Team India In Final: ಎರಡನೇ ಸೆಮಿಫೈನಲ್‌’ನಲ್ಲಿ ಇಂಗ್ಲೆಂಡ್ ಅನ್ನು 68 ರನ್‌’ಗಳಿಂದ ಸೋಲಿಸುವ ಮೂಲಕ ಟೀಂ ಇಂಡಿಯಾ 10 ವರ್ಷಗಳ ನಂತರ 2024ರ ಟಿ20 ವಿಶ್ವಕಪ್ 2024 ರ ಫೈನಲ್‌ಗೆ ಪ್ರವೇಶಿಸಿದೆ. ಇದಕ್ಕೂ ಮುನ್ನ 2022 ರ ಟಿ20 ವಿಶ್ವಕಪ್‌’ನಲ್ಲಿ 2 ವರ್ಷಗಳ ಹಿಂದೆ ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್ ಸೋಲಿಗೆ ಭಾರತವೂ ಸೇಡು ತೀರಿಸಿಕೊಂಡಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ದರ್ಶನ್ ಒಳ್ಳೆಯವರು, ಅವರು ನಿರಪರಾಧಿಯಾಗಿ ಹೊರಬರುತ್ತಾರೆ..! ನಟ ನಾಗ ಶೌರ್ಯ


ಟೀಂ ಇಂಡಿಯಾದ ಈ ಗೆಲುವಿನಲ್ಲಿ ನಾಯಕ ರೋಹಿತ್ ಶರ್ಮಾ ಪ್ರಮುಖ ಪಾತ್ರ ವಹಿಸಿದ್ದಾರೆ. ರೋಹಿತ್ ಶರ್ಮಾ ತಮ್ಮ ನಾಯಕತ್ವ ಮತ್ತು ಅತ್ಯುತ್ತಮ ಬ್ಯಾಟಿಂಗ್‌’ನಿಂದ ಎಲ್ಲರ ಮನಗೆದ್ದಿರುವುದು ಸುಳ್ಳಲ್ಲ. ಈ ಪಂದ್ಯದಲ್ಲಿ ರೋಹಿತ್ ಶರ್ಮಾ 39 ಎಸೆತಗಳಲ್ಲಿ 57 ರನ್ ಗಳ ಮಹತ್ವದ ಇನ್ನಿಂಗ್ಸ್ ಆಡಿದ್ದು ಟೀಂ ಇಂಡಿಯಾ ಸ್ಕೋರ್ ಅನ್ನು 171 ರನ್’ಗಳಿಗೆ ಕೊಂಡೊಯ್ದರು. ರೋಹಿತ್ ಶರ್ಮಾ ಅವರ ಇನ್ನಿಂಗ್ಸ್‌ನಲ್ಲಿ 6 ಬೌಂಡರಿ ಮತ್ತು 2 ಸಿಕ್ಸರ್‌ಗಳು ಸೇರಿದ್ದವು.


2024 ರ T20 ವಿಶ್ವಕಪ್‌ನ ಫೈನಲ್‌’ನಲ್ಲಿ ಟೀಮ್ ಇಂಡಿಯಾ ಈಗ ದಕ್ಷಿಣ ಆಫ್ರಿಕಾವನ್ನು ಎದುರಿಸಲಿದೆ. ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ T20 ವಿಶ್ವಕಪ್ 2024 ರ ಅಂತಿಮ ಪಂದ್ಯವು ಜೂನ್ 29 ರಂದು ಬಾರ್ಬಡೋಸ್‌ನಲ್ಲಿ ನಡೆಯಲಿದೆ.


ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಎರಡನೇ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ಅನ್ನು ಸೋಲಿಸಿ T20 ವಿಶ್ವಕಪ್ 2024 ರ ಫೈನಲ್‌’ಗೆ ತಲುಪುತ್ತಿದ್ದಂತೆ ಕಣ್ಣೀರು ಸುರಿಸಿದ್ದಾರೆ. ಡ್ರೆಸ್ಸಿಂಗ್ ರೂಮಿನ ಹೊರಗೆ ಕುರ್ಚಿಯ ಮೇಲೆ ಕುಳಿತು ಅಳುತ್ತಿರುವುದು ಕಂಡುಬಂತು. ರೋಹಿತ್ ಅಳುವುದನ್ನು ನೋಡಿದ ವಿರಾಟ್ ಕೊಹ್ಲಿ ನಗಿಸಲು ಪ್ರಯತ್ನಿಸಿದರು. ಈ ವೇಳೆ ರೋಹಿತ್ ಶರ್ಮಾ ಮುಖ ಮರೆಸಿಕೊಂಡರು. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.


ಮಳೆಯಿಂದ ವಿಶ್ವಕಪ್ ಫೈನಲ್ ಪಂದ್ಯ ರದ್ದಾದರೆ ಟ್ರೋಫಿ ಗೆಲ್ಲುವ ತಂಡ ಯಾವುದು?


ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ನಡುವಿನ ಈ ಬಾಂಧವ್ಯವನ್ನು ಅಭಿಮಾನಿಗಳು ಕೊಂಡಾಡುತ್ತಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ