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ ನಲ್ಲಿ 3500 ರನ್ ಪೂರೈಸಿದ್ದಾರೆ. ಅಷ್ಟೇ ಅಲ್ಲದೆ, ಅಂತಾರಾಷ್ಟ್ರೀಯ ಕ್ರಿಕೆಟ್‌ ನಲ್ಲಿ 103ನೇ ಬಾರಿ 50 ಕ್ಕಿಂತ ಹೆಚ್ಚು ರನ್ ಗಳಿಸಿದ ಖ್ಯಾತಿಗೆ ಪಾತ್ರವಾಗಿದ್ದಾರೆ. ಇನ್ನು ರೋಹಿತ್ ಶರ್ಮಾ ಈ ಸಾಧನೆ ಮಾಡಿದ ಎರಡನೇ ಭಾರತೀಯ ಎನಿಸಿಕೊಂಡರು. ರೋಹಿತ್ ಶರ್ಮಾ ಮೊದಲು, ಸಚಿನ್ ತೆಂಡೂಲ್ಕರ್ 120 ಬಾರಿ 50 ಪ್ಲಸ್ ಸ್ಕೋರ್ ಗಳಿಸಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕಗಳನ್ನು ಬಾರಿಸಿದ ಸಕ್ರಿಯ ಬ್ಯಾಟ್ಸ್‌ಮನ್ಸ್ ಪಟ್ಟಿ ಹೀಗಿದೆ:

1. ವಿರಾಟ್ ಕೊಹ್ಲಿ (ಭಾರತ) - 75 ಶತಕಗಳು

2. ಜೋ ರೂಟ್ (ಇಂಗ್ಲೆಂಡ್) - 46 ಶತಕಗಳು

3. ಡೇವಿಡ್ ವಾರ್ನರ್ (ಆಸ್ಟ್ರೇಲಿಯಾ) - 45 ಶತಕಗಳು

4. ಸ್ಟೀವ್ ಸ್ಮಿತ್ (ಆಸ್ಟ್ರೇಲಿಯಾ) - 44 ಶತಕಗಳು

5. ರೋಹಿತ್ ಶರ್ಮಾ (ಭಾರತ) - 44 ಶತಕಗಳು

ಇದನ್ನೂ ಓದಿ: ಈ ರಾಶಿಯವರ ಕೈಹಿಡಿದು ಮುನ್ನಡೆಸುವನು ಬುಧದೇವ: ಹಣದ ಮಳೆ ಗ್ಯಾರಂಟಿ-ಹೆಜ್ಜೆಹೆಜ್ಜೆಗೂ ಯಶಸ್ಸು ಬೆನ್ನೇರಲಿದೆ!

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News