Rohit Sharma mistake during the toss: ಭಾರತ ತಂಡ ಪ್ರಸ್ತುತ ನ್ಯೂಜಿಲೆಂಡ್ ವಿರುದ್ಧ ಎರಡನೇ ಏಕದಿನ ಪಂದ್ಯವನ್ನು ಆಡುತ್ತಿದೆ. ಈ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದ ತಕ್ಷಣ ದೊಡ್ಡ ತಪ್ಪು ಮಾಡಿದ್ದಾರೆ. ಇದರ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಗಜನಿ ಜೊತೆ ಹೋಲಿಕೆ ಮಾಡುತ್ತಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: RCB Twitter Account Hacked: ಆರ್‌ಸಿಬಿ ಅಧಿಕೃತ ಟ್ವಿಟರ್‌ ಖಾತೆ ಹ್ಯಾಕ್‌!?


ಟಾಸ್ ವೇಳೆ ಈ ದೊಡ್ಡ ಪ್ರಮಾದ:


ನ್ಯೂಜಿಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ, ಭಾರತೀಯ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಆದರೆ ಟಾಸ್ ನಂತರ ರೋಹಿತ್ ಸಂಪೂರ್ಣವಾಗಿ ಗೊಂದಲಕ್ಕೊಳಗಾದರು. ಟಾಸ್ ಗೆದ್ದ ನಂತರ ಅವರು ತೆಗೆದುಕೊಳ್ಳಬೇಕಾದ ನಿರ್ಧಾರವನ್ನು ಏನು ಎಂಬುದನ್ನು ಅವರು ಮರೆತಿದ್ದರು. ಅವರು ಮೊದಲು ಬೌಲಿಂಗ್ ಮಾಡಬೇಕೇ ಅಥವಾ ಬ್ಯಾಟಿಂಗ್ ಮಾಡಬೇಕೇ ಎಂದು ಹೇಳಲು ಸುಮಾರು 20 ಸೆಕೆಂಡುಗಳ ಕಾಲ ಯೋಚಿಸಿದ್ದರು. ಬಳಿಕ ಸಿಟ್ಟಿಗೆದ್ದು ತಲೆ ಕೆರೆದುಕೊಂಡಾಗ ಅಲ್ಲಿದ್ದವರೆಲ್ಲ ನಗತೊಡಗಿದರು. ನಂತರ ಕೊನೆಯಲ್ಲಿ ಅವರು ಬೌಲಿಂಗ್ ಮಾಡಲು ಬಯಸುತ್ತೇವೆ ಎಂದು ಹೇಳಿದರು.


ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್:


ರೋಹಿತ್ ಶರ್ಮಾ ಮಾಡಿದ ತಪ್ಪಿನಿಂದಾಗಿ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಗಜನಿ ಸಿನಿಮಾದ ಅಮೀರ್ ಖಾನ್ ಜೊತೆ ಅವರು ಹೋಲಿಕೆ ಮಾಡಿ ಅಭಿಮಾನಿಗಳು ಟ್ರೋಲ್ ಮಾಡಿದ್ದಾರೆ.


ಟೀಂ ಇಂಡಿಯಾ 12 ರನ್ ಗಳ ಜಯ ಸಾಧಿಸಿತ್ತು. ಈ ಪಂದ್ಯದಲ್ಲಿ ಇದುವರೆಗೆ ಭಾರತದ ವೇಗದ ಬೌಲರ್‌ಗಳು ಪ್ರಾಬಲ್ಯ ಮೆರೆದಿದ್ದಾರೆ. ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್ ನ್ಯೂಜಿಲೆಂಡ್‌ಗೆ ಆರಂಭಿಕ ಆಘಾತಗಳನ್ನು ನೀಡಿದ್ದಾರೆ. ಸದ್ಯ ನ್ಯೂಜಿಲೆಂಡ್ ನ 5 ವಿಕೆಟ್ ಗಳನ್ನು ಕಬಳಿಸಿರುವ ಭಾರತದ ವೇಗಿಗಳು ಟೀಂ ಇಂಡಿಯಾಗೆ ಗೆಲುವು ತಂದುಕೊಡುವ ನಿರೀಕ್ಷೆಯಲ್ಲಿದ್ದಾರೆ. ಇನ್ನು ಬ್ಯಾಟಿಂಗ್ ವಿಷಯಕ್ಕೆ ಬಂದರೆ ಶುಭಮನ್ ಗಿಲ್, ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಮೇಲೆ ರನ್ ಗಳಿಸುವ ಜವಾಬ್ದಾರಿ ಇದೆ.


ಇದನ್ನೂ ಓದಿ: ಸೀಟ್​ಬೆಲ್ಟ್​ ಧರಿಸದೇ ಕಾರಿನಲ್ಲಿ ಪ್ರಯಾಣ: ಬ್ರಿಟನ್​ ಪ್ರಧಾನಿ ರಿಷಿ ಸುನಕ್‍ಗೆ ದಂಡ..!


ಐತಿಹಾಸಿಕ ದಾಖಲೆ ಬರೆಯುವತ್ತ ಟೀಂ ಇಂಡಿಯಾ:


ಈಗಾಗಲೇ ಟಿ20 ಮತ್ತು ಟೆಸ್ಟ್ ಸ್ವರೂಪದ ಐಸಿಸಿ ಶ್ರೇಯಾಂಕದಲ್ಲಿ ಅಗ್ರ ಸ್ಥಾನದಲ್ಲಿರುವ ಟೀಂ ಇಂಡಿಯಾ, ಏಕದಿನದಲ್ಲೂ ಪ್ರಾಬಲ್ಯ ಮೆರೆಯುವ ನಿರೀಕ್ಷೆ ಇಟ್ಟುಕೊಂಡಿದೆ. ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳಲ್ಲಿ ಟೀಂ ಇಂಡಿಯಾ ಗೆದ್ದರೆ, ಏಕದಿನ ಐಸಿಸಿ ಶ್ರೇಯಾಂಕದಲ್ಲಿ ಭಾರತ ಮೊದಲ ಸ್ಥಾನ ಏರಲಿದೆ.


 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.