Rohit Sharma Retirement: ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ನ (ಡಬ್ಲ್ಯುಟಿಸಿ ಫೈನಲ್) ಫೈನಲ್ ನಲ್ಲಿ ಟೀಂ ಇಂಡಿಯಾ ಸೋಲಿನ ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ವೊಂದು ತಲ್ಲಣ ಮೂಡಿಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ಪೋಸ್ಟ್ ನಲ್ಲಿ ರೋಹಿತ್ ಶರ್ಮಾ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ (ಡಬ್ಲ್ಯುಟಿಸಿ ಫೈನಲ್) ಟೀಮ್ ಇಂಡಿಯಾ ಸೋಲಿನ ನಂತರ ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ ಎಂದು ಬರೆಯಲಾಗಿದೆ. ಈ ಪೋಸ್ಟ್ ನೋಡಿದ ಅಭಿಮಾನಿಗಳು ಇದು ನಿಜವೇ ಎಂದು ಶಾಕ್ ಆಗಿದ್ದಾರೆ.
ಇದನ್ನೂ ಓದಿ: ಕ್ರಿಕೆಟ್ ಲೋಕಕ್ಕೆ ಆಘಾತ! ಎರಡು ವಿಶ್ವಕಪ್ ಗೆದ್ದು ಬೀಗಿದ್ದ ಮಹಾನ್ ಪ್ಲೇಯರ್ ದಿಢೀರ್ ನಿವೃತ್ತಿ ಘೋಷಣೆ
ಈ ಪೋಸ್ಟ್ ಬಗ್ಗೆ ದೊಡ್ಡ ಅಪ್ಡೇಟ್ ಹೊರಬಂದಿದೆ. ಈ ಪೋಸ್ಟ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ತಕ್ಷಣ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ನಲ್ಲಿ (ಡಬ್ಲ್ಯುಟಿಸಿ ಫೈನಲ್) ಟೀಮ್ ಇಂಡಿಯಾ ಸೋಲಿನ ನಂತರ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ ಎಂದು ಅಭಿಮಾನಿಗಳು ಭಾವಿಸಿದ್ದಾರೆ, ಆದರೆ ಸತ್ಯ ಬೇರೆಯೇ ಆಗಿದೆ. ಇದು ನಕಲಿ ಪೋಸ್ಟ್ ಆಗಿದ್ದು, ಇದು ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ವೈರಲ್ ಆಗುತ್ತಿದೆ.
Rohit Sharma said "Sorry to Team India fans. This is my Last Test match as a captain. Soon I'm going to Retire from the Test cricket. Thank you all pic.twitter.com/qBhd2HSUkG
— Satyam Patel (@satyam02patel) June 11, 2023
ಈ ಪೋಸ್ಟ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ @ImR0hitt45 ಖಾತೆಯೊಂದಿಗೆ ಹಂಚಿಕೊಳ್ಳಲಾಗಿದೆ, ಆದರೆ ರೋಹಿತ್ ಶರ್ಮಾ ಅವರ ಅಧಿಕೃತ ಟ್ವಿಟರ್ ಹ್ಯಾಂಡಲ್ @ImRo45 ಆಗಿದೆ. ಇದರರ್ಥ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ಗೆ ಯಾವುದೇ ನಿವೃತ್ತಿ ಘೋಷಿಸಿಲ್ಲ. ಆದರೆ ರೋಹಿತ್ ಶರ್ಮಾ ಅವರ ನಕಲಿ ಖಾತೆಯಿಂದ ಹಂಚಿಕೊಳ್ಳಲಾದ ಈ ಪೋಸ್ಟ್ ಇದ್ದಕ್ಕಿದ್ದಂತೆ ಭೀತಿಯನ್ನು ಸೃಷ್ಟಿಸಿದೆ.
ರೋಹಿತ್ ಶರ್ಮಾ ನಾಯಕತ್ವದ ಬಗ್ಗೆ ಮಾತನಾಡುವುದಾದರೆ, ಭಾರತ ಸತತ ಎರಡನೇ ಬಾರಿಗೆ ಐಸಿಸಿ ಟ್ರೋಫಿ ಗೆಲ್ಲುವ ಅವಕಾಶವನ್ನು ಕಳೆದುಕೊಂಡಿದೆ. T20 ವಿಶ್ವಕಪ್ 2022 ರ ನಂತರ, ಈಗ ಟೀಮ್ ಇಂಡಿಯಾ 2023 ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ನ ಟ್ರೋಫಿ ಗೆಲ್ಲುವ ಅವಕಾಶವನ್ನು ಕಳೆದುಕೊಂಡಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಐಸಿಸಿ ಟ್ರೋಫಿ ಗೆಲ್ಲಲಿಲ್ಲ ಎಂಬ ಕಳಪೆ ದಾಖಲೆಯನ್ನು ಟೀಂ ಇಂಡಿಯಾ ಹೊತ್ತಿದೆ.
ಇದನ್ನೂ ಓದಿ: WTC ಮುಗಿದು 24 ಗಂಟೆಯಾಗುವಷ್ಟರಲ್ಲಿ Team Indiaಗೆ ಬಿತ್ತು ದಂಡದ ಬಿಸಿ! 11 ಆಟಗಾರರ ವಿರುದ್ಧವೂ ಕ್ರಮ: ಕಾರಣ?
ರೋಹಿತ್ ಶರ್ಮಾ 26 ಏಕದಿನ ಪಂದ್ಯಗಳಲ್ಲಿ ನಾಯಕರಾಗಿ 19 ಪಂದ್ಯಗಳನ್ನು ಗೆದ್ದಿದ್ದಾರೆ. 51 ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ನಾಯಕರಾಗಿ 39 ಪಂದ್ಯಗಳ ಟ್ರೋಫಿ ತಮ್ಮದಾಗಿಸಿಕೊಂಡಿದ್ದಾರೆ. 2023 ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ನಲ್ಲಿ ಸೋಲನ್ನು ಎದುರಿಸಿದ್ದಾರೆ. ಇನ್ನು 2025 ರಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ನ ಫೈನಲ್ ಪಂದ್ಯ ನಡೆಯಲಿದೆ. ಈ ಸಂದರ್ಭದಲ್ಲಿ ರೋಹಿತ್ ಟೀಮ್ ಇಂಡಿಯಾದ ನಾಯಕರನಾಗಿರುವುದು ತುಂಬಾ ಕಷ್ಟಕರವಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ