T20 ಅಂತರಾಷ್ಟ್ರೀಯ ಪಂದ್ಯಗಳಲ್ಲಿ ವಿಶ್ವದಾಖಲೆ ನಿರ್ಮಿಸಿದ ರೋಹಿತ್ ಶರ್ಮಾ
ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧದ ಮೂರನೇ T20 ಅಂತರಾಷ್ಟ್ರೀಯ ಪಂದ್ಯದಲ್ಲಿ ರೋಹಿತ್ ಶರ್ಮಾ ಅವರು ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ.ಹೌದು ಅದೇನಪ್ಪಾ ಅಂದರೆ T20 ಅಂತರಾಷ್ಟ್ರೀಯ ಪಂದ್ಯದಲ್ಲಿ ಅತಿ ಹೆಚ್ಚು ಸಿಕ್ಸರ್ ಗಳಿಸಿದ ಎರಡನೇ ಆಟಗಾರ ಎನ್ನುವ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ.
ನವದೆಹಲಿ: ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧದ ಮೂರನೇ T20 ಅಂತರಾಷ್ಟ್ರೀಯ ಪಂದ್ಯದಲ್ಲಿ ರೋಹಿತ್ ಶರ್ಮಾ ಅವರು ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ.ಹೌದು ಅದೇನಪ್ಪಾ ಅಂದರೆ T20 ಅಂತರಾಷ್ಟ್ರೀಯ ಪಂದ್ಯದಲ್ಲಿ ಅತಿ ಹೆಚ್ಚು ಸಿಕ್ಸರ್ ಗಳಿಸಿದ ಎರಡನೇ ಆಟಗಾರ ಎನ್ನುವ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ.
ಇದನ್ನೂ ಓದಿ: ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ, ಜನಶಕ್ತಿಯ ಎದುರು ಆತ ಮಣಿಯಲೇಬೇಕು- ಸಿದ್ಧರಾಮಯ್ಯ
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ರೋಹಿತ್ ಶರ್ಮಾ ಭರ್ಜರಿ ಬ್ಯಾಟಿಂಗ್ ಮಾಡಿದರು.ಕೇವಲ 31 ಎಸೆತಗಳಲ್ಲಿ ಬೌಂಡರಿ ಹಾಗೂ ಮೂರು ಸಿಕ್ಸರ್ ಗಳ ನೆರವಿನಿಂದಾಗಿ 56 ರನ್ ಗಳನ್ನು ಗಳಿಸಿದರು.ಇವರಿಗೆ ಇಶಾನ್ ಕಿಶಾನ್ 29 ರನ್ ಗಳಿಸುವ ಮೂಲಕ ಸಾಥ್ ನೀಡಿದರು.ಇದರಿಂದಾಗಿ ಭಾರತ ತಂಡವು 20 ಓವರ್ ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 184 ರನ್ ಗಳಿಸುವಲ್ಲಿ ಯಶಸ್ವಿಯಾಯಿತು. ಇದನ್ನು ಬೆನ್ನತ್ತಿದ್ದ ನ್ಯೂಜಿಲೆಂಡ್ ತಂಡವು ಕೇವಲ 111 ರನ್ ಗಳಿಗೆ ಸರ್ವಪತನವನ್ನು ಕಂಡಿತು.
ಇದನ್ನೂ ಓದಿ: RSS Chief: '75 ವರ್ಷಗಳು ನಾವು ಸರಿಯಾದ ದಾರಿಯನ್ನು ಅನುಸರಿಸಿಲ್ಲ, ಹೀಗಾಗಿ ಅಭಿವೃದ್ಧಿ ನಿಂತುಹೋಗಿದೆ'
ಈ ಪಂದ್ಯದಲ್ಲಿ ರೋಹಿತ್ ಶರ್ಮಾ 150 ಸಿಕ್ಸರ್ ಗಳ ಮೈಲುಗಲ್ಲನ್ನು ತಲುಪುವ ಮೂಲಕ ಈ ಸಾಧನೆ ಮಾಡಿದ ವಿಶ್ವದ ಎರಡನೇ ಆಟಗಾರ ಎನ್ನುವ ಹೆಗ್ಗಳಿಕೆಗೆ ಪಾತ್ರರಾದರು.ನ್ಯೂಜಿಲೆಂಡ್‌ನ ಆರಂಭಿಕ ಆಟಗಾರ ಮಾರ್ಟಿನ್ ಗಪ್ಟಿಲ್ 161 ಸಿಕ್ಸರ್‌ಗಳೊಂದಿಗೆ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.ಇನ್ನೂ ವೆಸ್ಟ್ ಇಂಡೀಸ್‌ನ ಕ್ರಿಸ್ ಗೇಲ್ 124 ಗರಿಷ್ಠ ಸ್ಕೋರ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.