ರೋಹಿತ್ ಶರ್ಮಾ ಹೆಸರಿನಲ್ಲಿದೆ ಅದೊಂದು ವಿಶ್ವದಾಖಲೆ: ವಿರಾಟ್‌ ಸೇರಿ ಜಗತ್ತಿನ ಯಾವೊಬ್ಬ ಶ್ರೇಷ್ಠ ಕ್ರಿಕೆಟಿಗನಿಂದಲೂ ಮುಟ್ಟೋದಕ್ಕೂ ಸಾಧ್ಯವಾಗದ ದಾಖಲೆಯದು!

Rohit Sharma Double Century: 37ರ ಹರೆಯದ ರೋಹಿತ್ ಶರ್ಮಾ ಪ್ರಸಕ್ತ ಐಸಿಸಿ ಏಕದಿನ ರ್ಯಾಂಕಿಂಗ್‌ನಲ್ಲಿ ವಿಶ್ವದ ನಂ.2 ಬ್ಯಾಟ್ಸ್‌ಮನ್ ಆಗಿದ್ದಾರೆ. ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ ಮೂರು ದ್ವಿಶತಕ ಸಿಡಿಸಿದ ವಿಶ್ವದಾಖಲೆ ಹೊಂದಿರುವ ರೋಹಿತ್ ಶರ್ಮಾ ಅವರನ್ನು ವಿಶ್ವದ ಅತ್ಯುತ್ತಮ ಏಕದಿನ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿದೆ.

Written by - Bhavishya Shetty | Last Updated : Oct 7, 2024, 04:33 PM IST
    • ರೋಹಿತ್ ಶರ್ಮಾ ಹೆಸರಿನಲ್ಲಿರುವ ಒಂದು ವಿಶ್ವದಾಖಲೆ
    • ವಿರಾಟ್ ಕೊಹ್ಲಿ, ಕೇನ್ ವಿಲಿಯಮ್ಸನ್, ಸ್ಟೀವ್ ಸ್ಮಿತ್ ಮತ್ತು ಜೋ ರೂಟ್‌ ಕೂಡ ವಿಫಲ
    • ಏಕದಿನ ರ್ಯಾಂಕಿಂಗ್‌ನಲ್ಲಿ ವಿಶ್ವದ ನಂ.2 ಬ್ಯಾಟ್ಸ್‌ಮನ್ ಆಗಿದ್ದಾರೆ ರೋಹಿತ್
ರೋಹಿತ್ ಶರ್ಮಾ ಹೆಸರಿನಲ್ಲಿದೆ ಅದೊಂದು ವಿಶ್ವದಾಖಲೆ: ವಿರಾಟ್‌ ಸೇರಿ ಜಗತ್ತಿನ ಯಾವೊಬ್ಬ ಶ್ರೇಷ್ಠ ಕ್ರಿಕೆಟಿಗನಿಂದಲೂ ಮುಟ್ಟೋದಕ್ಕೂ ಸಾಧ್ಯವಾಗದ ದಾಖಲೆಯದು! title=
Rohit Sharma

Rohit Sharma: ರೋಹಿತ್ ಶರ್ಮಾ ಹೆಸರಿನಲ್ಲಿರುವ ಒಂದು ವಿಶ್ವದಾಖಲೆಯನ್ನು ವಿಶ್ವದ ಯಾವುದೇ ಬ್ಯಾಟ್ಸ್‌ಮನ್‌ಗಳು ಬ್ರೇಕ್‌ ಮಾಡೋಕೆ ಸಾಧ್ಯವೇ ಆಗಿಲ್ಲ. ಶ್ರೇಷ್ಠ ಕ್ರಿಕೆಟಿಗರಾದ ವಿರಾಟ್ ಕೊಹ್ಲಿ, ಕೇನ್ ವಿಲಿಯಮ್ಸನ್, ಸ್ಟೀವ್ ಸ್ಮಿತ್ ಮತ್ತು ಜೋ ರೂಟ್‌ ಕೂಡ ವಿಫಲರಾಗಿದ್ದಾರೆ. ‘ಹಿಟ್‌ಮ್ಯಾನ್’ ರೋಹಿತ್ ಶರ್ಮಾ ರೂಪದಲ್ಲಿ ಭಾರತ ಕ್ರಿಕೆಟ್ ತಂಡ ದೊಡ್ಡ ಅಸ್ತ್ರವನ್ನು ಹೊಂದಿದೆ ಎಂದೇ ಹೇಳಬಹುದು.

ಇದನ್ನೂ ಓದಿ:  ಭಾರತದ ದಿಗ್ಗಜ ಕೋಚ್ ರಾಹುಲ್ ದ್ರಾವಿಡ್ ಪುತ್ರಿ ಜನಪ್ರಿಯ ನಟಿ: ದಕ್ಷಿಣ ಭಾರತದ ಸಿನಿರಂಗದಲ್ಲಿ ಮಿಂಚುತ್ತಿರುವ ಸುಂದರಿ... ಯಾರೆಂದು ಗೊತ್ತಾಯ್ತಾ?

37ರ ಹರೆಯದ ರೋಹಿತ್ ಶರ್ಮಾ ಪ್ರಸಕ್ತ ಐಸಿಸಿ ಏಕದಿನ ರ್ಯಾಂಕಿಂಗ್‌ನಲ್ಲಿ ವಿಶ್ವದ ನಂ.2 ಬ್ಯಾಟ್ಸ್‌ಮನ್ ಆಗಿದ್ದಾರೆ. ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ ಮೂರು ದ್ವಿಶತಕ ಸಿಡಿಸಿದ ವಿಶ್ವದಾಖಲೆ ಹೊಂದಿರುವ ರೋಹಿತ್ ಶರ್ಮಾ ಅವರನ್ನು ವಿಶ್ವದ ಅತ್ಯುತ್ತಮ ಏಕದಿನ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿದೆ. ಅಷ್ಟೇ ಅಲ್ಲದೆ, ಈ ಸಾಧನೆ ಮಾಡಿದ ವಿಶ್ವದ ಏಕೈಕ ಬ್ಯಾಟ್ಸ್‌ಮನ್ ಇವರೇ.

ರೋಹಿತ್ ಶರ್ಮಾ ಅವರ ಈ ವಿಶ್ವ ದಾಖಲೆಯನ್ನು ಮುರಿಯುವುದು ಬಹುತೇಕ ಅಸಾಧ್ಯ. ಅಂದಹಾಗೆ ರೋಹಿತ್‌ ಈ ಹಿಂದೆ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುತ್ತಿದ್ದರು. ಆದರೆ, ಓಪನಿಂಗ್‌ನಲ್ಲಿ ಅವಕಾಶ ಸಿಕ್ಕ ತಕ್ಷಣ ಅವರ ಅದೃಷ್ಟವೇ ಬದಲಾಯಿತು.

ಇದನ್ನೂ ಓದಿ: BBK 11: “ಬಿಗ್ ಬಾಸ್..." ಅಂತಾ ಪ್ರತಿದಿನ ಕಾರ್ಯಕ್ರಮದಲ್ಲಿ ಕೇಳಿ ಬರುವ ಹಿನ್ನಲೆ ಧ್ವನಿ ಯಾರದ್ದು ಗೊತ್ತಾ? ಪ್ರಖ್ಯಾತ ನಟನೇ ಆ ಗತ್ತಿನ ಧ್ವನಿಯ ʼಸರದಾರʼ

ರೋಹಿತ್ ಶರ್ಮಾ ಏಕದಿನ ದಾಖಲೆ:
ರೋಹಿತ್ ಶರ್ಮಾ ಇದುವರೆಗೆ ಭಾರತದ ಪರ 265 ODI ಪಂದ್ಯಗಳಲ್ಲಿ 49.16 ಸರಾಸರಿಯಲ್ಲಿ 10866 ರನ್ ಗಳಿಸಿದ್ದಾರೆ. ಇದರಲ್ಲಿ 3 ದ್ವಿಶತಕ, 31 ಶತಕ ಮತ್ತು 57 ಅರ್ಧ ಶತಕಗಳು ಸೇರಿವೆ. ಈ ಅವಧಿಯಲ್ಲಿ ಅವರ ಅತ್ಯುತ್ತಮ ಸ್ಕೋರ್ 264 ರನ್ ಆಗಿತ್ತು. ರೋಹಿತ್ ಅವರ ಈ ಸ್ಕೋರ್ ಏಕದಿನ ಕ್ರಿಕೆಟ್‌ನಲ್ಲಿ ವಿಶ್ವದಾಖಲೆಯಾಗಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News